ವಿಮೋಚನಕಾಂಡ 25:17 - ಪರಿಶುದ್ದ ಬೈಬಲ್17 ಇದಲ್ಲದೆ ದೇವರು ಮೋಶೆಗೆ, “ಅಪ್ಪಟ ಬಂಗಾರದಿಂದ ಕೃಪಾಸನವನ್ನು ಮಾಡಿಸಬೇಕು. ಅದು ಎರಡೂವರೆ ಮೊಳ ಉದ್ದವಾಗಿರಬೇಕು. ಒಂದೂವರೆ ಮೊಳ ಅಗಲವಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಇದೂ ಅಲ್ಲದೆ, ಅಪ್ಪಟ ಬಂಗಾರದ ಒಂದು ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದ ಹಾಗು ಒಂದುವರೆ ಮೊಳ ಅಗಲದ್ದಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದಲ್ಲದೆ ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಸುಮಾರು ನೂರಹತ್ತು ಸೆಂಟಿಮೀಟರ್ ಉದ್ದವೂ ಎಪ್ಪತ್ತು ಸೆಂಟಿಮೀಟರ್ ಅಗಲವೂ ಇರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು. ಅಧ್ಯಾಯವನ್ನು ನೋಡಿ |
ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.