Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:31 - ಪರಿಶುದ್ದ ಬೈಬಲ್‌

31 “ಬಳಿಕ ಒಂದು ದೀಪಸ್ತಂಭವನ್ನು ಶುದ್ಧಬಂಗಾರದಿಂದ ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ಕಸೂತಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿದ್ದು ಪುಷ್ಪಪಾತ್ರೆಗಳಂತೆಯೂ ಅಲಂಕಾರವಾಗಿ ಕೆತ್ತಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಕೆಳಭಾಗವನ್ನು ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳು, ಅರಳಿದ ಪುಷ್ಪಗಳು ಮೊಗ್ಗುಗಳು ಅಲಂಕಾರವಾಗಿ ಕೆತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ಅಪ್ಪಟ ಬಂಗಾರದಿಂದ ಒಂದು ದೀಪವೃಕ್ಷವನ್ನು ಮಾಡಿಸಬೇಕು. ಅದರ ಬುಡವನ್ನು ಹಾಗು ಕಾಂಡವನ್ನು ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪವೃಕ್ಷವೆಲ್ಲಾ ಅಖಂಡವಾಗಿರಬೇಕು. ಹೂಗಳಿಂದ, ಹೂಮೊಗ್ಗುಗಳಿಂದ ಕೂಡಿ ಅಲಂಕಾರವಾಗಿ ಕೆತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮತ್ತು ಚೊಕ್ಕಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ನಕಾಸಿಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಪುಷ್ಪಪಾತ್ರೆಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಬೇಕು. ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳಂತೆಯೂ ಹಣತೆಗಳಂತೆಯೂ ಮೊಗ್ಗುಗಳಂತೆಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:31
28 ತಿಳಿವುಗಳ ಹೋಲಿಕೆ  

ಆಗ ದೂತನು, “ಏನು ನೋಡುತ್ತೀ?” ಎಂದು ಪ್ರಶ್ನಿಸಿದನು. ಆಗ ನಾನು “ಬಂಗಾರದ ದೀಪಸ್ತಂಭವನ್ನು ನೋಡುತ್ತಿದ್ದೇನೆ. ಆ ಸ್ತಂಭದಲ್ಲಿ ಏಳು ದೀಪಗಳಿವೆ. ದೀಪಸ್ತಂಭದ ಮೇಲೆ ಒಂದು ಬೋಗುಣಿ ಇದೆ. ಆ ಬೋಗುಣಿಯಿಂದ ಏಳು ನಳಿಗೆಗಳು ಪ್ರತೀ ದೀಪಕ್ಕೆ ಹೋಗುತ್ತವೆ. ಬೋಗುಣಿಯಲ್ಲಿಟ್ಟ ಎಣ್ಣೆಯು ಆ ನಳಿಗೆಯ ಮೂಲಕ ದೀಪಕ್ಕೆ ಸುರಿಯುತ್ತಿತ್ತು.


ನನ್ನ ಜೊತೆಯಲ್ಲಿ ಯಾರು ಮಾತನಾಡುತ್ತಿದ್ದಾರೆಂದು ನೋಡಲು ನಾನು ಹಿಂದಕ್ಕೆ ತಿರುಗಿದಾಗ, ಏಳು ಬಂಗಾರದ ದೀಪಸ್ತಂಭಗಳನ್ನು ಕಂಡೆನು.


ಈ ಸ್ಥಳವು ಗುಡಾರದ ಒಳಗಿತ್ತು. ಗುಡಾರದ ಮೊದಲ ಆವರಣವನ್ನು ಪವಿತ್ರ ಸ್ಥಳವೆಂದು ಕರೆಯುತ್ತಿದ್ದರು. ಪವಿತ್ರ ಸ್ಥಳದಲ್ಲಿ ದೀಪಸ್ತಂಭ, ಮೇಜು ಮತ್ತು ದೇವರಿಗೆ ಅರ್ಪಿಸಲ್ಪಟ್ಟ ರೊಟ್ಟಿಗಳಿದ್ದವು.


ಆ ಸಿಂಹಾಸನದಿಂದ ಸಿಡಿಲಿನ ಆರ್ಭಟವೂ ಗುಡುಗಿನ ಧ್ವನಿಯೂ ಬರುತ್ತಿತ್ತು. ಆ ಸಿಂಹಾಸನದ ಮುಂದೆ ಏಳು ದೀಪಗಳು ಬೆಳಗುತ್ತಿದ್ದವು. ಈ ದೀಪಗಳು ದೇವರ ಏಳು ಆತ್ಮಗಳಾಗಿದ್ದವು.


ನನ್ನ ಬಲಗೈಯಲ್ಲಿ ನೀನು ನೋಡಿದ ಏಳು ನಕ್ಷತ್ರಗಳ ಮತ್ತು ನೀನು ಕಂಡ ಏಳು ಬಂಗಾರದ ದೀಪಸ್ತಂಭಗಳ ಗೂಢಾರ್ಥವು ಹೀಗಿದೆ: ಏಳು ನಕ್ಷತ್ರಗಳೆಂದರೆ ಏಳು ಸಭೆಗಳ ದೂತರು. ಏಳು ದೀಪಸ್ತಂಭಗಳೆಂದರೆ ಏಳು ಸಭೆಗಳು.” ಎಂದು ಹೇಳಿದನು.


ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.


ಆ ತೊಟ್ಟಿಯ ಹೊರಅಂಚಿನ ಸುತ್ತಲೂ ಒಂದು ಕಂಠವಿತ್ತು. ಈ ಕಂಠದ ಕೆಳಗಡೆಯಲ್ಲಿ ತೊಟ್ಟಿಯನ್ನು ಸುತ್ತುವರಿದಂತೆ ಎರಡು ಸಾಲು ಹಿತ್ತಾಳೆಯ ಬಳ್ಳಿಗಳಿದ್ದವು. ಈ ಹಿತ್ತಾಳೆಯ ಬಳ್ಳಿಗಳನ್ನು ತೊಟ್ಟಿಯ ಮೇಲ್ಭಾಗದಲ್ಲಿ ಎರಕಹೊಯ್ದಿದ್ದನು.


ಈ ಕೊಠಡಿಯ ಗೋಡೆಗಳಿಗೆ ದೇವದಾರು ಮರದ ಹೊದಿಕೆಗಳನ್ನು ಹೊದಿಸಲಾಗಿದ್ದು ಈ ಗೋಡೆಗಳಲ್ಲಿದ್ದ ಯಾವುದೇ ಕಲ್ಲುಗಳು ಕಂಡುಬರುತ್ತಿರಲಿಲ್ಲ. ಈ ದೇವದಾರು ಮರದ ಹಲಗೆಗಳ ಮೇಲೆ ಹೂಗಳ ಮತ್ತು ಬಳ್ಳಿಗಳ ಚಿತ್ರಗಳನ್ನು ಕೆತ್ತಲಾಗಿತ್ತು.


ದೀಪಸ್ತಂಭ ಮತ್ತು ಅದರ ಉಪಕರಣಗಳು, ದೀಪಗಳು, ದೀಪಕ್ಕೆ ಬೇಕಾದ ಎಣ್ಣೆ,


ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀ ಎಂಬುದನ್ನು ನೆನಪು ಮಾಡಿಕೊ; ಮನಸ್ಸನ್ನು ಪರಿವರ್ತಿಸಿಕೊ. ನೀನು ಮೊದಲು ಮಾಡಿದ ಕಾರ್ಯಗಳನ್ನು ಮಾಡು. ನೀನು ಪರಿವರ್ತನೆಗೊಳ್ಳದಿದ್ದರೆ ನಾನು ನಿನ್ನಲ್ಲಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಬಿಡುತ್ತೇನೆ.


ದೀಪಸ್ತಂಭದಲ್ಲಿ ಪುಷ್ಪಪಾತ್ರೆಗಳೂ ಪುಷ್ಪಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇರಬೇಕು.


ಪುಷ್ಪಪಾತ್ರೆಗಳನ್ನೂ ಕೊಂಬೆಗಳನ್ನೂ ಒಳಗೊಂಡಿರುವ ದೀಪಸ್ತಂಭವು ಅಖಂಡವಾಗಿದ್ದು ಅಪ್ಪಟ ಬಂಗಾರದಿಂದಲೂ ನಕಾಸಿ ಕೆಲಸದಿಂದಲೂ ಮಾಡಿದ್ದಾಗಿರಬೇಕು.


ಶುದ್ಧಚಿನ್ನದಿಂದ ಮಾಡಿದ ದೀಪಸ್ತಂಭದಲ್ಲಿ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಉರಿಯುತ್ತಿರುವಂತೆ ಆರೋನನು ನೋಡಿಕೊಳ್ಳಬೇಕು.


ಅವರು ಪವಿತ್ರಪೆಟ್ಟಿಗೆ, ಮೇಜು, ದೀಪಸ್ತಂಭ, ವೇದಿಕೆಗಳನ್ನು ಮತ್ತು ಪವಿತ್ರಸ್ಥಳದ ಸಾಮಗ್ರಿಗಳನ್ನು, ಪರದೆಯನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಎಲ್ಲಾ ಕಷ್ಟಕರವಾದ ಕೆಲಸಗಳನ್ನು ನೋಡಿಕೊಳ್ಳಬೇಕಾಗಿತ್ತು.


“ಆಮೇಲೆ ದೀಪಸ್ತಂಭಕ್ಕೂ ಅದರ ದೀಪಗಳಿಗೂ ದೀಪಗಳ ಉಪಕರಣಗಳಿಗೂ ಬೂದಿ ತೆಗೆಯುವ ಅಗ್ಗಿಷ್ಠಿಕೆಗೂ ಮತ್ತು ಅದಕ್ಕಾಗಿ ಉಪಯೋಗಿಸುವ ಎಲ್ಲಾ ಎಣ್ಣೆಯ ಪಾತ್ರೆಗಳಿಗೂ ನೀಲಿಬಟ್ಟೆಯನ್ನು ಹೊದಿಸಬೇಕು.


ಆ ದೀಪಸ್ತಂಭವನ್ನು ಅದರ ಬುಡದಿಂದ ಪುಷ್ಪಾಲಂಕಾರಗಳವರೆಗೂ ಸಂಪೂರ್ಣವಾಗಿ ಚಿನ್ನದ ತಗಡಿನಿಂದ ಮಾಡಲಾಗಿತ್ತು. ಯೆಹೋವನು ಮೋಶೆಗೆ ತೋರಿಸಿದ ಮಾದರಿಯಂತೆ ಅದು ಮಾಡಲ್ಪಟ್ಟಿತ್ತು.


ಸಮುವೇಲನು ಯೆಹೋವನ ಪವಿತ್ರ ಆಲಯದಲ್ಲಿ ಹಾಸಿಗೆಯ ಮೇಲೆ ಮಲಗಿದ್ದನು. ಯೆಹೋವನ ಪವಿತ್ರ ಪೆಟ್ಟಿಗೆಯು ಅಲ್ಲಿಯೇ ಇತ್ತು. ಯೆಹೋವನ ದೀಪವು ಇನ್ನೂ ಬೆಳಗುತ್ತಿತ್ತು.


ಬಂಗಾರದ ದೀಪಗಳಿಗೆ ಮತ್ತು ದೀಪಸ್ತಂಭಗಳಿಗೆ, ಬೆಳ್ಳಿಯ ದೀಪಗಳಿಗೆ ಮತ್ತು ದೀಪಸ್ತಂಭಗಳಿಗೆ ನಕ್ಷೆಗಳಿದ್ದವು. ಪ್ರತಿಯೊಂದು ದೀಪ ಮತ್ತು ದೀಪಸ್ತಂಭಗಳಿಗೆ ಬೇಕಾಗುವ ಬೆಳ್ಳಿಬಂಗಾರಗಳನ್ನು ಸಹ ದಾವೀದನು ಸೊಲೊಮೋನನಿಗೆ ತಿಳಿಸಿದನು. ಅವಶ್ಯಕತೆಗೆ ತಕ್ಕಂತೆ ಈ ದೀಪಸ್ತಂಭಗಳನ್ನು ಉಪಯೋಗಿಸಲಾಗುತ್ತಿತ್ತು.


ಸೊಲೊಮೋನನು ಹತ್ತು ದೀಪಸ್ತಂಭಗಳನ್ನು ಬಂಗಾರದಿಂದ ಮಾಡಿಸಿದನು. ಮೊದಲೇ ತೋರಿಸಿದ ಮಾದರಿಯ ಮೇರೆಗೆ ದೀಪಸ್ತಂಭಗಳನ್ನು ಮಾಡಿಸಿದನು. ಇವುಗಳಲ್ಲಿ ಐದನ್ನು ದೇವಾಲಯದೊಳಗೆ ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು.


ಅಪ್ಪಟ ಬಂಗಾರದಿಂದ ದೀಪಸ್ತಂಭಗಳನ್ನೂ ದೀಪಗಳನ್ನೂ ಮಾಡಿಸಿದನು. ಈ ದೀಪಸ್ತಂಭಗಳು ಮಹಾಪವಿತ್ರ ಸ್ಥಳದ ಎದುರಿನಲ್ಲಿ ನೇಮಕವಾದ ರೀತಿಯಲ್ಲಿ ಉರಿಯಬೇಕು.


ಮೇಜು ಮತ್ತು ಅದರ ಮೇಲಿನ ವಸ್ತುಗಳು, ಬಂಗಾರದ ದೀಪಸ್ತಂಭ ಮತ್ತು ಅದರ ಉಪಕರಣಗಳು,


ಅವರು ಅಪ್ಪಟ ಬಂಗಾರದ ದೀಪಸ್ತಂಭವನ್ನೂ ಅದರಲ್ಲಿರುವ ಹಣತೆಗಳನ್ನೂ ಎಣ್ಣೆಯನ್ನೂ ಹಣತೆಗಳೊಂದಿಗೆ ಉಪಯೋಗಿಸುವ ಇತರ ವಸ್ತುಗಳನ್ನೂ ತೋರಿಸಿದರು.


ಬಳಿಕ ದೀಪಸ್ತಂಭಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನು ಹೊದಿಸಬೇಕು. ಆಮೇಲೆ ಅವರು ಈ ಎಲ್ಲಾ ವಸ್ತುಗಳನ್ನು ಹೊರುವ ಕೋಲುಗಳಿಗೆ ಕಟ್ಟಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು