Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:29 - ಪರಿಶುದ್ದ ಬೈಬಲ್‌

29 ತಟ್ಟೆಗಳನ್ನು, ಚಮಚಗಳನ್ನು, ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಶುದ್ಧಬಂಗಾರದಿಂದ ಮಾಡಬೇಕು. ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಪಾನದ್ರವ್ಯಗಳನ್ನು ಅರ್ಪಿಸಲು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳನ್ನು ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಮೇಜಿನ ಮೇಲಿಡಬೇಕಾದ ತಟ್ಟೆಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನಾರ್ಪಣೆಗೆ ಬೇಕಾದ ಬಟ್ಟಲುಗಳನ್ನು ಅಪ್ಪಟ ಬಂಗಾರದಿಂದಲೇ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನೂ ಧೂಪಾರತಿಗಳನ್ನೂ ಹೂಜೆಗಳನ್ನೂ ಪಾನದ್ರವ್ಯವನ್ನರ್ಪಿಸುವದಕ್ಕೆ ಬೇಕಾದ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದಲೇ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇದಲ್ಲದೆ ನೀನು ಪಾತ್ರೆಗಳನ್ನು, ಧೂಪಾರತಿಗಳನ್ನು, ಮುಚ್ಚಳಗಳನ್ನು ಪಾನಾರ್ಪಣೆಗೆ ಹೂಜೆಗಳನ್ನೂ ಬೇಕಾದ ಬಟ್ಟಲುಗಳನ್ನೂ, ಶುದ್ಧ ಬಂಗಾರದಿಂದ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:29
14 ತಿಳಿವುಗಳ ಹೋಲಿಕೆ  

“ಬಳಿಕ ಅವರು ಪವಿತ್ರ ಮೇಜಿನ ಮೇಲೆ ನೀಲಿಬಟ್ಟೆಯನ್ನು ಹಾಸಬೇಕು. ಪಾನದ್ರವ್ಯಾರ್ಪಣೆಗಳಿಗಾಗಿ ತಟ್ಟೆಗಳನ್ನೂ ಚಮಚಗಳನ್ನೂ ಬಟ್ಟಲುಗಳನ್ನೂ ಹೂಜೆಗಳನ್ನೂ ವಿಶೇಷ ರೊಟ್ಟಿಯನ್ನೂ ಮೇಜಿನ ಮೇಲೆ ಇಡಬೇಕು.


ಬಳಿಕ ಅವನು ಮೇಜಿನಲ್ಲಿ ಉಪಯೋಗಿಸಲ್ಪಡುತ್ತಿದ್ದ ಎಲ್ಲಾ ವಸ್ತುಗಳನ್ನು ಮಾಡಿದನು. ಅವನು ಅಪ್ಪಟ ಬಂಗಾರದ ತಟ್ಟೆ, ಚಮಚ, ಬೋಗುಣಿ ಮತ್ತು ಹೂಜೆಗಳನ್ನು ಮಾಡಿದನು. ಬೋಗುಣಿ ಮತ್ತು ಹೂಜೆಗಳು ಪಾನದ್ರವ್ಯ ಸಮರ್ಪಣೆಗಳನ್ನು ಅರ್ಪಿಸುವುದಕ್ಕೆ ಉಪಯುಕ್ತವಾಗಿದ್ದವು.


ಇಗೋ, ನಾನು ಬಾಗಿಲ ಬಳಿ ನಿಂತುಕೊಂಡು ತಟ್ಟುತ್ತಿದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ, ನಾನು ಒಳಗೆ ಬಂದು ಅವನೊಂದಿಗೆ ಊಟ ಮಾಡುತ್ತೇನೆ ಮತ್ತು ಅವನು ನನ್ನೊಂದಿಗೆ ಊಟ ಮಾಡುತ್ತಾನೆ.


ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! ಪ್ರೀತಿಯಿಂದ ಮತ್ತರಾಗಿ!


ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಕೆ, ದೇವಾಲಯದ ಮಹಾ ಪವಿತ್ರಸ್ಥಳದೊಳಗಣ ಬಾಗಿಲಿನ ಕದಗಳು; ಪವಿತ್ರಸ್ಥಳದ ಕದಗಳು ಇವುಗಳನ್ನೆಲ್ಲಾ ಅಪ್ಪಟ ಬಂಗಾರದಿಂದ ಮಾಡಿಸಿದನು.


ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು.


ಇವೆಲ್ಲವೂ ಇಸ್ರೇಲರ ಪ್ರಧಾನರು ತಂದ ಕಾಣಿಕೆಗಳು. ಯಜ್ಞವೇದಿಕೆಯನ್ನು ಅಭಿಷೇಕಿಸಿ ಪ್ರತಿಷ್ಠಿಸಿದಾಗ ಯಜ್ಞವೇದಿಕೆಗೋಸ್ಕರ ಅವರು ಕೊಟ್ಟ ಕಾಣಿಕೆಗಳು ಇವುಗಳೇ. ಅವರು ಹನ್ನೆರಡು ಬೆಳ್ಳಿಯ ತಟ್ಟೆಗಳನ್ನೂ ಹನ್ನೆರಡು ಬೆಳ್ಳಿಯ ಬಟ್ಟಲುಗಳನ್ನೂ ಹನ್ನೆರಡು ಚಿನ್ನದ ಧೂಪಾರತಿಗಳನ್ನೂ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು