ವಿಮೋಚನಕಾಂಡ 26:14 - ಪರಿಶುದ್ದ ಬೈಬಲ್14 ಹೊರಗಿನ ಗುಡಾರಕ್ಕೆ ಸರಿಹೊಂದುವ ಎರಡು ಹೊದಿಕೆಗಳನ್ನು ಮಾಡಿಸಬೇಕು. ಒಂದು ಹೊದಿಕೆಯನ್ನು ಕೆಂಪುಬಣ್ಣದ ಕುರಿದೊಗಲಿನ ಚರ್ಮದಿಂದ ಮಾಡಬೇಕು. ಇನ್ನೊಂದು ಹೊದಿಕೆಯನ್ನು ಉತ್ತಮ ತೊಗಲಿನಿಂದ ಮಾಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು ಹಾಗು ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಈ ಹೊದಿಕೆಗೆ ಹೊದಿಸುವದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಗುಡಾರದ ಮೇಲ್ಹೊದಿಕೆಯನ್ನು ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದಿಂದ ಮಾಡಬೇಕು, ಅದರ ಮೇಲೆ ಕಡಲುಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.