ವಿಮೋಚನಕಾಂಡ 27:21 - ಪರಿಶುದ್ದ ಬೈಬಲ್21 ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆರೋನನೂ ಅವನ ಮಕ್ಕಳೂ ಸಾಯಂಕಾಲದಿಂದ ಉದಯದವರೆಗೂ ಯೆಹೋವನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರೂ ಅವರ ಸಂತತಿಯವರೂ ಈ ನಿಯಮವನ್ನು ಶಾಶ್ವತವಾಗಿ ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು. ಅಧ್ಯಾಯವನ್ನು ನೋಡಿ |
ಅವರು ಪ್ರತಿದಿನವೂ ಮುಂಜಾನೆ ಸಾಯಂಕಾಲಗಳಲ್ಲಿ ಸರ್ವಾಂಗಹೋಮಗಳನ್ನೂ ಧೂಪಗಳನ್ನೂ ಅರ್ಪಿಸುವರು; ಮೇಜಿನ ಮೇಲೆ ನೈವೇದ್ಯದ ರೊಟ್ಟಿಗಳನ್ನಿಡುವರು. ಅವರು ಬಂಗಾರದ ದೀಪಸ್ತಂಭಗಳ ಮೇಲಿನ ಆರತಿಗಳನ್ನು ಸರಿಯಾಗಿ ನೋಡಿಕೊಳ್ಳುವುದರಿಂದ ಅವು ಹಗಲಿನಲ್ಲಿಯೂ ಸಾಯಂಕಾಲದಲ್ಲಿಯೂ ಪ್ರಕಾಶಮಾನವಾಗಿ ಉರಿಯುವವು. ನಾವು ಬಹಳ ಎಚ್ಚರಿಕೆಯಿಂದ ನಮ್ಮ ದೇವರ ಸೇವೆಮಾಡುತ್ತೇವೆ. ಆದರೆ ನೀವು ಆತನನ್ನು ತೊರೆದುಬಿಟ್ಟಿದ್ದೀರಿ.
ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”