33 ಚಿನ್ನದ ಬಳೆಗಳ ಕೆಳಗೆ ಪರದೆಯನ್ನು ಹಾಕಿಸಬೇಕು; ಪರದೆಯ ಹಿಂಭಾಗದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಬೇಕು. ಈ ಪರದೆಯು ಪವಿತ್ರ ಸ್ಥಳವನ್ನು ಮಹಾಪವಿತ್ರ ಸ್ಥಳದಿಂದ ಪ್ರತ್ಯೇಕಿಸುವುದು.
33 ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು.
33 ಆ ತೆರೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ತೆರೆಯು ಪವಿತ್ರಸ್ಥಾನವೆಂಬುದನ್ನೂ ಮಹಾಪವಿತ್ರಸ್ಥಾನವೆಂಬುದನ್ನೂ ಬೇರೆ ಬೇರೆ ಮಾಡುವುದು.
33 ಆ ಪರದೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ, ಪರದೆಯೊಳಗೆ ಒಡಂಬಡಿಕೆಯ ಮಂಜೂಷವನ್ನು ತರಬೇಕು. ಪರಿಶುದ್ಧ ಸ್ಥಳಕ್ಕೂ ಮಹಾಪರಿಶುದ್ಧ ಸ್ಥಳಕ್ಕೂ ಮಧ್ಯದಲ್ಲಿ ಆ ಪರದೆಯನ್ನು ವಿಂಗಡಿಸಬೇಕು.
ಆತನು ಹೇಳಿದ್ದೇನೆಂದರೆ: “ನಿನ್ನ ಸಹೋದರನಾದ ಆರೋನನೊಡನೆ ಮಾತಾಡು. ಅವನು ತನಗೆ ಇಷ್ಟಬಂದಾಗಲೆಲ್ಲಾ ತೆರೆಯ ಹಿಂದಿರುವ ಮಹಾ ಪವಿತ್ರಸ್ಥಳದೊಳಕ್ಕೆ ಹೋಗಬಾರದೆಂದು ಅವನಿಗೆ ಹೇಳು. ಆ ತೆರೆಯ ಹಿಂದೆ ಇರುವ ಕೋಣೆಯೊಳಗೆ ಪವಿತ್ರ ಪೆಟ್ಟಿಗೆಯು ಇರುತ್ತದೆ. ಕೃಪಾಸನವು ಪವಿತ್ರ ಪೆಟ್ಟಿಗೆಯ ಮೇಲ್ಭಾಗದಲ್ಲಿರುತ್ತದೆ. ಕೃಪಾಸನದ ಮೇಲೆ ಮೇಘದಲ್ಲಿ ನಾನು ಕಾಣಿಸಿಕೊಳ್ಳುತ್ತೇನೆ. ಆರೋನನು ಆ ಕೋಣೆಯೊಳಗೆ ಹೋದರೆ ಸಾಯುವನು!
ಬಳಿಕ ಮೋಶೆಯು ಪವಿತ್ರಪೆಟ್ಟಿಗೆಯನ್ನು ಪವಿತ್ರಗುಡಾರದೊಳಗೆ ತಂದನು. ಅದನ್ನು ಸಂರಕ್ಷಿಸುವುದಕ್ಕಾಗಿ ಸರಿಯಾದ ಸ್ಥಳದಲ್ಲಿ ಪರದೆಯನ್ನು ಹಾಕಿದನು. ಹೀಗೆ ಒಡಂಬಡಿಕೆ ಪೆಟ್ಟಿಗೆಯನ್ನು ಪರದೆಯ ಹಿಂಭಾಗದಲ್ಲಿರಿಸಿ ಸಂರಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು.
ಆಗ ಯಾಜಕರು ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಅದರ ಸರಿಯಾದ ಸ್ಥಳದಲ್ಲಿ ಇಟ್ಟರು. ಇದು ಆಲಯದ ಮಹಾ ಪವಿತ್ರಸ್ಥಳವಾಗಿತ್ತು. ಒಡಂಬಡಿಕೆಯ ಪೆಟ್ಟಿಗೆಯನ್ನು ಕೆರೂಬಿಗಳ ರೆಕ್ಕೆಗಳ ಅಡಿಯಲ್ಲಿ ಇಟ್ಟರು.
ಅವರು ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿದರು ಮತ್ತು ಕಂಬಗಳನ್ನು ಚಿನ್ನದಿಂದ ಹೊದಿಸಿದರು. ಬಳಿಕ ಅವರು ಕಂಬಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿದರು. ಅವರು ಕಂಬಗಳಿಗೆ ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು.
ಇಪ್ಪತ್ತು ಕಂಬಗಳನ್ನು ಮತ್ತು ಆ ಕಂಬಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳಿಗೆ ಬೆಳ್ಳಿಯ ಕಂಬಿಗಳನ್ನು ಮಾಡಿಸಬೇಕು.
ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಅವುಗಳನ್ನು ಚಿನ್ನದಿಂದ ಹೊದಿಸಬೇಕು. ನಾಲ್ಕು ಕಂಬಗಳ ಮೇಲೆ ಚಿನ್ನದಿಂದ ಮಾಡಿದ ಕೊಂಡಿಗಳನ್ನು ಹಾಕಿಸಬೇಕು. ಕಂಬಗಳ ಕೆಳಗೆ ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಹಾಕಿಸಬೇಕು. ಬಳಿಕ ಚಿನ್ನದ ಕೊಂಡಿಗಳಲ್ಲಿ ಪರದೆಯನ್ನು ತೂಗುಹಾಕಿಸಬೇಕು.
ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.
ದೇವಾಲಯದ ಹಿಂಭಾಗದಲ್ಲಿ ಅವರು ಮೂವತ್ತು ಅಡಿ ಉದ್ದವಾಗಿರುವ ಒಂದು ಕೊಠಡಿಯನ್ನು ನಿರ್ಮಿಸಿದ್ದರು. ಈ ಕೊಠಡಿಯ ಗೋಡೆಗಳಿಗೂ ದೇವದಾರು ಮರದ ಹಲಗೆಗಳನ್ನು ನೆಲದಿಂದ ಮಾಳಿಗೆಯವರೆಗೆ ಹೊದಿಸಿದ್ದರು. ಈ ಕೊಠಡಿಯನ್ನು ಮಹಾ ಪವಿತ್ರಸ್ಥಳವೆಂದು ಕರೆದರು.
ಸೊಲೊಮೋನನು ಮಹಾಪವಿತ್ರ ಸ್ಥಳವನ್ನು ತಯಾರಿಸಿದನು. ಅದು ಇಪ್ಪತ್ತು ಮೊಳ ಉದ್ದ ಮತ್ತು ಇಪ್ಪತ್ತು ಮೊಳ ಅಗಲವಿತ್ತು. ದೇವಾಲಯದ ಅಗಲದಷ್ಟೇ ಅದು ಅಗಲವಿತ್ತು. ಅದರ ಗೋಡೆಗಳನ್ನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು. ಆ ಬಂಗಾರವು ಇಪ್ಪತ್ತಮೂರು ಟನ್ ತೂಕವಿತ್ತು.