Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:1 - ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮೋಶೆಗೆ ಸರ್ವೇಶ್ವರ ಸ್ವಾಮಿ ಹೀಗೆಂದು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಗೆ ಹೇಳಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:1
11 ತಿಳಿವುಗಳ ಹೋಲಿಕೆ  

ಬಳಿಕ ಮೋಶೆಯು ಮೋಡದಲ್ಲಿ ಬೆಟ್ಟದ ಮೇಲೆ ಇನ್ನೂ ಎತ್ತರಕ್ಕೆ ಹೋದನು. ಮೋಶೆಯು ಬೆಟ್ಟದಲ್ಲಿ ಹಗಲಿರುಳು ನಲವತ್ತು ದಿವಸ ಇದ್ದನು.


“ಇಸ್ರೇಲರು ನನಗೆ ಕಾಣಿಕೆಗಳನ್ನು ತರಬೇಕೆಂದು ಅವರಿಗೆ ಹೇಳು. ಪ್ರತಿಯೊಬ್ಬನು ನನಗೆ ಕೊಡುವುದರ ಬಗ್ಗೆ ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಈ ಕಾಣಿಕೆಗಳನ್ನು ನನಗಾಗಿ ಸ್ವೀಕರಿಸು.


ಯೆಹೋವನಿಗಾಗಿ ಕಾಣಿಕೆಗಳನ್ನು ಕೂಡಿಸಿರಿ. ನಿಮ್ಮಲ್ಲಿ ಪ್ರತಿಯೊಬ್ಬನು ತಾನು ಕೊಡುವಂಥದ್ದನ್ನು ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಬಳಿಕ ಆ ಕಾಣಿಕೆಯನ್ನು ಯೆಹೋವನ ಸನ್ನಿಧಿಗೆ ತರಬೇಕು. ಚಿನ್ನ, ಬೆಳ್ಳಿ, ತಾಮ್ರ,


ಮೋಶೆಯು ಇಸ್ರೇಲರನ್ನು ಒಟ್ಟಾಗಿ ಸೇರಿಸಿದನು. ಮೋಶೆ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವನು ನಿಮಗೆ ಆಜ್ಞಾಪಿಸಿದ ಸಂಗತಿಗಳನ್ನು ನಾನು ಹೇಳುವೆನು:


ಮೋಶೆಯು ಇಸ್ರೇಲರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದುವೇ.


ದೀಪಗಳಿಗೆ ಬೇಕಾದ ಎಣ್ಣೆ, ಅಭಿಷೇಕತೈಲ ಮತ್ತು ಪರಿಮಳಧೂಪವನ್ನು ತಯಾರಿಸಲು ಬೇಕಾದ ಸುಗಂಧದ್ರವ್ಯ ಇವುಗಳನ್ನು ತನ್ನಿರಿ.


ಹೀಗೆ ಪವಿತ್ರಗುಡಾರವಾದ ದೇವದರ್ಶನ ಗುಡಾರದ ಕೆಲಸವೆಲ್ಲವೂ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರೇಲರು ಪ್ರತಿಯೊಂದನ್ನೂ ಮಾಡಿದರು.


ಬಳಿಕ ಅವರು ಪವಿತ್ರಗುಡಾರವನ್ನು ಮೋಶೆಗೆ ತೋರಿಸಿದರು. ಅವರು ಗುಡಾರವನ್ನೂ ಅದರಲ್ಲಿರುವ ವಸ್ತುಗಳನ್ನೆಲ್ಲಾ ಅವನಿಗೆ ತೋರಿಸಿದರು. ಬಳೆಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳನ್ನೆಲ್ಲಾ ಅವನಿಗೆ ತೋರಿಸಿದರು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರೇಲರು ಇವುಗಳನ್ನೆಲ್ಲಾ ಮಾಡಿದರು.


“ಪ್ರಧಾನರಿಂದ ಈ ಕಾಣಿಕೆಗಳನ್ನು ಸ್ವೀಕರಿಸು. ಇವು ದೇವದರ್ಶನಗುಡಾರದ ವರ್ಗಾವಣೆಗೆ ಉಪಯೋಗಿಸಲ್ಪಡಲಿ. ಇವುಗಳನ್ನು ಲೇವಿಯರಿಗೆ ಕೊಡು. ಅವರು ತಮ್ಮ ಕೆಲಸಗಳನ್ನು ಮಾಡಲು ಇದು ಸಹಾಯ ಮಾಡುವುದು.”


ಯೆಹೋವಾಷನು ಯಾಜಕರಿಗೆ, “ದೇವಾಲಯದಲ್ಲಿ ಬಹಳ ಹಣವಿದೆ. ಜನರು ಅನೇಕ ವಸ್ತುಗಳನ್ನು ಆಲಯಕ್ಕೆ ಕೊಟ್ಟಿದ್ದಾರೆ. ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಜನರು ಆಲಯದ ತೆರಿಗೆಯನ್ನು ಕೊಟ್ಟಿದ್ದಾರೆ. ಜನರು ತಮ್ಮ ಸ್ವ ಇಚ್ಛೆಯಿಂದ ಹಣವನ್ನು ಕೊಟ್ಟಿದ್ದಾರೆ. ಯಾಜಕರಾದ ನೀವು ಆ ಹಣವನ್ನು ತೆಗೆದುಕೊಂಡು, ಯೆಹೋವನ ಆಲಯವನ್ನು ಸರಿಪಡಿಸಿ. ಪ್ರತಿಯೊಬ್ಬ ಯಾಜಕನೂ ತಾನು ಜನರ ಸೇವೆಯಿಂದ ಪಡೆದ ಹಣವನ್ನು ಉಪಯೋಗಿಸಲೇಬೇಕು. ಅವನು ಆ ಹಣವನ್ನು ದೇವಾಲಯದ ಶಿಥಿಲತೆಯನ್ನು ಸರಿಪಡಿಸಲು ಉಪಯೋಗಿಸಲೇಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು