ವಿಮೋಚನಕಾಂಡ 24:18 - ಪರಿಶುದ್ದ ಬೈಬಲ್18 ಬಳಿಕ ಮೋಶೆಯು ಮೋಡದಲ್ಲಿ ಬೆಟ್ಟದ ಮೇಲೆ ಇನ್ನೂ ಎತ್ತರಕ್ಕೆ ಹೋದನು. ಮೋಶೆಯು ಬೆಟ್ಟದಲ್ಲಿ ಹಗಲಿರುಳು ನಲವತ್ತು ದಿವಸ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಾಲ್ವತ್ತು ದಿವಸ ಹಗಲಿರುಳು ತಂಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ಹಗಲಿರುಳು ನಾಲ್ವತ್ತು ದಿವಸ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಮೋಶೆಯು ಮೇಘದ ಮಧ್ಯಕ್ಕೆ ಬಂದು ಬೆಟ್ಟವನ್ನೇರಿದನು. ಅವನು ಹಗಲಿರುಳು ನಲವತ್ತು ದಿವಸ ಪರ್ವತದ ಮೇಲಿದ್ದನು. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ.