ವಿಮೋಚನಕಾಂಡ 25:8 - ಪರಿಶುದ್ದ ಬೈಬಲ್8 ಇದಲ್ಲದೆ ದೇವರು ಮೋಶೆಗೆ, “ಜನರು ನನಗೋಸ್ಕರವಾಗಿ ಒಂದು ಪವಿತ್ರ ಗುಡಾರವನ್ನು ಕಟ್ಟಬೇಕು. ಆಗ ನಾನು ಅವರ ನಡುವೆ ಅದರಲ್ಲಿ ವಾಸಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾನು ಜನರ ಮಧ್ಯೆ ವಾಸಿಸುವುದಕ್ಕೆ ನನಗೊಂದು ಗುಡಾರವನ್ನು ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನಾನು ಅವರ ಮಧ್ಯದಲ್ಲಿ ವಾಸಿಸುವದಕ್ಕೆ ನನಗೆ ಒಂದು ದೇವಸ್ಥಾನವನ್ನು ಕಟ್ಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು. ಅಧ್ಯಾಯವನ್ನು ನೋಡಿ |
ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ.