Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:30 - ಪರಿಶುದ್ದ ಬೈಬಲ್‌

30 ನಾನು ನಿನಗೆ ಬೆಟ್ಟದಲ್ಲಿ ತೋರಿಸಿದ ಪ್ರಕಾರವೇ ಪವಿತ್ರಗುಡಾರವನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ಬಿಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರವನ್ನು ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:30
14 ತಿಳಿವುಗಳ ಹೋಲಿಕೆ  

ನಾನು ನಿನಗೆ ಬೆಟ್ಟದ ಮೇಲೆ ತೋರಿಸಿದ ಮಾದರಿಯಂತೆಯೇ ಪ್ರತಿಯೊಂದನ್ನು ಮಾಡಬೇಕು” ಎಂದು ಹೇಳಿದನು.


ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು” ಎಂದು ಹೇಳಿದ್ದು ಈ ಕಾರಣದಿಂದಲೇ.


ಪವಿತ್ರ ಗುಡಾರ ಮತ್ತು ಅದರಲ್ಲಿರುವ ಪ್ರತಿಯೊಂದು ವಸ್ತುವೂ ಹೇಗಿರಬೇಕೆಂದು ನಾನು ನಿನಗೆ ತೋರಿಸುವೆನು. ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಪ್ರತಿಯೊಂದನ್ನು ಮಾಡು.


“ದೇವರು ನಮ್ಮ ಪಿತೃಗಳೊಂದಿಗೆ ಯಾವ ಗುಡಾರದಲ್ಲಿ ಮತಾಡಿದ್ದನೋ ಆ ಗುಡಾರವು ಈ ಯೆಹೂದ್ಯರೊಂದಿಗೆ ಮರಳುಗಾಡಿನಲ್ಲಿತ್ತು. ಈ ಗುಡಾರವನ್ನು ನಿರ್ಮಿಸುವ ಬಗೆಯನ್ನು ದೇವರು ಮೋಶೆಗೆ ತಿಳಿಸಿಕೊಟ್ಟನು. ದೇವರು ತನಗೆ ತೋರಿಸಿದ ಆಕಾರದಂತೆಯೇ ಮೋಶೆಯು ಅದನ್ನು ನಿರ್ಮಿಸಿದನು.


ಈ ವಸ್ತುಗಳು ಪರಲೋಕದಲ್ಲಿರುವ ವಸ್ತುಗಳ ಪ್ರತಿರೂಪಗಳಾಗಿವೆ. ಇವುಗಳನ್ನು ಪ್ರಾಣಿಗಳ ಯಜ್ಞಗಳಿಂದ ಪರಿಶುದ್ಧಗೊಳಿಸಬೇಕಾಗಿದೆ. ಆದರೆ ಪರಲೋಕದಲ್ಲಿರುವ ನಿಜರೂಪಗಳಿಗಾಗಿ ಉತ್ತಮವಾದ ಯಜ್ಞಗಳನ್ನು ಅರ್ಪಿಸಬೇಕಾಗಿದೆ.


ಆತನು ಮಹಾ ಪವಿತ್ರಸ್ಥಳದಲ್ಲಿ ಅಂದರೆ ಜನರಿಂದ ನಿರ್ಮಿತವಾಗದೆ, ದೇವರಿಂದಲೇ ನಿರ್ಮಿಸಲ್ಪಟ್ಟಿರುವ ನಿಜವಾದ ದೇವದರ್ಶನ ಗುಡಾರದಲ್ಲಿ ಸೇವೆಮಾಡುತ್ತಿದ್ದಾನೆ.


ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.


ಬಳಿಕ ಕೆಹಾತನ ಕುಲದವರು ಹೊರಟರು. ಅವರು ದೇವಸ್ಥಾನದ ಪವಿತ್ರವಸ್ತುಗಳನ್ನು ಹೊತ್ತುಕೊಂಡಿದ್ದರು. ಕೆಹಾತ್ಯರು ಪವಿತ್ರವಸ್ತುಗಳೊಡನೆ ಬರುವಷ್ಟರೊಳಗೆ ಇತರ ಲೇವಿಯರು ದೇವದರ್ಶನಗುಡಾರವನ್ನು ಎತ್ತಿ ನಿಲ್ಲಿಸಿದರು.


“ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ದೇವದರ್ಶನಗುಡಾರವಾದ ಪವಿತ್ರಗುಡಾರವನ್ನು ಎತ್ತಿನಿಲ್ಲಿಸು.


ಯಜ್ಞವೇದಿಕೆಯ ಪಾರ್ಶ್ವಗಳನ್ನು ಹಲಗೆಗಳಿಂದ ಮಾಡಿಸಬೇಕು. ನಾನು ಬೆಟ್ಟದ ಮೇಲೆ ನಿನಗೆ ತೋರಿಸಿದ ಪ್ರಕಾರವೇ ಯಜ್ಞವೇದಿಕೆಯನ್ನು ಮಾಡಿಸಬೇಕು.


“ಚೌಕಟ್ಟುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು; ಅಗುಳಿಗಳನ್ನು ಹಿಡಿದುಕೊಂಡಿರಲು ಚೌಕಟ್ಟುಗಳಿಗೆ ಬಳೆಗಳನ್ನು ಮಾಡಿಸಬೇಕು. ಮಾತ್ರವಲ್ಲದೆ ಅಗುಳಿಗಳನ್ನು ಚಿನ್ನದಿಂದ ಹೊದಿಸಬೇಕು.


ಆ ದೀಪಸ್ತಂಭವನ್ನು ಅದರ ಬುಡದಿಂದ ಪುಷ್ಪಾಲಂಕಾರಗಳವರೆಗೂ ಸಂಪೂರ್ಣವಾಗಿ ಚಿನ್ನದ ತಗಡಿನಿಂದ ಮಾಡಲಾಗಿತ್ತು. ಯೆಹೋವನು ಮೋಶೆಗೆ ತೋರಿಸಿದ ಮಾದರಿಯಂತೆ ಅದು ಮಾಡಲ್ಪಟ್ಟಿತ್ತು.


ಆಮೇಲೆ ದಾವೀದನು, “ನಕ್ಷೆಗಳನ್ನೆಲ್ಲ ಮಾಡಲು ಯೆಹೋವನೇ ನನ್ನನ್ನು ನಡಿಸಿ ಮಾರ್ಗದರ್ಶನ ಕೊಟ್ಟನು. ಈ ನಕ್ಷೆಗಳಲ್ಲಿರುವ ಸಕಲ ವಿಷಯಗಳನ್ನು ನಾನು ಅರಿತುಕೊಳ್ಳುವಂತೆ ಸಹಾಯ ಮಾಡಿದನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು