Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:13 - ಪರಿಶುದ್ದ ಬೈಬಲ್‌

13 ಪಾರ್ಶ್ವಗಳಲ್ಲಿ ಈ ಗುಡಾರದ ಪರದೆಗಳು, ಪವಿತ್ರಗುಡಾರದ ಕೆಳಗಣ ಅಂಚುಗಳಿಂದ ಕೆಳಗೆ ಒಂದು ಮೊಳದಷ್ಟು ತೂಗಾಡುವವು. ಆದ್ದರಿಂದ ಈ ಡೇರೆಯು ಸಂಪೂರ್ಣವಾಗಿ ಪವಿತ್ರಗುಡಾರವನ್ನು ಮುಚ್ಚಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹೊದಿಕೆಯ ಪರದೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ, ಆ ಕಡೆ ಒಂದು ಮೊಳವೂ ಹೆಚ್ಚಾಗಿರುವುದು. ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ತೂಗಾಡುವಂತಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೊದಿಕೆಯ ಬಟ್ಟೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳ ಆ ಕಡೆ ಒಂದು ಮೊಳ ಹೆಚ್ಚಾಗಿರುತ್ತದೆ. ಅವು ಒಳಗಿನ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹೊದಿಕೆಯ ಬಟ್ಟೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ ಆ ಕಡೆ ಒಂದು ಮೊಳವೂ ಹೆಚ್ಚಾಗಿರುವದಷ್ಟೆ; ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ಇರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಗುಡಾರದ ಪರದೆಗಳ ಉದ್ದದಲ್ಲಿ ಈಚೆ ಆಚೆ ಮಿಕ್ಕಿದ ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವುದಕ್ಕಾಗಿ ತೂಗಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:13
4 ತಿಳಿವುಗಳ ಹೋಲಿಕೆ  

ಈ ಎಲ್ಲಾ ಪರದೆಗಳ ಅಳತೆಯು ಒಂದೇ ಆಗಿರಬೇಕು. ಅವು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು.


ಪ್ರತಿಯೊಂದು ಪರದೆಯ ಅಳತೆಯು ಒಂದೇ ಆಗಿರಬೇಕು. ಪ್ರತಿ ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು.


ಈ ಗುಡಾರದ ಪರದೆಗಳಲ್ಲಿ ಉಳಿದ ಹೆಚ್ಚಿನ ಭಾಗಗಳನ್ನು ಅಂದರೆ ಉಳಿದ ಅರ್ಧಭಾಗವನ್ನು ಪವಿತ್ರಗುಡಾರದ ಹಿಂಬದಿಯಲ್ಲಿ ತೂಗುಹಾಕಬೇಕು.


ಹೊರಗಿನ ಗುಡಾರಕ್ಕೆ ಸರಿಹೊಂದುವ ಎರಡು ಹೊದಿಕೆಗಳನ್ನು ಮಾಡಿಸಬೇಕು. ಒಂದು ಹೊದಿಕೆಯನ್ನು ಕೆಂಪುಬಣ್ಣದ ಕುರಿದೊಗಲಿನ ಚರ್ಮದಿಂದ ಮಾಡಬೇಕು. ಇನ್ನೊಂದು ಹೊದಿಕೆಯನ್ನು ಉತ್ತಮ ತೊಗಲಿನಿಂದ ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು