ವಿಮೋಚನಕಾಂಡ 25:30 - ಪರಿಶುದ್ದ ಬೈಬಲ್30 ನೈವೇದ್ಯದ ರೊಟ್ಟಿಗಳನ್ನು ಮೇಜಿನ ಮೇಲೆ ನನ್ನ ಮುಂದೆ ಇಡು. ಅವು ಅಲ್ಲಿ ನನ್ನ ಮುಂದೆ ಯಾವಾಗಲೂ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸಮ್ಮುಖದಲ್ಲಿ ರೊಟ್ಟಿಗಳನ್ನು ಯಾವಾಗಲೂ ಆ ಮೇಜಿನ ಮೇಲೆ ನನ್ನ ಮುಂದೆ ಇಟ್ಟಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನೈವೇದ್ಯವಾದ ರೊಟ್ಟಿಗಳು ಯಾವಾಗಲೂ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು. ಅಧ್ಯಾಯವನ್ನು ನೋಡಿ |
ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.
ದೇವಾಲಯಕ್ಕಾಗಿ ಅನೇಕ ವಸ್ತುಗಳನ್ನು ಬಂಗಾರದಿಂದ ಮಾಡಲು ಸೊಲೊಮೋನನು ಆಜ್ಞಾಪಿಸಿದನು. ದೇವಾಲಯಕ್ಕಾಗಿ ಸೊಲೊಮೋನನು ಬಂಗಾರದಿಂದ ಮಾಡಿಸಿದ ವಸ್ತುಗಳು ಹೀಗಿವೆ: ಬಂಗಾರದ ಯಜ್ಞವೇದಿಕೆ; ಬಂಗಾರದ ಮೇಜು (ದೇವರಿಗೆ ವಿಶೇಷ ರೊಟ್ಟಿಯನ್ನು ಈ ಮೇಜಿನ ಮೇಲೆ ಅರ್ಪಿಸುತ್ತಾರೆ); ಅಪ್ಪಟ ಬಂಗಾರದ ದೀಪಸ್ತಂಭಗಳು (ಮಹಾ ಪವಿತ್ರಸ್ಥಳದ ಎದುರಿನಲ್ಲಿ ದಕ್ಷಿಣದ ಕಡೆಗೆ ಐದು ಮತ್ತು ಉತ್ತರದ ಕಡೆಗೆ ಐದು.) ಬಂಗಾರದ ಹೂಗಳು, ಹಣತೆಗಳು ಮತ್ತು ಇಕ್ಕುಳಗಳು; ಅಪ್ಪಟ ಬಂಗಾರದ ಬಟ್ಟಲುಗಳು; ದೀಪಗಳನ್ನು ಪ್ರಕಾಶಮಾನವಾಗಿ ಮಾಡಲು ಉಪಯೋಗಿಸುವ ಉಪಕರಣಗಳು; ಚಿಕ್ಕ ಗಂಗಾಳಗಳು; ಚಪ್ಪಟೆಯಾದ ಲೋಹದಿಂದ ಮಾಡಿದ ಪಾತ್ರೆಗಳು; ಬೂದಿಯನ್ನು ತೆಗೆದುಕೊಂಡು ಹೋಗಲು ಶುದ್ಧಬಂಗಾರದ ಪಾತ್ರೆಗಳು; ದೇವಾಲಯದ ಪ್ರವೇಶದ್ವಾರದ ಬಾಗಿಲುಗಳು.
ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ.