Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:8 - ಪರಿಶುದ್ದ ಬೈಬಲ್‌

8 ಆಗ ಮೋಶೆ ಯಜ್ಞಗಳ ರಕ್ತದಿಂದ ತುಂಬಿದ ಬೋಗುಣಿಯನ್ನು ತೆಗೆದುಕೊಂಡು ಅದರಲ್ಲಿದ್ದ ರಕ್ತವನ್ನು ಜನರ ಮೇಲೆ ಚಿಮಿಕಿಸಿ, “ಈ ಸುರುಳಿಯಲ್ಲಿರುವ ವಾಕ್ಯಗಳಿಗನುಸಾರವಾಗಿ ಯೆಹೋವನು ನಿಮ್ಮೊಡನೆ ಒಂದು ವಿಶೇಷ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆಂಬುದನ್ನು ಈ ರಕ್ತವು ಸೂಚಿಸುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಮೋಶೆ ಬಟ್ಟಲುಗಳಲ್ಲಿದ್ದ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲ ಆಜ್ಞೆಗಳ ಪ್ರಕಾರ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತ ಇದೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಮೋಶೆ ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿವಿುಕಿಸಿ - ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವು ಇದೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತರುವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಈ ಎಲ್ಲಾ ಮಾತುಗಳ ವಿಷಯದಲ್ಲಿ ಯೆಹೋವ ದೇವರು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:8
23 ತಿಳಿವುಗಳ ಹೋಲಿಕೆ  

ಮೋಶೆಯು ಈ ಪಶುಗಳ ರಕ್ತವನ್ನು ತೆಗೆದುಕೊಂಡು ಅದರಲ್ಲಿ ಅರ್ಧಭಾಗವನ್ನು ಬೋಗುಣಿಗಳಲ್ಲಿ ಹಾಕಿದನು; ಉಳಿದ ಅರ್ಧಭಾಗವನ್ನು ಯಜ್ಞವೇದಿಕೆಯ ಮೇಲೆ ಸುರಿದನು.


ಆಗ ನಾನು ಶುದ್ಧ ನೀರನ್ನು ನಿಮ್ಮ ಮೇಲೆ ಚಿಮುಕಿಸಿ ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವೆನು. ಆ ವಿಗ್ರಹಗಳ ಹೊಲಸನ್ನು ನಿಮ್ಮಿಂದ ನಾನು ತೊಳೆದುಹಾಕಿ ನಿಮ್ಮನ್ನು ಶುದ್ಧರನ್ನಾಗಿ ಮಾಡುವೆನು.”


ಇದು ಹೊಸ ಒಡಂಬಡಿಕೆಯನ್ನು ಸ್ಥಾಪಿಸುವ ನನ್ನ ರಕ್ತ. ಇದು ಅನೇಕ ಜನರ ಪಾಪಗಳ ಕ್ಷಮೆಗಾಗಿ ಸುರಿಸಲ್ಪಡುವ ರಕ್ತ.


ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.


ಅದೇ ರೀತಿಯಲ್ಲಿ ಅವರು ಊಟಮಾಡಿದ ಮೇಲೆ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಈ ದ್ರಾಕ್ಷಾರಸ ಸೂಚಿಸುತ್ತದೆ. ಈ ಹೊಸ ಒಡಂಬಡಿಕೆ ನನ್ನ ರಕ್ತದಿಂದ ಆರಂಭವಾಗುತ್ತದೆ. ನೀವು ಇದನ್ನು ಕುಡಿಯುವಾಗಲೆಲ್ಲಾ ನನ್ನನ್ನು ನೆನಸಿಕೊಳ್ಳವವರಾಗಿದ್ದೀರಿ” ಎಂದು ಹೇಳಿದನು.


ಯೇಸು, “ಇದು ನನ್ನ ರಕ್ತ. ಒಡಂಬಡಿಕೆಯ ರಕ್ತ. ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.


ಅದೇ ರೀತಿಯಾಗಿ, ಊಟವಾದ ನಂತರ, ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಇದು ಸೂಚಿಸುತ್ತದೆ. ನಾನು ನಿಮಗಾಗಿ ಕೊಡುತ್ತಿರುವ ರಕ್ತದಿಂದ ಈ ಹೊಸ ಒಡಂಬಡಿಕೆ ಪ್ರಾರಂಭವಾಗುತ್ತದೆ” ಅಂದನು.


ಜೆರುಸಲೇಮೇ, ನಾವು ನಿನ್ನ ಒಡಂಬಡಿಕೆಗೆ ಮುದ್ರೆ ಹಾಕಲು ರಕ್ತವನ್ನು ಉಪಯೋಗಿಸಿದೆವು. ಆದ್ದರಿಂದ ನೆಲದ ಹೊಂಡದೊಳಗಿಂದ ಜನರನ್ನು ಬಿಡುಗಡೆ ಮಾಡಿದ್ದೇನೆ.


ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು.


ಅನೇಕ ಜನಾಂಗಗಳವರು ಆತನನ್ನು ಕಂಡು ಆಶ್ಚರ್ಯಪಡುವರು. ಅರಸರು ದಿಗ್ಭ್ರಮೆಯಿಂದ ಆತನನ್ನು ದೃಷ್ಟಿಸಿ ನೋಡುವರು. ಅವರು ನನ್ನ ಸೇವಕನ ಬಗ್ಗೆ ಕೇಳಲಿಲ್ಲ. ಆತನಿಗೆ ಸಂಭವಿಸಿದ್ದನ್ನೇ ನೋಡಿದರು. ಅವರು ಆತನ ವಿಚಾರ ಕೇಳದಿದ್ದರೂ ಅವರಿಗೆ ತಿಳಿದುಬಂತು.”


ಮೋಶೆ ಸ್ವಲ್ಪ ಅಭಿಷೇಕತೈಲವನ್ನು ಮತ್ತು ವೇದಿಕೆಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮೇಲೆ ಮತ್ತು ಅವನ ಯಾಜಕವಸ್ತ್ರದ ಮೇಲೆ ಚಿಮಿಕಿಸಿದನು; ಆರೋನನ ಜೊತೆ ಇದ್ದ ಅವನ ಪುತ್ರರ ಮೇಲೆ ಮತ್ತು ಅವರ ಬಟ್ಟೆಗಳ ಮೇಲೆ ಚಿಮಿಕಿಸಿದನು. ಹೀಗೆ ಮೋಶೆಯು ಆರೋನನನ್ನೂ ಅವನ ಯಾಜಕವಸ್ತ್ರವನ್ನೂ ಅವನ ಪುತ್ರರನ್ನೂ ಅವರ ಯಾಜಕ ವಸ್ತ್ರಗಳನ್ನೂ ಪವಿತ್ರಗೊಳಿಸಿದನು.


ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.


ಆದ್ದರಿಂದ ಯೆಹೋಶುವನು ಶೆಕೆಮಿನಲ್ಲಿ ಜನರಿಗಾಗಿ ಒಂದು ಒಡಂಬಡಿಕೆಯನ್ನು ಮಾಡಿದನು. ಅದು ಅವರಿಗೆ ಪಾಲಿಸಬೇಕಾದ ಒಂದು ವಿಧಿಯಾಯಿತು.


ಪವಿತ್ರ ಪೆಟ್ಟಿಗೆಯಲ್ಲಿರುವ ಒಂದೇ ವಸ್ತುವೆಂದರೆ ಎರಡು ಕಲ್ಲಿನ ಹಲಿಗೆಗಳು. ಮೋಶೆಯು ಹೋರೇಬ್ ಎಂಬ ಸ್ಥಳದಲ್ಲಿ ಪವಿತ್ರ ಪೆಟ್ಟಿಗೆಯಲ್ಲಿಟ್ಟ ಎರಡು ಕಲ್ಲಿನ ಹಲಗೆಗಳೇ. ಇವು ಈಜಿಪ್ಟಿನಿಂದ ಹೊರಬಂದ ಇಸ್ರೇಲಿನ ಜನರೊಂದಿಗೆ ಯೆಹೋವನು ಒಪ್ಪಂದ ಮಾಡಿಕೊಂಡ ಸ್ಥಳವೇ ಹೋರೇಬ್.


ಆದರೆ ಅವರು ಯಥಾರ್ಥವಾಗಿರದೆ ಸುಳ್ಳಾಡಿದರು.


ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.


ಹೋರೇಬ್ ಎಂಬ ಸೀನಾಯಿ ಪರ್ವತದಲ್ಲಿ ಯೆಹೋವ ದೇವರು ನಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿರುತ್ತಾನೆ.


ಯೆಹೋವನ ಪೆಟ್ಟಿಗೆಗಾಗಿ ಆಲಯದಲ್ಲಿ ನಾನೊಂದು ಸ್ಥಳವನ್ನು ಮಾಡಿದ್ದೇನೆ. ಯೆಹೋವನು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯು ಈ ಪವಿತ್ರಪೆಟ್ಟಿಗೆಯಲ್ಲಿದೆ. ಯೆಹೋವನು ನಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದಾಗ ಈ ಒಡಂಬಡಿಕೆಯನ್ನು ಮಾಡಿಕೊಂಡನು” ಎಂದು ಹೇಳಿದನು.


ಈ ಒಡಂಬಡಿಕೆ ನಾನು ಅವರ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತಲ್ಲ. ನಾನು ಅವರ ಕೈಹಿಡಿದು ಈಜಿಪ್ಟಿನಿಂದ ಹೊರತಂದಾಗ ಮಾಡಿಕೊಂಡ ಒಡಂಬಡಿಕೆಯದು. ನಾನು ಅವರ ಒಡೆಯನಾಗಿದ್ದೆ. ಆದರೆ ಅವರು ಒಡಂಬಡಿಕೆಯನ್ನು ಮುರಿದರು.” ಇದು ಯೆಹೋವನ ನುಡಿ.


ಯೆಹೋವನು ಹೇಳುವುದೇನೆಂದರೆ, “‘ನೀವು ಈಜಿಪ್ಟ್ ದೇಶವನ್ನು ಬಿಟ್ಟಾಗ ನಾನು ನಿಮ್ಮೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ನಾನು ಆ ವಾಗ್ದಾನವನ್ನು ನೆರವೇರಿಸಿದ್ದೇನೆ! ನನ್ನ ಆತ್ಮವು ನಿಮ್ಮೊಂದಿಗಿದೆ. ಆದ್ದರಿಂದ ಭಯಪಡಬೇಡಿ!’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು