Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:6 - ಪರಿಶುದ್ದ ಬೈಬಲ್‌

6 ಮೋಶೆಯು ಈ ಪಶುಗಳ ರಕ್ತವನ್ನು ತೆಗೆದುಕೊಂಡು ಅದರಲ್ಲಿ ಅರ್ಧಭಾಗವನ್ನು ಬೋಗುಣಿಗಳಲ್ಲಿ ಹಾಕಿದನು; ಉಳಿದ ಅರ್ಧಭಾಗವನ್ನು ಯಜ್ಞವೇದಿಕೆಯ ಮೇಲೆ ಸುರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅನಂತರ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಬಲಿಪಶುಗಳ ರಕ್ತದಲ್ಲಿ ಅರ್ಧವನ್ನು ತೆಗೆದು ಬಟ್ಟಲುಗಳಲ್ಲಿ ತುಂಬಿದನು. ಮಿಕ್ಕ ಅರ್ಧವನ್ನು, ಬಲಿಪೀಠದ ಮೇಲೆ ಪ್ರೋಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿದನು ಮತ್ತು ರಕ್ತದಲ್ಲಿ ಮಿಕ್ಕ ಅರ್ಧವನ್ನು ಬಲಿಪೀಠದ ಮೇಲೆ ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:6
22 ತಿಳಿವುಗಳ ಹೋಲಿಕೆ  

ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.


ಆಗ ಮೋಶೆ ಯಜ್ಞಗಳ ರಕ್ತದಿಂದ ತುಂಬಿದ ಬೋಗುಣಿಯನ್ನು ತೆಗೆದುಕೊಂಡು ಅದರಲ್ಲಿದ್ದ ರಕ್ತವನ್ನು ಜನರ ಮೇಲೆ ಚಿಮಿಕಿಸಿ, “ಈ ಸುರುಳಿಯಲ್ಲಿರುವ ವಾಕ್ಯಗಳಿಗನುಸಾರವಾಗಿ ಯೆಹೋವನು ನಿಮ್ಮೊಡನೆ ಒಂದು ವಿಶೇಷ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆಂಬುದನ್ನು ಈ ರಕ್ತವು ಸೂಚಿಸುತ್ತದೆ” ಎಂದು ಹೇಳಿದನು.


ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಮೊದಲನೆ ಒಡಂಬಡಿಕೆ ಇದಕ್ಕೆ ಹೋಲಿಕೆಯಾಗಿದೆ. ಮೊದಲನೆ ಒಡಂಬಡಿಕೆ ಉಪಯುಕ್ತಕ್ಕೆ ಬರಲು ರಕ್ತಾರ್ಪಣೆಯಾಗಬೇಕಿತ್ತು.


ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಮಹಾಪವಿತ್ರಸ್ಥಳದ ಪರದೆಯ ಮುಂಭಾಗದಲ್ಲಿರುವ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಚಿಮಿಕಿಸಬೇಕು.


ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.


ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ಸಮಾಧಾನವನ್ನು ಉಂಟುಮಾಡಿ ಭೂಪರಲೋಕಗಳಲ್ಲಿರುವ ಸಮಸ್ತವನ್ನು ತನಗೆ ಸಂಧಾನಪಡಿಸಿಕೊಳ್ಳಬೇಕೆಂಬುದೂ ದೇವರ ಚಿತ್ತವಾಗಿತ್ತು.


ಅವನು ತನ್ನ ಕೈಯನ್ನು ಪಶುವಿನ ಮೇಲಿಟ್ಟು ದೇವದರ್ಶನಗುಡಾರದ ಮುಂದೆ ಅದನ್ನು ವಧಿಸಬೇಕು. ತರುವಾಯ ಆರೋನನ ಪುತ್ರರು ಅದರ ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.


ಆ ವ್ಯಕ್ತಿಯು ತನ್ನ ಕೈಯನ್ನು ಪಶುವಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಬಾಗಿಲಲ್ಲಿ ಅದನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ಆ ರಕ್ತವನ್ನು ಯಜ್ಞವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.


ಅವನು ಯೆಹೋವನ ಸನ್ನಿಧಿಯಲ್ಲಿ ಅಂದರೆ ವೇದಿಕೆಯ ಉತ್ತರ ಭಾಗದಲ್ಲಿ ಪಶುವನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.


“ಅವನು ಹೋರಿಯನ್ನು ಯೆಹೋವನ ಸನ್ನಿಧಿಯಲ್ಲಿ ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯಜ್ಞವೇದಿಕೆಯ ಬಳಿಗೆ ತರಬೇಕು; ರಕ್ತವನ್ನು ಸುತ್ತಲೂ ಯಜ್ಞವೇದಿಕೆಯ ಮೇಲೆ ಚಿಮಿಕಿಸಬೇಕು.


ಆ ಟಗರನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊ. ಆ ರಕ್ತವನ್ನು ಆರೋನ ಮತ್ತು ಅವನ ಪುತ್ರರ ಬಲಗಿವಿಯ ತುದಿಗೆ ಹಚ್ಚು. ಅದಲ್ಲದೆ ಅವರ ಬಲಗೈಗಳ ಹೆಬ್ಬೆರಳುಗಳಿಗೂ ಸ್ವಲ್ಪ ರಕ್ತವನ್ನು ಹಚ್ಚು. ಸ್ವಲ್ಪ ರಕ್ತವನ್ನು ಅವರ ಬಲಗಾಲಿನ ಹೆಬ್ಬೊಟ್ಟಿಗೂ ಹಚ್ಚು. ಬಳಿಕ ಉಳಿದ ರಕ್ತವನ್ನು ಯಜ್ಞವೇದಿಕೆಯ ನಾಲ್ಕು ಕಡೆಗಳಿಗೆ ಚೆಲ್ಲು.


ಆ ಟಗರನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಕೆಯ ನಾಲ್ಕು ಕಡೆಗಳಿಗೆ ಚೆಲ್ಲು.


ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ರಕ್ತ ತುಂಬಿರುವ ಪಾತ್ರೆಯಲ್ಲಿ ಅದ್ದಿರಿ. ರಕ್ತವನ್ನು ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿರಿ. ಮುಂಜಾನೆಯಾಗುವವರೆಗೆ ಯಾರೂ ತಮ್ಮ ಮನೆಯನ್ನು ಬಿಟ್ಟು ಹೊರಗೆ ಹೋಗಬಾರದು.


ಈ ಪಶುಗಳ ರಕ್ತವನ್ನು ತೆಗೆದಿಟ್ಟು ಜನರು ಭೋಜನಮಾಡುವ ಮನೆಗಳ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗಳಿಗೂ ಆ ರಕ್ತವನ್ನು ಹಚ್ಚಬೇಕು.


ಅದೇ ರೀತಿಯಲ್ಲಿ ಅವರು ಊಟಮಾಡಿದ ಮೇಲೆ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಈ ದ್ರಾಕ್ಷಾರಸ ಸೂಚಿಸುತ್ತದೆ. ಈ ಹೊಸ ಒಡಂಬಡಿಕೆ ನನ್ನ ರಕ್ತದಿಂದ ಆರಂಭವಾಗುತ್ತದೆ. ನೀವು ಇದನ್ನು ಕುಡಿಯುವಾಗಲೆಲ್ಲಾ ನನ್ನನ್ನು ನೆನಸಿಕೊಳ್ಳವವರಾಗಿದ್ದೀರಿ” ಎಂದು ಹೇಳಿದನು.


ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ.


ಮೊದಲನೆಯದಾಗಿ, ಮೋಶೆಯು ಧರ್ಮಶಾಸ್ತ್ರದ ಪ್ರತಿಯೊಂದು ಆಜ್ಞೆಯನ್ನೂ ಜನರಿಗೆಲ್ಲ ತಿಳಿಸಿದನು. ನಂತರ ಅವನು ಕರುಗಳ ರಕ್ತವನ್ನು ತೆಗೆದುಕೊಂಡು ಅದನ್ನು ನೀರಿನೊಂದಿಗೆ ಬೆರೆಸಿದನು. ಬಳಿಕ ನೀರು ಮತ್ತು ರಕ್ತವನ್ನು ಧರ್ಮಶಾಸ್ತ್ರದ ಮೇಲೆ ಮತ್ತು ಜನರೆಲ್ಲರ ಮೇಲೆ ಚಿಮುಕಿಸಲು ಕೆಂಪು ಉಣ್ಣೆಯನ್ನೂ ಹಿಸ್ಸೋಪ್ ಗಿಡದ ಕವಲನ್ನು ಉಪಯೋಗಿಸಿದನು.


ಅದೇರೀತಿ, ಮೋಶೆಯು ರಕ್ತವನ್ನು ಗುಡಾರದ ಮೇಲೆಯೂ ಆರಾಧನೆಯಲ್ಲಿ ಬಳಸುವ ಎಲ್ಲಾ ವಸ್ತುಗಳ ಮೇಲೆಯೂ ಚಿಮುಕಿಸಿದನು.


ಯೆಹೋವನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಮತ್ತು ಆತನ ನಿಯಮಗಳನ್ನು ಅವರು ಒಪ್ಪಲಿಲ್ಲ. ಅವರು ಯೆಹೋವನ ಎಚ್ಚರಿಕೆಗೆ ಗಮನವನ್ನೂ ನೀಡಲಿಲ್ಲ. ಅವರು ನಿರರ್ಥಕವಾದ ವಿಗ್ರಹಗಳನ್ನು ಅನುಸರಿಸಿ ನಿಷ್ಪ್ರಯೋಜಕರಾದರು, ಅವರು ತಮ್ಮ ಸುತ್ತಮುತ್ತಲಿನ ಜನಾಂಗಗಳನ್ನು ಅನುಸರಿಸಿದರು. ಯೆಹೋವನು ಇಸ್ರೇಲಿನ ಜನರಿಗೆ ಮಾಡಬಾರದೆಂದು ಎಚ್ಚರಿಸಿ ಹೇಳಿದ್ದನ್ನು ಈ ಜನಾಂಗಗಳು ಮಾಡಿದವು.


ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.


ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು