Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 27:16 - ಪರಿಶುದ್ದ ಬೈಬಲ್‌

16 “ಅಂಗಳದ ದ್ವಾರವನ್ನು ಮುಚ್ಚುವುದಕ್ಕೆ ಇಪ್ಪತ್ತು ಮೊಳ ಉದ್ದದ ಪರದೆಯನ್ನು ಮಾಡಿಸಬೇಕು. ಪರದೆಯನ್ನು ಉತ್ತಮ ನಾರಿನ ಬಟ್ಟೆಯಿಂದ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಮಾಡಿಸಬೇಕು. ಆ ಪರದೆಯಲ್ಲಿ ಅಲಂಕೃತವಾದ ಚಿತ್ರಗಳನ್ನು ಬುಟೇದಾರೀ ಕೆಲಸದವರಿಂದ ಮಾಡಿಸಬೇಕು. ಆ ಪರದೆಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೇಕಲ್ಲುಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆಯೂ ಇರಬೇಕು. ಅದನ್ನು ನಯವಾಗಿ ಹೊಸೆದ ನಾರಿನ ನೂಲು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ಗದ್ದಿಗೆ ಕಲ್ಲುಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆ ಇರಬೇಕು. ಅದನ್ನು ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೇ ಕಲ್ಲುಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅಂಗಳದ ಬಾಗಲಲ್ಲೇ ಇಪ್ಪತ್ತು ಮೊಳದ ಪರದೆಯು ಇರಬೇಕು. ಅದನ್ನು ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ಬುಟೇದಾರೀ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಲಿಗೆ ನಾಲ್ಕು ಕಂಬಗಳೂ ನಾಲ್ಕು ಗದ್ದಿಗೇ ಕಲ್ಲುಗಳೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಗುಡಾರದ ಅಂಗಳದ ದ್ವಾರಕ್ಕಾಗಿ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸಮಾಡಿದ ಇಪ್ಪತ್ತು ಮೊಳದ ಪರದೆ, ಅದಕ್ಕೆ ನಾಲ್ಕು ಸ್ತಂಭಗಳು ಮತ್ತು ನಾಲ್ಕು ಗದ್ದಿಗೇ ಕಲ್ಲುಗಳಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 27:16
10 ತಿಳಿವುಗಳ ಹೋಲಿಕೆ  

“ಬಳಿಕ ಪವಿತ್ರಗುಡಾರದ ಪ್ರವೇಶಸ್ಥಳವನ್ನು ಮುಚ್ಚುವುದಕ್ಕೆ ಒಂದು ಪರದೆಯನ್ನು ಮಾಡಿಸಬೇಕು. ಈ ಪರದೆಯನ್ನು ನೀಲಿ, ನೇರಳೆ, ಕೆಂಪು ದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಮಾಡಿಸಿ ಅದರಲ್ಲಿ ಚಿತ್ರಗಳನ್ನು ಕಸೂತಿ ಹಾಕಿಸಬೇಕು.


ಆಕೆಯು ಕಸೂತಿ ರಚಿತವಾದ ವಸ್ತ್ರಗಳನ್ನು ಧರಿಸಿಕೊಂಡು ತನ್ನ ಸಖಿಯರಾದ ಕನ್ಯಾಪರಿವಾರದೊಡನೆ ರಾಜನ ಬಳಿಗೆ ಬರುವಳು.


‘ಖಂಡಿತವಾಗಿ ಅವರು ಗೆದ್ದಿದ್ದಾರೆ, ತಾವು ಸೋಲಿಸಿದ ಜನರಿಂದ ವಸ್ತುಗಳನ್ನು ಪಡೆಯುತ್ತಿದ್ದಾರೆ! ಆ ವಸ್ತುಗಳನ್ನು ತಮ್ಮಲ್ಲಿಯೇ ಹಂಚಿಕೊಳ್ಳುತ್ತಿದ್ದಾರೆ! ಪ್ರತಿಯೊಬ್ಬ ಸೈನಿಕನು ಒಬ್ಬಿಬ್ಬರು ಹುಡುಗಿಯರನ್ನು ತೆಗೆದುಕೊಳ್ಳುತ್ತಿರಬೇಕು. ಸೀಸೆರನು ವರ್ಣರಂಜಿತ ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು. ಹೌದು! ವಿಜಯಿ ಸೀಸೆರನು ಧರಿಸಲು ಬಣ್ಣಬಣ್ಣದ ಒಂದು ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು; ಅಥವಾ ಎರಡು ಬಟ್ಟೆಗಳನ್ನು ತೆಗೆದುಕೊಳ್ಳುತ್ತಿರಬಹುದು.’


ಬಳಿಕ ಅವರು ಶ್ರೇಷ್ಠವಾದ ನಾರುಬಟ್ಟೆಯಿಂದಲೂ ಮತ್ತು ನೀಲಿ, ನೇರಳೆ, ಕೆಂಪುದಾರಗಳಿಂದಲೂ ನಡುಕಟ್ಟನ್ನು ಮಾಡಿದರು. ಈ ಬಟ್ಟೆಗೆ ಕಸೂತಿ ಹಾಕಲಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಈ ವಸ್ತುಗಳನ್ನು ಮಾಡಲಾಯಿತು.


ಬಳಿಕ ಗುಡಾರದ ಬಾಗಿಲಿಗೆ ಪರದೆಯನ್ನು ಮಾಡಿದರು. ಅವರು ಈ ಪರದೆಯನ್ನು ಮಾಡಲು ನೀಲಿ, ನೇರಳೆ, ಕೆಂಪುದಾರವನ್ನು, ಶ್ರೇಷ್ಠ ನಾರುಬಟ್ಟೆಯನ್ನು ಉಪಯೋಗಿಸಿದರು ಮತ್ತು ಅವರು ಚಿತ್ರಗಳನ್ನು ಅದರಲ್ಲಿ ಹೆಣೆದರು.


“ಹೆಣೆದ ಅಂಗಿಯನ್ನು ಮತ್ತು ಮುಂಡಾಸವನ್ನು ಮಾಡಲು ಉತ್ಕೃಷ್ಟವಾದ ನಾರಿನ ಬಟ್ಟೆಯನ್ನು ಉಪಯೋಗಿಸು. ನಡುಕಟ್ಟನ್ನು ಬುಟ್ಟೀದಾರಿ ಕೆಲಸದಿಂದ ಮಾಡಿಸಬೇಕು.


“ಪವಿತ್ರಗುಡಾರದ ಒಳಭಾಗವನ್ನು ವಿಂಗಡಿಸಲು ಉತ್ತಮವಾದ ಹುರಿನಾರಿನ ಬಟ್ಟೆಯಿಂದ ಒಂದು ವಿಶೇಷ ಪರದೆಯನ್ನು ಮಾಡಿಸಬೇಕು. ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಪರದೆಯ ಮೇಲೆ ಕೆರೂಬಿಗಳ ಚಿತ್ರಗಳನ್ನು ಕಸೂತಿಹಾಕಿಸಬೇಕು.


ಇನ್ನೊಂದು ಕಡೆಯಲ್ಲಿ ಹದಿನೈದು ಮೊಳ ಉದ್ದದ ಪರದೆಗಳು, ಮೂರು ಕಂಬಗಳು; ಮೂರು ಗದ್ದಿಗೇಕಲ್ಲುಗಳು ಇರಬೇಕು.


ಅಂಗಳದ ಸುತ್ತಲಿರುವ ಕಂಬಗಳನ್ನೆಲ್ಲ ಬೆಳ್ಳಿಯ ಪರದೆ ಕೋಲುಗಳೊಡನೆ ಜೋಡಿಸಬೇಕು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದಲೂ ಕಂಬಗಳ ಗದ್ದಿಗೇಕಲ್ಲುಗಳನ್ನು ತಾಮ್ರದಿಂದಲೂ ಮಾಡಿಸಬೇಕು.


ಅವರು ಅಂಗಳದ ಪರದೆಗಳನ್ನೂ ಅಂಗಳದ ಪ್ರವೇಶದ್ವಾರದ ಪರದೆಯನ್ನೂ ನೋಡಿಕೊಳ್ಳಬೇಕು. ಈ ಅಂಗಳವು ಪವಿತ್ರ ಗುಡಾರದ ಮತ್ತು ವೇದಿಕೆಯ ಸುತ್ತಲೂ ಇತ್ತು. ಅವರು ಹಗ್ಗಗಳನ್ನೂ ಪರದೆಗಳೊಂದಿಗೆ ಉಪಯೋಗಿಸುವ ಪ್ರತಿಯೊಂದನ್ನೂ ನೋಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು