Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 27:2 - ಪರಿಶುದ್ದ ಬೈಬಲ್‌

2 ಈ ಯಜ್ಞವೇದಿಕೆಯ ನಾಲ್ಕು ಮೂಲೆಗಳಿಗೆ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಪ್ರತಿಯೊಂದು ಕೊಂಬೂ ಯಜ್ಞವೇದಿಕೆಗೆ ಜೋಡಿಸಲ್ಪಟ್ಟಿರಬೇಕು. ಹೀಗೆ ಅವು ಯಜ್ಞವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು. ಬಳಿಕ ಯಜ್ಞವೇದಿಕೆಯನ್ನು ತಾಮ್ರದ ತಗಡಿನಿಂದ ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಆ ಕೊಂಬುಗಳು ಯಜ್ಞವೇದಿಯಿಂದಲೇ ಬಂದವುಗಳಾಗಿರಬೇಕು. ಆ ಯಜ್ಞವೇದಿಗೆ ತಾಮ್ರದ ತಗಡುಗಳನ್ನು ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದನ್ನು ಚಚ್ಚೌಕವಾಗಿ ಮಾಡಿಸಬೇಕು. ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಅವು ಬಲಿಪೀಠದ ಅಂಗವಾಗಿರಬೇಕು. ಆ ಪೀಠಕ್ಕೆ ತಾಮ್ರದ ತಗಡುಗಳನ್ನು ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು; ಅವು ಯಜ್ಞವೇದಿಗೆ ಏಕವಾಗಿರಬೇಕು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಆ ಬಲಿಪೀಠಕ್ಕೆ ಏಕವಾಗಿರಬೇಕು. ಅವುಗಳನ್ನು ಕಂಚಿನಿಂದ ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 27:2
19 ತಿಳಿವುಗಳ ಹೋಲಿಕೆ  

ಯೆಹೋವನೇ ದೇವರು. ಆತನು ನಮ್ಮನ್ನು ಸ್ವೀಕರಿಸಿಕೊಳ್ಳುವನು. ಯಜ್ಞಕ್ಕೋಸ್ಕರ ಕುರಿಮರಿಯನ್ನು ಕಟ್ಟಿ ಯಜ್ಞವೇದಿಕೆಯ ಕೊಂಬುಗಳ ಸಮೀಪಕ್ಕೆ ಹೊತ್ತುಕೊಂಡು ಬನ್ನಿರಿ” ಎಂದು ಯಾಜಕರು ಉತ್ತರಿಸಿದರು.


ಅದೋನೀಯನೂ ಹೆದರಿಕೊಂಡು ಯಜ್ಞವೇದಿಕೆಯ ಬಳಿಗೆ ಹೋಗಿ, ಯಜ್ಞವೇದಿಕೆಯ ಕೊಂಬುಗಳನ್ನು ಹಿಡಿದುಕೊಂಡನು.


ಯಾಜಕನು ಸ್ವಲ್ಪ ರಕ್ತವನ್ನು ಧೂಪವೇದಿಕೆಯ ಮೂಲೆಗಳಿಗೆ ಹಚ್ಚಬೇಕು. (ಈ ವೇದಿಕೆಯು ಯೆಹೋವನ ಸನ್ನಿಧಿಯಲ್ಲಿರುವ ದೇವದರ್ಶನಗುಡಾರದಲ್ಲಿದೆ.) ಯಾಜಕನು ಹೋರಿಯ ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿಯಬೇಕು. (ಈ ವೇದಿಕೆಯು ದೇವದರ್ಶನಗುಡಾರದ ಬಾಗಿಲಲ್ಲಿ ಇರುತ್ತದೆ.)


ತರುವಾಯ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬಳಿಗೆ ಹೋಗು. ವೇದಿಕೆಯ ಕೊಂಬುಗಳಿಗೆ ನಿನ್ನ ಬೆರಳಿನಿಂದ ರಕ್ತವನ್ನು ಹಚ್ಚು. ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಕೆಯ ಬುಡಕ್ಕೆ ಸುರಿದುಬಿಡು.


ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.


ಅಂದು ರಾಜನಾದ ಸೊಲೊಮೋನನು ಆಲಯದ ಮುಂದಿನ ಅಂಗಳವನ್ನು ಪ್ರತಿಷ್ಠಿಸಿದನು. ಅವನು ಸರ್ವಾಂಗಹೋಮಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸಿದ್ದ ಪಶುಗಳ ಕೊಬ್ಬನ್ನು ಅಂಗಳದಲ್ಲಿ ಅರ್ಪಿಸಿದನು. ಯಾಕೆಂದರೆ ಯೆಹೋವನ ಮುಂದೆ ಇದ್ದ ಹಿತ್ತಾಳೆಯ ಯಜ್ಞವೇದಿಕೆಯು ಈ ಎಲ್ಲವನ್ನು ಹಿಡಿಸಲಾರದಷ್ಟು ಚಿಕ್ಕದಾಗಿತ್ತು.


ಯೋವಾಬನು ಈ ಸಂಗತಿಯನ್ನು ಕೇಳಿ ಹೆದರಿದನು. (ಅವನು ಅಬ್ಷಾಲೋಮನಿಗೆ ಬೆಂಬಲ ನೀಡಿಲ್ಲದಿದ್ದರೂ ಅದೋನೀಯನಿಗೆ ಬೆಂಬಲ ನೀಡಿದ್ದನು.) ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಕೆಯ ಕೊಂಬುಗಳನ್ನು ಹಿಡಿದುಕೊಂಡನು.


ತರುವಾಯ ಆರೋನನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಕೆಯ ಬಳಿಗೆ ಹೋಗುವನು. ಆರೋನನು ಯಜ್ಞವೇದಿಕೆಯನ್ನು ಶುದ್ಧೀಕರಿಸುವನು. ಆರೋನನು ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ಮತ್ತು ಹೋತದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಎಲ್ಲಾ ಮೂಲೆಗಳಿಗೆ ಹಚ್ಚುವನು.


ಬಳಿಕ ಮೋಶೆಯು ಹೋರಿಯನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ವೇದಿಕೆಯ ಎಲ್ಲಾ ಮೂಲೆಗಳಿಗೆ ರಕ್ತವನ್ನು ಹಚ್ಚಿದನು. ಹೀಗೆ ಮೋಶೆಯು ವೇದಿಕೆಯನ್ನು ಯಜ್ಞಗಳಿಗಾಗಿ ಶುದ್ಧಗೊಳಿಸಿ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದನು; ಜನರನ್ನು ಶುದ್ಧಿಮಾಡುವ ಯಜ್ಞಗಳನ್ನು ಸಮರ್ಪಿಸುವುದಕ್ಕಾಗಿ ವೇದಿಕೆಯನ್ನು ಪ್ರತಿಷ್ಠೆಗೊಳಿಸಿದನು.


ಯಾಜಕನು ಪಾಪಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದು,


ಬಳಿಕ ಯಾಜಕನು ರಕ್ತದಲ್ಲಿ ಸ್ವಲ್ಪವನ್ನು ವೇದಿಕೆಯ ಮೂಲೆಗಳಲ್ಲಿ ಹಾಕಬೇಕು. (ಈ ವೇದಿಕೆಯು ದೇವದರ್ಶನಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ಇರುತ್ತದೆ.) ಯಾಜಕನು ರಕ್ತವನ್ನೆಲ್ಲಾ ಸರ್ವಾಂಗಹೋಮ ಮಾಡುವ ವೇದಿಕೆಯ ಬುಡದಲ್ಲಿ ಸುರಿದುಬಿಡಬೇಕು. (ಈ ವೇದಿಕೆಯು ದೇವದರ್ಶನ ಗುಡಾರದ ಬಾಗಿಲಲ್ಲಿ ಇರುತ್ತದೆ.)


“ಯಜ್ಞವೇದಿಕೆಯ ಉಪಕರಣಗಳನ್ನೆಲ್ಲಾ ತಾಮ್ರದಿಂದ ಮಾಡಿಸಬೇಕು. ಬಟ್ಟಲುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಮತ್ತು ಅಗ್ಗಿಷ್ಟಿಕೆಗಳನ್ನು ಮಾಡಿಸಬೇಕು. ಇವುಗಳನ್ನು ಯಜ್ಞವೇದಿಕೆಯಿಂದ ಬೂದಿಯನ್ನು ತೆಗೆದು ಶುಚಿಗೊಳಿಸುವುದಕ್ಕೆ ಉಪಯೋಗಿಸಬೇಕು.


ಅವರು ಪವಿತ್ರಪೆಟ್ಟಿಗೆ, ಮೇಜು, ದೀಪಸ್ತಂಭ, ವೇದಿಕೆಗಳನ್ನು ಮತ್ತು ಪವಿತ್ರಸ್ಥಳದ ಸಾಮಗ್ರಿಗಳನ್ನು, ಪರದೆಯನ್ನು ಮತ್ತು ಅವುಗಳಿಗೆ ಸಂಬಂಧಪಟ್ಟ ಎಲ್ಲಾ ಕಷ್ಟಕರವಾದ ಕೆಲಸಗಳನ್ನು ನೋಡಿಕೊಳ್ಳಬೇಕಾಗಿತ್ತು.


ಅಹಾಜನು ದೇವಾಲಯದ ಎದುರಿನಲ್ಲಿ ಯೆಹೋವನ ಸನ್ನಿಧಿಯಲ್ಲಿದ್ದ ತಾಮ್ರದ ಯಜ್ಞವೇದಿಕೆಯನ್ನು ತೆಗೆಸಿದನು. ಈ ತಾಮ್ರದ ಯಜ್ಞವೇದಿಕೆಯು ಅಹಾಜನ ಯಜ್ಞವೇದಿಕೆ ಮತ್ತು ದೇವಾಲಯದ ನಡುವೆ ಇದ್ದಿತು. ಅಹಾಜನು ತಾಮ್ರದ ಯಜ್ಞವೇದಿಕೆಯನ್ನು ತನ್ನ ಸ್ವಂತ ಯಜ್ಞವೇದಿಕೆಯ ಉತ್ತರದಿಕ್ಕಿನಲ್ಲಿಡಿಸಿದನು.


ಸೊಲೊಮೋನನು ತಾಮ್ರದ ಯಜ್ಞವೇದಿಕೆಯನ್ನು ಮಾಡಿಸಿದನು. ಅದು ಇಪ್ಪತ್ತು ಮೊಳ ಉದ್ದ; ಇಪ್ಪತ್ತು ಮೊಳ ಅಗಲ; ಮತ್ತು ಹತ್ತು ಮೊಳ ಎತ್ತರವಿತ್ತು.


ಯಜ್ಞವೇದಿಯ ಮೇಲೆ ಬೆಂಕಿ ಹಾಕುವ ಸ್ಥಳದ ಎತ್ತರ ನಾಲ್ಕು ಮೊಳ. ಅದರ ನಾಲ್ಕು ಮೂಲೆಗಳು ಕೊಂಬಿನ ಆಕಾರದಂತಿದ್ದವು.


ಸರ್ವಶಕ್ತನಾದ ದೇವರು ಅವರನ್ನು ಕಾಪಾಡುವನು. ಸೈನಿಕರು ಶತ್ರುವನ್ನು ಜಯಿಸಲು ಕವಣೆ ಮತ್ತು ಕಲ್ಲುಗಳನ್ನು ಉಪಯೋಗಿಸುವರು. ಶತ್ರುಗಳ ರಕ್ತವನ್ನು ಚೆಲ್ಲುವರು. ಅದು ದ್ರಾಕ್ಷಾರಸದಂತೆ ಹರಿಯುವದು. ಅದು ಯಜ್ಞವೇದಿಕೆಯ ಮೂಲೆಗಳಲ್ಲಿ ರಕ್ತವನ್ನು ಹೊಯಿದಂತೆ ಕಾಣುವುದು.


ಆ ತಾಮ್ರವನ್ನು ದೇವದರ್ಶನಗುಡಾರದ ಬಾಗಿಲಿನ ಗದ್ದಿಗೇಕಲ್ಲುಗಳನ್ನು ಮಾಡಲು ಉಪಯೋಗಿಸಲಾಯಿತು. ಯಜ್ಞವೇದಿಕೆಯನ್ನು ಮತ್ತು ತಾಮ್ರದ ಜಾಳಿಗೆಯನ್ನು ಮಾಡಲು ಅವರು ತಾಮ್ರವನ್ನು ಉಪಯೋಗಿಸಿದರು. ಯಜ್ಞವೇದಿಕೆಯ ಎಲ್ಲಾ ಉಪಕರಣಗಳನ್ನು ಮತ್ತು ಬಟ್ಟಲುಗಳನ್ನು ಮಾಡಲು ತಾಮ್ರವನ್ನು ಉಪಯೋಗಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು