ವಿಮೋಚನಕಾಂಡ 25:13 - ಪರಿಶುದ್ದ ಬೈಬಲ್13 ಬಳಿಕ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ಕಂಬಗಳನ್ನು ಮಾಡಬೇಕು. ಈ ಕಂಬಗಳನ್ನು ಜಾಲೀಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ಮಂಜೂಷವನ್ನು ಹೊರುವುದಕ್ಕಾಗಿ ನೀನು ಜಾಲೀಮರದ ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆ ಮಂಜೂಷವನ್ನು ಹೊರುವುದಕ್ಕಾಗಿ ಜಾಲೀಮರದ ದೊಣ್ಣೆಗಳನ್ನು ಮಾಡಿಸಿ, ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆ ಮಂಜೂಷವನ್ನು ಹೊರುವದಕ್ಕಾಗಿ ನೀನು ಜಾಲೀಮರದ ಕೋಲುಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಮೇಲೆ ಜಾಲಿ ಮರದ ಕೋಲುಗಳನ್ನು ಮಾಡಿಸಿ, ಅವುಗಳಿಗೆ ಬಂಗಾರದಿಂದ ಹೊದಿಸಬೇಕು. ಅಧ್ಯಾಯವನ್ನು ನೋಡಿ |
ಬಳಿಕ ಅವರು ವೇದಿಕೆಯಲ್ಲಿ ಆರಾಧನೆಗಾಗಿ ಉಪಯೋಗಿಸಲ್ಪಡುವ ಎಲ್ಲಾ ವಸ್ತುಗಳನ್ನು ಒಟ್ಟಾಗಿ ಸೇರಿಸಬೇಕು. ಅವುಗಳು ಯಾವುವೆಂದರೆ, ಅಗ್ಗಿಷ್ಟಿಗೆಗಳು, ಮುಳ್ಳುಚಮಚಗಳು, ಸಲಿಕೆಗಳು ಮತ್ತು ಬೋಗುಣಿಗಳು. ಅವರು ಇವುಗಳನ್ನು ತಾಮ್ರದ ವೇದಿಕೆಯ ಮೇಲೆ ಇಡಬೇಕು. ಬಳಿಕ ಅವರು ಶ್ರೇಷ್ಠವಾದ ತೊಗಲಿನ ಹೊದಿಕೆಯನ್ನು ಇವುಗಳಿಗೆಲ್ಲ ಹೊದಿಸಿ, ಹೊರುವ ಕೋಲುಗಳನ್ನು ವೇದಿಕೆಯ ಬಳೆಗಳಲ್ಲಿ ಸೇರಿಸಬೇಕು.