ವಿಮೋಚನಕಾಂಡ 27:1 - ಪರಿಶುದ್ದ ಬೈಬಲ್1 ಯೆಹೋವನು ಮೋಶೆಗೆ, “ಜಾಲೀಮರದಿಂದ ಯಜ್ಞವೇದಿಕೆಯನ್ನು ಮಾಡಿಸಬೇಕು. ಈ ಯಜ್ಞವೇದಿಕೆಯು ಚೌಕವಾಗಿರಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ, ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿ ಮಾಡಿಸಬೇಕು. ಅದರ ಎತ್ತರವು ಮೂರು ಮೊಳವಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಬಲಿಪೀಠವನ್ನು ಜಾಲೀಮರದಿಂದ ಮಾಡಿಸಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಹಾಗು ಮೂರು ಮೊಳ ಎತ್ತರವಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿ ಮಾಡಿಸಬೇಕು; ಅದರ ಎತ್ತರ ಮೂರು ಮೊಳವಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಇದಲ್ಲದೆ ಜಾಲಿ ಮರದಿಂದ ಬಲಿಪೀಠವನ್ನು ಮಾಡಬೇಕು. ಅದರ ಎತ್ತರವು ಸುಮಾರು ಒಂದು ಮೀಟರ್ ಇರಬೇಕು. ಅದರ ಉದ್ದ ಮತ್ತು ಅಗಲವು ಸುಮಾರು ಎರಡೂವರೆ ಮೀಟರ್ ಚಚ್ಚೌಕವಾಗಿರಬೇಕು. ಅಧ್ಯಾಯವನ್ನು ನೋಡಿ |
ಆದರೆ ಸರ್ವಾಂಗಹೋಮ ಅರ್ಪಿಸುವ ಯಜ್ಞವೇದಿಕೆಯ ಮೇಲೆ ಮತ್ತು ಧೂಪಾರ್ಪಣೆಯ ಯಜ್ಞವೇದಿಕೆಯ ಮೇಲೆ ಧೂಪವರ್ಪಿಸಲು ಆರೋನನ ಸಂತತಿಯವರನ್ನು ಮಾತ್ರ ಆರಿಸಿಕೊಳ್ಳಲಾಗಿತ್ತು. ದೇವರ ನಿವಾಸದ ಮಹಾಪವಿತ್ರ ಸ್ಥಳದಲ್ಲಿ ಆರೋನನ ಸಂತತಿಯವರೇ ಎಲ್ಲಾ ಕೆಲಸಕಾರ್ಯಗಳನ್ನು ಮಾಡುತ್ತಿದ್ದರು. ಅಲ್ಲದೆ ಇಸ್ರೇಲ್ ಜನರನ್ನು ಶುದ್ಧೀಕರಿಸಲು ಶುದ್ಧೀಕರಣ ಆಚಾರವನ್ನು ಅವರೇ ಮಾಡುತ್ತಿದ್ದರು. ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ ಎಲ್ಲಾ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಅವರು ಅನುಸರಿಸುತ್ತಿದ್ದರು.
ಬಳಿಕ ಅವರು ವೇದಿಕೆಯಲ್ಲಿ ಆರಾಧನೆಗಾಗಿ ಉಪಯೋಗಿಸಲ್ಪಡುವ ಎಲ್ಲಾ ವಸ್ತುಗಳನ್ನು ಒಟ್ಟಾಗಿ ಸೇರಿಸಬೇಕು. ಅವುಗಳು ಯಾವುವೆಂದರೆ, ಅಗ್ಗಿಷ್ಟಿಗೆಗಳು, ಮುಳ್ಳುಚಮಚಗಳು, ಸಲಿಕೆಗಳು ಮತ್ತು ಬೋಗುಣಿಗಳು. ಅವರು ಇವುಗಳನ್ನು ತಾಮ್ರದ ವೇದಿಕೆಯ ಮೇಲೆ ಇಡಬೇಕು. ಬಳಿಕ ಅವರು ಶ್ರೇಷ್ಠವಾದ ತೊಗಲಿನ ಹೊದಿಕೆಯನ್ನು ಇವುಗಳಿಗೆಲ್ಲ ಹೊದಿಸಿ, ಹೊರುವ ಕೋಲುಗಳನ್ನು ವೇದಿಕೆಯ ಬಳೆಗಳಲ್ಲಿ ಸೇರಿಸಬೇಕು.