ವಿಮೋಚನಕಾಂಡ 25:37 - ಪರಿಶುದ್ದ ಬೈಬಲ್37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಈ ಹಣತೆಗಳು ದೀಪಸ್ತಂಭದ ಮುಂದಿರುವ ಪ್ರದೇಶಕ್ಕೆ ಬೆಳಕು ಕೊಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳ ಬೆಳಕು ಎದುರಿನಿಂದ ಬೀಳುವಂತೆ ಅವುಗಳನ್ನು ಹಚ್ಚಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳಲ್ಲಿ ದೀಪಹಚ್ಚಿದಾಗ ಅವುಗಳ ಬೆಳಕು ಮುಂಭಾಗದಲ್ಲಿ ಪ್ರಕಾಶಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು; ಆ ಹಣತೆಗಳಲ್ಲಿ ದೀಪಹಚ್ಚಲು ಎದುರಾಗಿ ಬೆಳಕು ಉಂಟಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 “ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶಕೊಡುವಂತೆ ಅವುಗಳನ್ನು ಹೊತ್ತಿಸಬೇಕು. ಅಧ್ಯಾಯವನ್ನು ನೋಡಿ |
ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.
ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.