ವಿಮೋಚನಕಾಂಡ 25:16 - ಪರಿಶುದ್ದ ಬೈಬಲ್16 “ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಅದರೊಳಗೆ ಇಡು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆ ಮಂಜೂಷದೊಳಗೆ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನದ ಹಲಗೆಯನ್ನು ಇಡಬೇಕು. ಅಧ್ಯಾಯವನ್ನು ನೋಡಿ |
ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.
ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.