Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:4 - ಪರಿಶುದ್ದ ಬೈಬಲ್‌

4 ಆದ್ದರಿಂದ ಮೋಶೆ ಯೆಹೋವನ ಆಜ್ಞೆಗಳನ್ನೆಲ್ಲಾ ಒಂದು ಸುರುಳಿಯಲ್ಲಿ ಬರೆದನು. ಮರುದಿನ ಮುಂಜಾನೆ, ಅವನು ಬೇಗನೆ ಎದ್ದು ಬೆಟ್ಟದ ಕೆಳಭಾಗದ ಹತ್ತಿರ, ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಂಬಗಳುಳ್ಳ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಇಸ್ರೇಲರ ಹನ್ನೆರಡು ಕುಲಗಳಿಗೆ ಒಂದೊಂದರಂತೆ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಆ ಬೆಟ್ಟದ ಬುಡದಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿ ಇಸ್ರಾಯೇಲ್ಯರ ಯೌವನಸ್ಥರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೋಶೆಯು ಯೆಹೋವ ದೇವರು ಪ್ರಕಟಪಡಿಸಿದ ಮಾತುಗಳನ್ನೆಲ್ಲಾ ಬರೆದಿಟ್ಟನು. ಅವನು ಮರುದಿನ ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಬಲಿಪೀಠವನ್ನು ಕಟ್ಟಿಸಿ, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:4
27 ತಿಳಿವುಗಳ ಹೋಲಿಕೆ  

ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು.


ಯಾಕೋಬನು ಮರುದಿನ ಮುಂಜಾನೆ ಬೇಗನೆ ಎದ್ದು, ತಾನು ಮಲಗಿಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಕಂಬವಾಗಿ ನೆಲದಲ್ಲಿ ನಿಲ್ಲಿಸಿದನು. ನಂತರ ಆ ಕಲ್ಲಿನ ಮೇಲೆ ಎಣ್ಣೆಯನ್ನು ಸುರಿದನು. ಹೀಗೆ ಅವನು ಆ ಕಲ್ಲನ್ನು ದೇವರ ನೆನಪಿಗಾಗಿ ಪ್ರತಿಷ್ಠಿಸಿದನು.


ಆ ನಗರದ ಗೋಡೆಗಳನ್ನು ಹನ್ನೆರಡು ಅಡಿಪಾಯದ ಕಲ್ಲುಗಳ ಮೇಲೆ ಕಟ್ಟಲಾಗಿತ್ತು. ಆ ಕಲ್ಲುಗಳ ಮೇಲೆ ಕುರಿಮರಿಯಾದಾತನ ಹನ್ನರೆಡು ಮಂದಿ ಅಪೊಸ್ತಲರ ಹೆಸರುಗಳನ್ನು ಬರೆಯಲಾಗಿತ್ತು.


ದೇವರು ನನಗೆ ಈ ವಿಶೇಷವಾದ ವರವನ್ನು ಕೊಟ್ಟಿದ್ದಾನೆಂಬುದನ್ನು ನಾಯಕರೆನಿಸಿಕೊಂಡಿದ್ದ ಯಾಕೋಬ, ಪೇತ್ರ, ಯೋಹಾನರು ಕಂಡುಕೊಂಡರು. ಆದ್ದರಿಂದ ಅವರು ಬಾರ್ನಬನನ್ನು ಮತ್ತು ನನ್ನನ್ನು ಸ್ವೀಕರಿಸಿಕೊಂಡರು. ಅವರು ನಮಗೆ, “ಪೌಲ ಮತ್ತು ಬಾರ್ನಬರೇ, ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ. ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ” ಎಂದು ತಿಳಿಸಿದರು.


ನನ್ನ ರಾಜ್ಯದಲ್ಲಿ ನೀವು ನನ್ನ ಸಂಗಡ ಊಟಮಾಡುವಿರಿ ಮತ್ತು ಕುಡಿಯುವಿರಿ. ನೀವು ಸಿಂಹಾಸನಗಳಲ್ಲಿ ಕುಳಿತುಕೊಂಡು ಇಸ್ರೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಆ ದಿವಸ ಸರ್ವಾಂಗಹೋಮವಾಗಿ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ ನಾನೂರು ಕುರಿಮರಿಗಳನ್ನೂ ಸಮರ್ಪಿಸಿದರು. ಎಲ್ಲಾ ಇಸ್ರೇಲರ ದೋಷ ಪರಿಹಾರಕ್ಕಾಗಿ ಕುಲಕ್ಕೆ ಒಂದರಂತೆ ಹನ್ನೆರಡು ಹೋತಗಳನ್ನು ಅರ್ಪಿಸಿದರು.


ಅಹೀಯನು ತನ್ನ ಹೊಸ ಅಂಗಿಯನ್ನು ತೆಗೆದು, ಅದನ್ನು ಹನ್ನೆರಡು ತುಂಡುಗಳನ್ನಾಗಿ ಹರಿದನು.


ಅವರು ಜೋರ್ಡನ್ ನದಿಯಿಂದ ತೆಗೆದುಕೊಂಡು ಬಂದ ಆ ಹನ್ನೆರಡು ಕಲ್ಲುಗಳನ್ನು ತಮ್ಮ ಸಂಗಡ ತೆಗೆದುಕೊಂಡು ಹೋದರು. ಯೆಹೋಶುವನು ಆ ಕಲ್ಲುಗಳನ್ನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.


“ಇಸ್ರೇಲರ ಸಂಗಡ ಮಾತಾಡಿ ಹೀಗೆ ಮಾಡಬೇಕು: ಅವರ ಕುಲಗಳ ಪ್ರತಿಯೊಬ್ಬ ಪ್ರಧಾನನಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೊಳ್ಳಬೇಕು. ಅವನವನ ಕೋಲಿನ ಮೇಲೆ ಆಯಾ ಕುಲಪ್ರಧಾನನ ಹೆಸರನ್ನು ಬರೆಯಿಸಬೇಕು.


“ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿ ರೊಟ್ಟಿಯನ್ನು ಮಾಡಲು ಆರು ಸೇರು ಹಿಟ್ಟನ್ನು ಉಪಯೋಗಿಸಬೇಕು.


ಇಸ್ರೇಲನ ಗಂಡುಮಕ್ಕಳಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ರತ್ನದಂತೆ ದೈವನಿರ್ಣಯ ಪದಕದಲ್ಲಿ ಹನ್ನೆರಡು ರತ್ನಗಳಿರಬೇಕು. ಪ್ರತಿಯೊಂದು ಕಲ್ಲುಗಳಲ್ಲಿ ಇಸ್ರೇಲನ ಗಂಡುಮಕ್ಕಳ ಒಬ್ಬೊಬ್ಬರ ಹೆಸರನ್ನು ಬರೆಸಬೇಕು. ಒಬ್ಬ ಕೆಲಸಗಾರನು ಮುದ್ರೆಯನ್ನು ಕೆತ್ತುವಂತೆ ಈ ಹೆಸರುಗಳನ್ನು ಪ್ರತಿ ರತ್ನದ ಮೇಲೆ ಕೆತ್ತಿಸಬೇಕು.


ಅಂತೆಯೇ ಯಾಕೋಬನು ಮಾಡಿಕೊಂಡ ಒಪ್ಪಂದಕ್ಕೆ ಸಾಕ್ಷಿಯಾಗಿ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಬಂದು ಅಲ್ಲಿಟ್ಟನು.


ನಾನು ಕಲ್ಲನ್ನು ನೆಟ್ಟಿರುವ ಈ ಸ್ಥಳವು ದೇವರ ಪವಿತ್ರಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.”


ಬಳಿಕ ಯೆಹೋವನು ಮೋಶೆಗೆ, “ಈ ಯುದ್ಧದ ಕುರಿತು ಬರೆ: ಜನರು ಇಲ್ಲಿ ನಡೆದದ್ದನ್ನು ಜ್ಞಾಪಿಸಿಕೊಳ್ಳುವಂತೆ ಈ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ನಾನು ಅಮಾಲೇಕ್ಯರನ್ನು ಭೂಮಿಯ ಮೇಲಿಂದ ಸಂಪೂರ್ಣವಾಗಿ ನಾಶಮಾಡುವೆನೆಂದು ಯೆಹೋಶುವನಿಗೆ ಹೇಳಲು ಮರೆಯಬೇಡ” ಎಂದು ಹೇಳಿದನು.


ಆಗ ಮೋಶೆಯು ಒಂದು ಯಜ್ಞವೇದಿಕೆಯನ್ನು ಕಟ್ಟಿದನು. ಮೋಶೆಯು ಯಜ್ಞವೇದಿಕೆಗೆ, “ಯೆಹೋವನು ನನ್ನ ಧ್ವಜ” ಎಂದು ಹೆಸರಿಟ್ಟನು.


ಬಳಿಕ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರಿಗೆ ನೇಮಿಸಬೇಕಾದ ಇತರ ಕಟ್ಟಳೆಗಳು ಯಾವುವೆಂದರೆ:


ವಿಶೇಷ ಒಡಂಬಡಿಕೆಯಿಂದ ಬರೆಯಲ್ಪಟ್ಟಿದ್ದ ಸುರುಳಿಯನ್ನು ಮೋಶೆಯು ಎಲ್ಲಾ ಜನರಿಗೆ ಕೇಳುವಂತೆ ಓದಿದನು. ಆಗ ಜನರು, “ಯೆಹೋವನ ಆಜ್ಞೆಗಳನ್ನೆಲ್ಲ ಅನುಸರಿಸಿ ಆತನಿಗೆ ವಿಧೇಯರಾಗಿರುತ್ತೇವೆ” ಅಂದರು.


ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಹೇಳಿದ ಸಂಗತಿಗಳನ್ನೆಲ್ಲಾ ಬರೆ. ಆ ಸಂಗತಿಗಳು ನಾನು ನಿನ್ನೊಂದಿಗೆ ಮತ್ತು ಇಸ್ರೇಲರೊಂದಿಗೆ ಮಾಡಿದ ಒಡಂಬಡಿಕೆಯಾಗಿದೆ” ಎಂದು ಹೇಳಿದನು.


ಆ ಸಮಯದಲ್ಲಿ ಈಜಿಪ್ಟಿನ ಮಧ್ಯದಲ್ಲಿ ಯೆಹೋವನಿಗಾಗಿ ಒಂದು ವೇದಿಕೆ ಇರುವದು. ಈಜಿಪ್ಟಿನ ಗಡಿಯಲ್ಲಿ ಯೆಹೋವನ ಗೌರವಾರ್ಥವಾಗಿ ಸ್ಮಾರಕಸ್ತಂಭ ಇರುವದು.


ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡು, “ನಿನ್ನ ಸಂತತಿಯವರಿಗೆ ಈ ದೇಶವನ್ನು ಕೊಡುವೆನು” ಎಂದು ಹೇಳಿದನು. ಆ ಸ್ಥಳದಲ್ಲಿ ಯೆಹೋವನು ಅಬ್ರಾಮನಿಗೆ ಕಾಣಿಸಿಕೊಂಡನು. ಆದ್ದರಿಂದ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಿದನು.


“ನದಿಯಲ್ಲಿ ನಿಮ್ಮ ದೇವರಾದ ಯೆಹೋವನ ಪವಿತ್ರ ಪೆಟ್ಟಿಗೆ ಇರುವ ಸ್ಥಳಕ್ಕೆ ಹೋಗಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.


ಎಲೀಯನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಒಂದೊಂದು ಕಲ್ಲಿನಂತೆ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡನು. ಯೆಹೋವನಿಂದ ಇಸ್ರೇಲನೆಂದು ಕರೆಸಿಕೊಂಡ ಯಾಕೋಬನ ಹನ್ನೆರಡು ಗಂಡುಮಕ್ಕಳ ಹೆಸರನ್ನೇ ಈ ಕುಲಗಳಿಗೆ ಕೊಡಲಾಗಿತ್ತು.


ಮುದ್ರೆ ಹಾಕಿದ ಒಡಂಬಡಿಕೆಯಲ್ಲಿದ್ದ ಹೆಸರುಗಳು: ರಾಜ್ಯಪಾಲನಾದ ನೆಹೆಮೀಯ, ಇವನು ಹಕಲ್ಯನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು