Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 27:19 - ಪರಿಶುದ್ದ ಬೈಬಲ್‌

19 ಪವಿತ್ರಗುಡಾರದ ಉಪಕರಣಗಳನ್ನೂ ಗುಡಾರದ ಗೂಟಗಳನ್ನೂ ಗುಡಾರದ ಸುತ್ತಲೂ ಇರುವ ಪರದೆಯ ಗೂಟಗಳನ್ನೂ ತಾಮ್ರದಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಗುಡಾರದ ಸಕಲವಿಧವಾದ ಕೆಲಸಕ್ಕೆ ಬೇಕಾದ ಉಪಕರಣಗಳೂ, ಗುಡಾರದ ಗೂಟಗಳೂ, ಅಂಗಳದ ಗೂಟಗಳೂ ತಾಮ್ರದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಗುಡಾರದ ಎಲ್ಲಾ ವಿಧ ಕೆಲಸಕ್ಕೆ ಬೇಕಾದ ಉಪಕರಣಗಳು, ಗುಡಾರದ ಹಾಗು ಅಂಗಳದ ಗೂಟಗಳು ತಾಮ್ರದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಗುಡಾರದ ಸಕಲವಿಧವಾದ ಕೆಲಸಕ್ಕೆ ಬೇಕಾದ ಉಪಕರಣಗಳೂ ಗುಡಾರದ ಗೂಟಗಳೂ ಅಂಗಳದ ಗೂಟಗಳೂ ತಾಮ್ರದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಗುಡಾರದ ಕೆಲಸಕ್ಕೆ ಬೇಕಾಗುವ ಎಲ್ಲಾ ಉಪಕರಣಗಳು, ಅಂಗಳದ ಸುತ್ತಲೂ ಇರುವ ಎಲ್ಲಾ ಗೂಟಗಳೂ ಕಂಚಿನಿಂದ ಮಾಡಿದ್ದವುಗಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 27:19
14 ತಿಳಿವುಗಳ ಹೋಲಿಕೆ  

“ಮೂಲೇ ಕಲ್ಲು, ಗುಡಾರದ ಗೂಟ, ಯುದ್ಧದ ಬಿಲ್ಲು ಮತ್ತು ಮುನ್ನುಗ್ಗುವ ಸೈನ್ಯ, ಇವೆಲ್ಲವು ಒಟ್ಟಾಗಿ ಯೆಹೂದಿಂದ ಬರುವದು.


ನಮ್ಮ ಹಬ್ಬಗಳನ್ನು ಆಚರಿಸುವ ನಗರವಾದ ಚೀಯೋನನ್ನು ನೋಡಿರಿ. ಮನೋಹರವಾದ ವಿಶ್ರಾಂತಿ ಸ್ಥಳವಾದ ಜೆರುಸಲೇಮನ್ನು ನೋಡಿರಿ. ಜೆರುಸಲೇಮು ಎಂದಿಗೂ ಕದಲದ ಗುಡಾರವಾಗಿದೆ. ಆಕೆಯನ್ನು ಭದ್ರವಾಗಿ ಹಿಡಿದುಕೊಂಡಿರುವ ಗೂಟಗಳು ಎಂದಿಗೂ ಕೀಳಲ್ಪಡುವದಿಲ್ಲ. ಆಕೆಯ ಹಗ್ಗಗಳು ಎಂದಿಗೂ ತುಂಡಾಗುವದಿಲ್ಲ.


ಜ್ಞಾನಿಯ ನುಡಿಗಳು ಪ್ರಾಣಿಗಳನ್ನು ಮುನ್ನಡೆಸುವ ಚಾವಟಿಗಳಂತಿವೆ. ಅವನ ಉಪದೇಶಗಳು ಮುರಿಯದ ಮೊಳೆಗಳಂತಿವೆ. ಅವುಗಳೆಲ್ಲ ಒಬ್ಬನೇ ಕುರುಬನಿಂದ (ದೇವರಿಂದ) ಬಂದಿವೆ.


“ಈಗಲಾದರೋ ನೀನು ನಮ್ಮ ಮೇಲೆ ದಯೆ ತೋರಿಸಿರುವೆ. ಸೆರೆಯಲ್ಲಿದ್ದ ನಿನ್ನ ಜನರಲ್ಲಿ ಕೆಲವರು ಅಲ್ಲಿಂದ ತಪ್ಪಿಸಿಕೊಂಡು ನಿನ್ನ ಪರಿಶುದ್ಧ ದೇಶದಲ್ಲಿ ವಾಸಿಸುವಂತೆ ಮಾಡಿರುವೆ; ಗುಲಾಮತನದಿಂದ ನಮ್ಮನ್ನು ಬಿಡುಗಡೆ ಮಾಡಿ ಹೊಸಜೀವ ಕೊಟ್ಟಿರುವೆ.


ಅಂಗಳದ ಸ್ತಂಭಗಳು ಮತ್ತು ಅವುಗಳ ಗದ್ದಿಗೇಕಲ್ಲುಗಳು, ಅಗುಳಿಗಳು, ಹಗ್ಗಗಳು ಮತ್ತು ಅವರ ಕೆಲಸಕ್ಕೆ ಬೇಕಾದ ಎಲ್ಲಾ ಉಪಕರಣಗಳು. ಅವರು ವರ್ಗಾಯಿಸಬೇಕಾದ ಮತ್ತು ಕಾವಲುಕಾಯಬೇಕಾದ ವಸ್ತುಗಳನ್ನು ನೀನು ಹೆಸರೆಸರಾಗಿ ಅವರಿಗೆ ವಹಿಸಿಕೊಡಬೇಕು.


ಅವರು ಪವಿತ್ರ ಗುಡಾರದ ಸುತ್ತಲಿನ ಅಂಗಳದ ಎಲ್ಲಾ ಕಂಬಗಳನ್ನು ನೋಡಿಕೊಳ್ಳಬೇಕಾಗಿತ್ತು. ಇದರಲ್ಲಿ ಎಲ್ಲಾ ಗದ್ದಿಗೇಕಲ್ಲುಗಳೂ ಗುಡಾರದ ಗೂಟಗಳೂ ಹಗ್ಗಗಳೂ ಸೇರಿವೆ.


ಅವರು ಅಂಗಳದ ಸುತ್ತಲಿರುವ ಪರದೆಗಳ ಗೋಡೆಯನ್ನೂ ಅದರ ಕಂಬಗಳನ್ನೂ ಗದ್ದಿಗೇಕಲ್ಲುಗಳನ್ನೂ ಅಂಗಳದ ಪ್ರವೇಶವನ್ನು ಮುಚ್ಚುವ ಪರದೆಯನ್ನೂ ಹಗ್ಗಗಳನ್ನೂ ಗುಡಾರದ ಗೂಟಗಳನ್ನೂ ದೇವದರ್ಶನದ ಪವಿತ್ರಗುಡಾರದ ಎಲ್ಲಾ ವಸ್ತುಗಳನ್ನೂ ಮೋಶೆಗೆ ತೋರಿಸಿದರು.


ಅದನ್ನು ಅಂಗಳದ ಸುತ್ತಲಿರುವ ಪರದೆಗಳ ಮತ್ತು ಬಾಗಿಲಿನ ಪರದೆಗಳ ಗದ್ದಿಗೇಕಲ್ಲುಗಳಿಗೂ ಉಪಯೋಗಿಸಲಾಯಿತು. ತಾಮ್ರವನ್ನು ಪವಿತ್ರಗುಡಾರದ ಮತ್ತು ಅಂಗಳದ ಸುತ್ತಲಿರುವ ಪರದೆಗಳ ಗೂಟಗಳನ್ನು ಮಾಡಲು ಉಪಯೋಗಿಸಲಾಯಿತು.


ಪವಿತ್ರಗುಡಾರದ ಎಲ್ಲಾ ಗೂಟಗಳು ಮತ್ತು ಅಂಗಳದ ಸುತ್ತಲಿದ್ದ ಪರದೆಗಳ ಗೂಟಗಳು ತಾಮ್ರದಿಂದ ಮಾಡಲ್ಪಟ್ಟಿದ್ದವು.


ಗುಡಾರದ ಗೂಟಗಳು, ಅಂಗಳದ ಗೂಟಗಳು ಮತ್ತು ಹಗ್ಗಗಳು,


“ಯಜ್ಞವೇದಿಕೆಯ ಉಪಕರಣಗಳನ್ನೆಲ್ಲಾ ತಾಮ್ರದಿಂದ ಮಾಡಿಸಬೇಕು. ಬಟ್ಟಲುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಮತ್ತು ಅಗ್ಗಿಷ್ಟಿಕೆಗಳನ್ನು ಮಾಡಿಸಬೇಕು. ಇವುಗಳನ್ನು ಯಜ್ಞವೇದಿಕೆಯಿಂದ ಬೂದಿಯನ್ನು ತೆಗೆದು ಶುಚಿಗೊಳಿಸುವುದಕ್ಕೆ ಉಪಯೋಗಿಸಬೇಕು.


ಅಂಗಳವು ನೂರು ಮೊಳ ಉದ್ದ ಮತ್ತು ಐವತ್ತು ಮೊಳ ಅಗಲ ಇರಬೇಕು. ಅಂಗಳದ ಸುತ್ತಲಿರುವ ಪರದೆಗಳ ಗೋಡೆಯು ಐದು ಮೊಳ ಎತ್ತರವಿರಬೇಕು. ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು. ಕಂಬಗಳ ಕೆಳಗಿರುವ ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಿಸಬೇಕು.


“ಉತ್ತಮವಾದ ಆಲಿವ್‌ಎಣ್ಣೆಯನ್ನು ತರಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು. ಪ್ರತಿ ಸಾಯಂಕಾಲ ಉರಿಸುವ ದೀಪಕ್ಕೆ ಈ ಎಣ್ಣೆಯನ್ನು ಉಪಯೋಗಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು