Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 27:9 - ಪರಿಶುದ್ದ ಬೈಬಲ್‌

9 “ಪವಿತ್ರಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ದಕ್ಷಿಣ ದಿಕ್ಕಿನಲ್ಲಿ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಈ ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪರಿಶುದ್ಧ ಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ಆ ದಕ್ಷಿಣ ಭಾಗದ ಅಂಗಳಕ್ಕೆ ಪರದೆಗಳು ಇರಬೇಕು. ಆ ಪರದೆಗಳನ್ನು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿಸಬೇಕು. ಅವು ನೂರು ಮೊಳ ಉದ್ದವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಗುಡಾರಕ್ಕೆ ಅಂಗಳವನ್ನು ಏರ್ಪಡಿಸಬೇಕು. ಆ ಅಂಗಳದ ದಕ್ಷಿಣ ಕಡೆಯಲ್ಲಿ ತೆರೆಗಳು ಇರಬೇಕು. ಹುರಿನಾರಿನ ಬಟ್ಟೆಯಿಂದ ತಯಾರಿಸಿದ ಆ ತೆರೆಗಳು ನೂರು ಮೊಳ ಉದ್ದವಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಗುಡಾರಕ್ಕೆ ಅಂಗಳವನ್ನು ಏರ್ಪಡಿಸಬೇಕು. ಆ ಅಂಗಳದ ತೆಂಕಣ ಕಡೆಯಲ್ಲಿ ತೆರೆಗಳು ಇರಬೇಕು. ಆ ತೆರೆಗಳು ಹುರಿನಾರಿನ ಬಟ್ಟೆಯಿಂದ ಉಂಟಾಗಿ ನೂರು ಮೊಳ ಉದ್ದವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಗುಡಾರದ ಅಂಗಳವನ್ನು ಮಾಡಬೇಕು. ಹೇಗೆಂದರೆ ದಕ್ಷಿಣ ದಿಕ್ಕಿನಲ್ಲಿರುವ ಅಂಗಳಕ್ಕೋಸ್ಕರ ನಯವಾಗಿ ಹೊಸೆದ ನಾರಿನ ಪರದೆಗಳನ್ನು ಮಾಡಬೇಕು. ಅವು ಸುಮಾರು ನಲವತ್ತೈದು ಮೀಟರ್ ಉದ್ದವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 27:9
29 ತಿಳಿವುಗಳ ಹೋಲಿಕೆ  

ಆ ಕಟ್ಟಡವು ಮೂರು ಅಂತಸ್ತಿನಷ್ಟು ಎತ್ತರವಿದ್ದು ಅದಕ್ಕೆ ಅನೇಕ ಮೇಲಂತಸ್ತುಗಳಿದ್ದವು. ಇಪ್ಪತ್ತು ಮೊಳದ ಒಳಗಿನ ಪ್ರಾಕಾರವು ಆಲಯಕ್ಕೂ ಕಟ್ಟಡಕ್ಕೂ ನಡುವೆ ಇತ್ತು. ಎದುರಿನ ಕೋಣೆಗಳು ಹೊರಗಿನ ಪ್ರಾಕಾರದ ನೆಲಗಟ್ಟಿಗೆ ಮುಖಮಾಡಿದ್ದವು.


ಒಳಗಿನ ಪ್ರಾಕಾರದಲ್ಲಿ ಎರಡು ಕೋಣೆಗಳಿದ್ದವು. ಒಂದು ಉತ್ತರದ ದ್ವಾರದ ಬಳಿಯಲ್ಲಿ ದಕ್ಷಿಣಕ್ಕೆ ಅಭಿಮುಖವಾಗಿತ್ತು. ಇನ್ನೊಂದು ದಕ್ಷಿಣದ ದ್ವಾರದ ಬಳಿಯಲ್ಲಿದ್ದು ಉತ್ತರಕ್ಕೆ ಅಭಿಮುಖವಾಗಿತ್ತು.


ಅನಂತರ ಅವನು ಪೂರ್ವದಲ್ಲಿದ್ದ ಒಳಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಅಲ್ಲಿದ್ದ ಪ್ರವೇಶದ್ವಾರವನ್ನು ಅಳತೆ ಮಾಡಿದನು. ಬೇರೆ ದ್ವಾರಗಳ ರೀತಿಯಲ್ಲಿ ಅದರ ಉದ್ದಳತೆಯಿತ್ತು.


ಆಮೇಲೆ ಅವನು ದಕ್ಷಿಣದ ದ್ವಾರದಿಂದ ಒಳಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಈ ಪ್ರವೇಶದ್ವಾರವನ್ನು ಅಳತೆ ಮಾಡಿದನು. ಇದು ಕೂಡಾ ಒಳಗಿನ ಪ್ರಾಕಾರದ ಬೇರೆ ದ್ವಾರಗಳಂತೆಯೇ ಉದ್ದಗಲವಿತ್ತು.


ಪ್ರಾಕಾರದ ಹೊರಗೆ ಉತ್ತರದ ಪ್ರವೇಶ ದ್ವಾರದಿಂದ ಒಳಗಿನ ಪ್ರಾಕಾರಕ್ಕೆ ಹೋಗಲು ದ್ವಾರವಿತ್ತು. ಇದು ಪೂರ್ವದಲ್ಲಿದ್ದ ದ್ವಾರದಂತಿತ್ತು. ಅವನು ಒಳಗೋಡೆಯ ದ್ವಾರದಿಂದ ಹೊರಗೋಡೆಯ ದ್ವಾರದ ತನಕ ಅಳೆದಾಗ, ದ್ವಾರದಿಂದ ದ್ವಾರಕ್ಕೆ ನೂರು ಮೊಳವಿತ್ತು.


ಆಮೇಲೆ ಹೊರಗಿನ ಪ್ರಾಕಾರದ ಗೋಡೆಯಲ್ಲಿದ್ದ ಉತ್ತರ ಪ್ರವೇಶದ್ವಾರದ ಉದ್ದಗಲವನ್ನು ಅವನು ಅಳತೆ ಮಾಡಿದನು.


ಅವನು ಕೈಸಾಲೆಯ ಎರಡು ಬದಿಗಳ ಗೋಡೆಯನ್ನು ಅಳತೆ ಮಾಡಿದಾಗ ಅದರ ಒಟ್ಟು ಅಳತೆ ಅರವತ್ತು ಮೊಳದಷ್ಟಿತ್ತು.


ಜೆರುಸಲೇಮಿನ ದೇವಾಲಯದ ಅಂಗಳಗಳಲ್ಲಿ ಈ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನಿಗೆ ಸ್ತೋತ್ರವಾಗಲಿ!


ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ.


ಬೇರೊಂದು ಸ್ಥಳದಲ್ಲಿ ಸಾವಿರ ದಿನಗಳಿರುವುದಕ್ಕಿಂತಲೂ ನಿನ್ನ ಆಲಯದಲ್ಲಿ ಒಂದು ದಿನವಿರುವುದೇ ಉತ್ತಮ. ದುಷ್ಟರ ಮನೆಯಲ್ಲಿ ವಾಸಿಸುವುದಕ್ಕಿಂತಲೂ ನನ್ನ ದೇವರ ಆಲಯದಲ್ಲಿ ದ್ವಾರಪಾಲಕನಾಗಿರುವುದೇ ಉತ್ತಮ.


ಮನಸ್ಸೆಯು ದೇವಾಲಯದ ಎರಡು ಅಂಗಳಗಳಲ್ಲಿ ಎಲ್ಲಾ ನಕ್ಷತ್ರಸಮೂಹಗಳಿಗೆ ವೇದಿಕೆಗಳನ್ನು ಕಟ್ಟಿಸಿದನು.


ಅಂದು ರಾಜನಾದ ಸೊಲೊಮೋನನು ಆಲಯದ ಮುಂದಿನ ಅಂಗಳವನ್ನು ಪ್ರತಿಷ್ಠಿಸಿದನು. ಅವನು ಸರ್ವಾಂಗಹೋಮಗಳನ್ನು, ಧಾನ್ಯಸಮರ್ಪಣೆಗಳನ್ನು ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸಿದ್ದ ಪಶುಗಳ ಕೊಬ್ಬನ್ನು ಅಂಗಳದಲ್ಲಿ ಅರ್ಪಿಸಿದನು. ಯಾಕೆಂದರೆ ಯೆಹೋವನ ಮುಂದೆ ಇದ್ದ ಹಿತ್ತಾಳೆಯ ಯಜ್ಞವೇದಿಕೆಯು ಈ ಎಲ್ಲವನ್ನು ಹಿಡಿಸಲಾರದಷ್ಟು ಚಿಕ್ಕದಾಗಿತ್ತು.


ನಂತರ ಅವರು ಒಳಾಂಗಣವನ್ನು ನಿರ್ಮಿಸಿದರು. ಅವರು ಒಳಾಂಗಣದ ಸುತ್ತಲೂ ಗೋಡೆಗಳನ್ನು ನಿರ್ಮಿಸಿದರು. ಪ್ರತಿಯೊಂದು ಗೋಡೆಯು ಕತ್ತರಿಸಿದ ಕಲ್ಲುಗಳ ಮೂರು ಸಾಲುಗಳನ್ನೂ ದೇವದಾರುಮರದ ತೊಲೆಗಳ ಒಂದು ಸಾಲನ್ನೂ ಹೊಂದಿತ್ತು.


ಅಂಗಳದ ಸುತ್ತಲೂ ಪರದೆಗಳ ಗೋಡೆಯನ್ನು ನಿಲ್ಲಿಸು. ಬಳಿಕ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಬೇಕು.


ಅವರು ಅಂಗಳದ ಸುತ್ತಲಿರುವ ಪರದೆಗಳ ಗೋಡೆಯನ್ನೂ ಅದರ ಕಂಬಗಳನ್ನೂ ಗದ್ದಿಗೇಕಲ್ಲುಗಳನ್ನೂ ಅಂಗಳದ ಪ್ರವೇಶವನ್ನು ಮುಚ್ಚುವ ಪರದೆಯನ್ನೂ ಹಗ್ಗಗಳನ್ನೂ ಗುಡಾರದ ಗೂಟಗಳನ್ನೂ ದೇವದರ್ಶನದ ಪವಿತ್ರಗುಡಾರದ ಎಲ್ಲಾ ವಸ್ತುಗಳನ್ನೂ ಮೋಶೆಗೆ ತೋರಿಸಿದರು.


ಅವರು ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಇಟ್ಟರು. ಇನ್ನೊಂದು ಭಾಗದ ಕೊನೆಯ ಪರದೆಯಲ್ಲಿಯೂ ಅದೇ ರೀತಿಯಾಗಿ ಮಾಡಿದರು.


ಇಪ್ಪತ್ತು ಕಂಬಗಳನ್ನು ಮತ್ತು ಆ ಕಂಬಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳಿಗೆ ಬೆಳ್ಳಿಯ ಕಂಬಿಗಳನ್ನು ಮಾಡಿಸಬೇಕು.


ಅಂಗಳದ ಸುತ್ತಲಿನ ಪರದೆಗಳು, ಕಂಬಗಳು, ಗದ್ದಿಗೇಕಲ್ಲುಗಳು, ಅಂಗಳದ ಬಾಗಿಲಿನ ಪರದೆ,


ತರುವಾಯ ಮೋಶೆಯು ಪವಿತ್ರಗುಡಾರದ ಅಂಗಳದ ಸುತ್ತಲೂ ಪರದೆಗಳನ್ನು ನಿಲ್ಲಿಸಿದನು. ಮೋಶೆಯು ವೇದಿಕೆಯನ್ನು ಅಂಗಳದಲ್ಲಿರಿಸಿದನು. ಬಳಿಕ ಅವನು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿಸಿದನು. ಹೀಗೆ ಮೋಶೆ ಯೆಹೋವನು ತನಗೆ ಕೊಟ್ಟ ಎಲ್ಲಾ ಕೆಲಸವನ್ನು ಮಾಡಿ ಮುಗಿಸಿದನು.


ಅವರು ಅಂಗಳದ ಪರದೆಗಳನ್ನೂ ಅಂಗಳದ ಪ್ರವೇಶದ್ವಾರದ ಪರದೆಯನ್ನೂ ನೋಡಿಕೊಳ್ಳಬೇಕು. ಈ ಅಂಗಳವು ಪವಿತ್ರ ಗುಡಾರದ ಮತ್ತು ವೇದಿಕೆಯ ಸುತ್ತಲೂ ಇತ್ತು. ಅವರು ಹಗ್ಗಗಳನ್ನೂ ಪರದೆಗಳೊಂದಿಗೆ ಉಪಯೋಗಿಸುವ ಪ್ರತಿಯೊಂದನ್ನೂ ನೋಡಿಕೊಂಡರು.


ಅಂಗಳದ ಪರದೆಗಳನ್ನು, ಪವಿತ್ರ ಗುಡಾರವನ್ನು ಮತ್ತು ವೇದಿಕೆಯ ಸುತ್ತಲೂ ಇರುವ ಅಂಗಳ ಪ್ರವೇಶದ್ವಾರದ ಪರದೆಯನ್ನು, ಅವುಗಳ ಹಗ್ಗಗಳನ್ನು ಮತ್ತು ಇವುಗಳ ಎಲ್ಲಾ ಉಪಕರಣಗಳನ್ನು ವರ್ಗಾಯಿಸಬೇಕು.


ಅಂಗಳದ ಸ್ತಂಭಗಳು ಮತ್ತು ಅವುಗಳ ಗದ್ದಿಗೇಕಲ್ಲುಗಳು, ಅಗುಳಿಗಳು, ಹಗ್ಗಗಳು ಮತ್ತು ಅವರ ಕೆಲಸಕ್ಕೆ ಬೇಕಾದ ಎಲ್ಲಾ ಉಪಕರಣಗಳು. ಅವರು ವರ್ಗಾಯಿಸಬೇಕಾದ ಮತ್ತು ಕಾವಲುಕಾಯಬೇಕಾದ ವಸ್ತುಗಳನ್ನು ನೀನು ಹೆಸರೆಸರಾಗಿ ಅವರಿಗೆ ವಹಿಸಿಕೊಡಬೇಕು.


ಇದಲ್ಲದೆ ಸೊಲೊಮೋನನು ಯಾಜಕರ ಅಂಗಳವನ್ನೂ ಮಹಾಅಂಗಳವನ್ನೂ ಮಹಾಅಂಗಳಕ್ಕೆ ಬಾಗಿಲುಗಳನ್ನೂ ಸಿದ್ಧಪಡಿಸಿದನು. ಅವುಗಳ ಕದಗಳನ್ನು ತಾಮ್ರದ ತಗಡಿನಿಂದ ಹೊದಿಸಲಾಗಿದ್ದವು.


ಆಮೇಲೆ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಆ ಪ್ರಾಕಾರದ ಸುತ್ತಲೂ ಮೂವತ್ತು ಕೋಣೆಗಳೂ ನೆಲಗಟ್ಟೂ ಇದ್ದವು. ಆ ಕೋಣೆಗಳು ಗೋಡೆಗೆ ತಾಗಿ ನೆಲಗಟ್ಟಿಗೆ ಮುಖ ಮಾಡಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು