ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.
ನಂತರ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರು ತನ್ನ ಜನರಿಗೆ ಅನುಗ್ರಹಿಸಿದ ಒಡಂಬಡಿಕೆಯನ್ನು ಇಟ್ಟಿದ್ದ ಪೆಟ್ಟಿಗೆಯು ಆತನ ಆಲಯದಲ್ಲಿ ಕಾಣಿಸಿತು. ಆಗ ಮಿಂಚುಗಳು ಹೊಳೆದವು, ಶಬ್ದಗಳಾದವು, ಗುಡುಗುಗಳಾದವು, ಭೂಕಂಪಗಳಾದವು ಮತ್ತು ಆಲಿಕಲ್ಲಿನ ಮಳೆಯೂ ಸುರಿಯಿತು.
ಸೊಲೊಮೋನನು ದಾವೀದ ನಗರದಲ್ಲಿದ್ದ ಫರೋಹನ ಕುಮಾರ್ತೆಯನ್ನು ಆಕೆಗಾಗಿ ಕಟ್ಟಿದ ಅರಮನೆಗೆ ಕರೆಸಿದನು. “ನನ್ನ ಹೆಂಡತಿಯು ದಾವೀದನ ಮನೆಯಲ್ಲಿ ವಾಸಿಸಬಾರದು. ಯಾಕೆಂದರೆ ದೇವರ ಒಡಂಬಡಿಕೆಯ ಪೆಟ್ಟಿಗೆ ಇರುವ ಸ್ಥಳಗಳು ಪರಿಶುದ್ಧವಾಗಿವೆ” ಎಂದು ಸೊಲೊಮೋನನು ಅಂದುಕೊಂಡನು.
ಅವರು ಪವಿತ್ರಪೆಟ್ಟಿಗೆ, ಮೇಜು, ದೀಪಸ್ತಂಭ, ವೇದಿಕೆಗಳನ್ನು ಮತ್ತು ಪವಿತ್ರಸ್ಥಳದ ಸಾಮಗ್ರಿಗಳನ್ನು, ಪರದೆಯನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಎಲ್ಲಾ ಕಷ್ಟಕರವಾದ ಕೆಲಸಗಳನ್ನು ನೋಡಿಕೊಳ್ಳಬೇಕಾಗಿತ್ತು.
“ಇಸ್ರೇಲರು ಹೊಸ ಸ್ಥಳಕ್ಕೆ ಪ್ರಯಾಣ ಮಾಡುವಾಗ ಆರೋನನೂ ಅವನ ಪುತ್ರರೂ ದೇವದರ್ಶನಗುಡಾರದೊಳಕ್ಕೆ ಹೋಗಿ, ಮಹಾ ಪವಿತ್ರ ಸ್ಥಳವನ್ನು ಮರೆಮಾಡುವ ತೆರೆಯನ್ನು ಇಳಿಸಿ, ಅದನ್ನು ಒಡಂಬಡಿಕೆಯ ಪವಿತ್ರ ಪೆಟ್ಟಿಗೆಗೆ ಹೊದಿಸಬೇಕು.
ಬಳಿಕ ಅವರು ಇವುಗಳಿಗೆಲ್ಲ ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಹೊದಿಸಬೇಕು. ಆಮೇಲೆ ಅವರು ನೀಲಿಬಟ್ಟೆಯನ್ನು ತೊಗಲಿನ ಮೇಲೆ ಹಾಸಿ ಪವಿತ್ರ ಪೆಟ್ಟಿಗೆಯ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.”