Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:2 - ಪರಿಶುದ್ದ ಬೈಬಲ್‌

2 ಪ್ರತಿಯೊಂದು ಪರದೆಯ ಅಳತೆಯು ಒಂದೇ ಆಗಿರಬೇಕು. ಪ್ರತಿ ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪ್ರತಿಯೊಂದು ಬಟ್ಟೆಯೂ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. ಎಲ್ಲಾ ಪರದೆಗಳು ಒಂದೇ ಅಳತೆಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಒಂದೊಂದು ತಾನು ಬಟ್ಟೆ ಇಪ್ಪತ್ತೆಂಟು ಮೊಳ ಉದ್ದ ಹಾಗು ನಾಲ್ಕು ಮೊಳ ಅಗಲವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರತಿಯೊಂದು ಬಟ್ಟೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು; ಎಲ್ಲಾ ಬಟ್ಟೆಗಳು ಒಂದೇ ಅಳತೆಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಎಲ್ಲಾ ಪರದೆಗಳೂ ಒಂದೇ ಅಳತೆಯವುಗಳಾಗಿರಬೇಕು. ಪ್ರತಿಯೊಂದು ಪರದೆಯು ಸುಮಾರು ಹದಿಮೂರು ಮೀಟರ್ ಉದ್ದ ಮತ್ತು ಎರಡು ಮೀಟರ್ ಅಗಲವಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:2
6 ತಿಳಿವುಗಳ ಹೋಲಿಕೆ  

ದಾವೀದನು ತನ್ನ ಮನೆಗೆ ಹಿಂತಿರುಗಿದ ಬಳಿಕ ಪ್ರವಾದಿಯಾದ ನಾತಾನನಿಗೆ, “ನಾನು ದೇವದಾರು ಮರಗಳಿಂದ ಮಾಡಿದ ಮನೆಯಲ್ಲಿ ವಾಸಮಾಡುತ್ತಿರುವಾಗ ದೇವರ ಒಡಂಬಡಿಕೆಯ ಪೆಟ್ಟಿಗೆಯು ಗುಡಾರದೊಳಗೆ ಇಡಲ್ಪಟ್ಟಿದೆ. ದೇವರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದಿರುವೆ” ಎಂದನು.


ಆಗ ರಾಜನಾದ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದಿಂದ ನಿರ್ಮಿಸಿದ ವೈಭವದ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಪವಿತ್ರ ಪೆಟ್ಟಿಗೆಯನ್ನು ಇನ್ನೂ ಗುಡಾರದಲ್ಲಿಯೇ ಇಟ್ಟಿದ್ದೇನೆ. ಅದಕ್ಕಾಗಿ ಒಂದು ಆಲಯವನ್ನು ಕಟ್ಟಬೇಕು” ಎಂದು ಹೇಳಿದನು.


ಅವರು ಪವಿತ್ರ ಗುಡಾರದ ಬಟ್ಟೆಗಳನ್ನು, ದೇವದರ್ಶನಗುಡಾರ ಮತ್ತು ಅದರ ಹೊದಿಕೆ, ಅದರ ಮೇಲಿರುವ ಶ್ರೇಷ್ಠವಾದ ತೊಗಲಿನ ಹೊದಿಕೆ ಮತ್ತು ದೇವದರ್ಶನಗುಡಾರದಲ್ಲಿರುವ ಪ್ರವೇಶದ್ವಾರದ ಪರದೆಯನ್ನು ವರ್ಗಾಯಿಸಬೇಕು.


ಯೆಹೋವನು ಮೋಶೆಗೆ, “ಪವಿತ್ರಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳನ್ನು ನಾರುಬಟ್ಟೆ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರದಿಂದ ಮಾಡಿಸಬೇಕು. ನುರಿತ ಕೆಲಸಗಾರನು ಪರದೆಗಳಲ್ಲಿ ರೆಕ್ಕೆಗಳಿರುವ ಕೆರೂಬಿಗಳ ಚಿತ್ರವನ್ನು ಕಸೂತಿ ಹಾಕಬೇಕು.


ಪರದೆಗಳನ್ನು ಒಟ್ಟಾಗಿ ಜೋಡಿಸಿ ಎರಡು ಭಾಗಗಳನ್ನಾಗಿ ಮಾಡಬೇಕು. ಒಂದು ಭಾಗದಲ್ಲಿ ಐದು ಪರದೆಗಳನ್ನೂ ಇನ್ನೊಂದು ಭಾಗದಲ್ಲಿ ಐದು ಪರದೆಗಳನ್ನೂ ಒಟ್ಟಾಗಿ ಜೋಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು