Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:1 - ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಿಂದ ನಿನ್ನ ಬಳಿಗೆ ಬರಲು ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಾದ ನಾದಾಬ, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೂ ಹೇಳು. ಇವರು ಯಾಜಕರಾಗಿ ನನ್ನ ಸೇವೆ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 :ನನಗೆ ಯಾಜಕಸೇವೆ ಮಾಡಲು ನೀನು ನಿನ್ನ ಅಣ್ಣ ಆರೋನನನ್ನು ಮತ್ತು ಅವನ ಮಕ್ಕಳಾದ ನಾದಾಬ್, ಅಬೀಹು, ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರನ್ನು ಇಸ್ರಯೇಲರ ಮಧ್ಯೆಯಿಂದ ನನ್ನ ಬಳಿಗೆ ಕರೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಲ್ಲದೆ ನನಗೆ ಯಾಜಕಸೇವೆ ಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ಯರಲ್ಲಿಂದ ನಿನ್ನ ಹತ್ತಿರಕ್ಕೆ ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ನನಗೆ ಯಾಜಕ ಸೇವೆ ಮಾಡುವುದಕ್ಕೆ ನೀನು ಇಸ್ರಾಯೇಲರಿಂದ ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಎಂಬುವರನ್ನು ನಿನ್ನ ಹತ್ತಿರ ಬರಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:1
33 ತಿಳಿವುಗಳ ಹೋಲಿಕೆ  

ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”


ಯೋಹಾನಾನನ ಮಗನು ಅಜರ್ಯ. (ಸೊಲೊಮೋನನು ಜೆರುಸಲೇಮಿನಲ್ಲಿ ಕಟ್ಟಿದ ದೇವಾಲಯದಲ್ಲಿ ಅಜರ್ಯನು ಮಹಾಯಾಜಕನಾಗಿದ್ದನು.)


(ಇಸ್ರೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣ ಮಾಡಿ ಮೋಸೇರಕ್ಕೆ ಬಂದರು. ಆರೋನನು ಸತ್ತುಹೋದದ್ದು ಮತ್ತು ಅವನ ಶವವನ್ನು ಹೂಳಿಟ್ಟದ್ದು ಅಲ್ಲಿಯೇ. ಆರೋನನ ಬದಲಿಗೆ ಅವನ ಮಗನಾದ ಎಲ್ಲಾಜಾರನು ಯಾಜಕನಾದನು.


ಆದರೆ ನಾದಾಬ್ ಮತ್ತು ಅಬೀಹೂ ಸತ್ತರು. ಯೆಹೋವನು ತಿಳಿಸದ ಹೊಸ ಬೆಂಕಿಯಿಂದ ಧೂಪವನ್ನು ಯೆಹೋವನ ಮುಂದೆ ಅರ್ಪಿಸಿದ್ದರಿಂದ ಅವರು ಸತ್ತರು.


ಅವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 74,600 ಮಂದಿ.


ಆರೋನನಿಗೆ ಇನ್ನೂ ಜೀವಂತವಾಗಿದ್ದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಇಬ್ಬರು ಪುತ್ರರು ಇದ್ದರು. ಮೋಶೆಯು ಆರೋನನಿಗೆ ಮತ್ತು ಅವನ ಇಬ್ಬರು ಗಂಡುಮಕ್ಕಳಿಗೆ, “ಯಜ್ಞವೇದಿಕೆಯ ಮೇಲೆ ಅರ್ಪಿಸಿದ ಯಜ್ಞಗಳಲ್ಲಿಯೂ ಧಾನ್ಯನೈವೇದ್ಯದಲ್ಲಿಯೂ ಉಳಿದ ಭಾಗವನ್ನು ತೆಗೆದುಕೊಂಡು ನೀವು ತಿನ್ನಬೇಕು. ಆದರೆ ನೀವು ಅದಕ್ಕೆ ಹುಳಿಯನ್ನು ಸೇರಿಸದೆ ಯಜ್ಞವೇದಿಕೆಯ ಸಮೀಪದಲ್ಲಿಯೇ ತಿನ್ನಬೇಕು. ಯಾಕೆಂದರೆ ಆ ಸಮರ್ಪಣೆಯು ಬಹಳ ಪವಿತ್ರವಾಗಿದೆ.


ತರುವಾಯ ಆರೋನನ ಪುತ್ರರಲ್ಲಿ ನಾದಾಬ ಮತ್ತು ಅಬೀಹು ಎಂಬಿಬ್ಬರು ಧೂಪ ಹಾಕಲು ಒಂದೊಂದು ಬಟ್ಟಲನ್ನು ತೆಗೆದುಕೊಂಡು ಅದರಲ್ಲಿ ಬೇರೆ ಬೆಂಕಿಯನ್ನಿಟ್ಟು ಯೆಹೋವನ ಮುಂದೆ ಧೂಪಹಾಕಿದರು. ಯೆಹೋವನ ಆಜ್ಞೆಗನುಸಾರವಾದ ಬೆಂಕಿಯನ್ನು ಅವರು ಉಪಯೋಗಿಸಲಿಲ್ಲ.


“ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಅವರೊಂದಿಗೆ ಯಾಜಕ ವಸ್ತ್ರಗಳನ್ನೂ ಅಭಿಷೇಕ ತೈಲವನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯಿಂದ ತುಂಬಿರುವ ಪುಟ್ಟಿಯನ್ನೂ ತೆಗೆದುಕೊಂಡು ಬಾ.


ಮತ್ತು ಪವಿತ್ರಸ್ಥಳದಲ್ಲಿ ಯಾಜಕರು ಧರಿಸತಕ್ಕ ವಿಶೇಷವಾದ ಹೆಣೆದ ಬಟ್ಟೆಗಳು. ಈ ಬಟ್ಟೆಗಳನ್ನು ಯಾಜಕನಾದ ಆರೋನನು ಮತ್ತು ಅವನ ಪುತ್ರರು ಯಾಜಕ ಸೇವೆ ಮಾಡುವಾಗ ಧರಿಸಿಕೊಳ್ಳುವರು” ಎಂದು ಹೇಳಿದನು.


ಮಹಾಯಾಜಕನಾದ ಆರೋನನ ಎಲ್ಲಾ ವಿಶೇಷ ಬಟ್ಟೆಗಳು, ಆರೋನನ ಪುತ್ರರು ಯಾಜಕರಾಗಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ಎಲ್ಲಾ ಬಟ್ಟೆಗಳು.


“ಆರೋನನನ್ನು ಮತ್ತು ಅವನ ಪುತ್ರರನ್ನು ಈ ತೈಲದಿಂದ ಅಭಿಷೇಕಿಸು. ಅವರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾರೆಂದು ಇದು ತೋರಿಸುವುದು. ಆಗ ಅವರು ಅಭಿಷೇಕಿಸಲ್ಪಟ್ಟ ಯಾಜಕರಾಗಿ ನನ್ನ ಸೇವೆಮಾಡಬಹುದು.


“ಅಲ್ಲದೆ ನಾನು ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಪವಿತ್ರಗೊಳಿಸುವೆನು. ಆರೋನನನ್ನೂ ಅವನ ಪುತ್ರರನ್ನೂ ಪವಿತ್ರಗೊಳಿಸುವೆನು; ಆಗ ಅವರು ಯಾಜಕರಾಗಿ ನನಗೆ ಸೇವೆಮಾಡಲು ಶಕ್ತರಾಗುವರು.


ಬಳಿಕ ಅವರ ಸೊಂಟಗಳಿಗೆ ನಡುಕಟ್ಟುಗಳನ್ನು ಸುತ್ತಿಸು. ಅಂದಿನಿಂದ ಅವರು ಯಾಜಕರಾಗಿರುವರು. ವಿಶೇಷವಾದ ಈ ಕಟ್ಟಳೆಯು ಶಾಶ್ವತವಾಗಿರುವುದರಿಂದ ಅವರು ಯಾಜಕರಾಗಿರುವರು. ಹೀಗೆ ಆರೋನನನ್ನೂ ಅವನ ಪುತ್ರರನ್ನೂ ನೀನು ಯಾಜಕರನ್ನಾಗಿ ಮಾಡುವೆ.


ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಆರೋನನು ಮತ್ತು ಅವನ ಗಂಡುಮಕ್ಕಳು ಅಭಿಷೇಕಿಸಲ್ಪಟ್ಟ ಮತ್ತು ಪ್ರತ್ಯೇಕಿಸಲ್ಪಟ್ಟ ಯಾಜಕರಾಗಿ ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡಲು ಅವರು ಮಾಡತಕ್ಕದ್ದೇನೆಂಬುದನ್ನು ನಾನೀಗ ಹೇಳುವೆನು. ಯಾವ ಅಂಗದೋಷವಿಲ್ಲದ ಒಂದು ಹೋರಿಮರಿಯನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.


ನಿನ್ನ ಸಹೋದರನಾದ ಆರೋನನಿಗೆ ಮತ್ತು ಅವನ ಗಂಡುಮಕ್ಕಳಿಗೆ ಬಟ್ಟೆಗಳನ್ನು ತೊಡಿಸು. ಬಳಿಕ ಅವರನ್ನು ಯಾಜಕರನ್ನಾಗಿ ಮಾಡಲು ವಿಶೇಷ ತೈಲದಿಂದ ಅಭಿಷೇಕಿಸು. ಇದು ಅವರನ್ನು ಪ್ರತಿಷ್ಠಿಸುವುದು ಮತ್ತು ಪವಿತ್ರರನ್ನಾಗಿ ಮಾಡುವುದು. ಅವರು ಯಾಜಕರಾಗಿ ನನ್ನ ಸೇವೆ ಮಾಡುವರು.


ಬಳಿಕ ಮೋಶೆ, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿದರು.


ದೇವರು ಮೋಶೆಗೆ, “ನೀನು, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿಬಂದು ದೂರದಿಂದ ನನ್ನನ್ನು ಆರಾಧಿಸಬೇಕು.


ಆರೋನನು ಎಲೀಶೇಬಳನ್ನು ಮದುವೆಯಾದನು. (ಎಲೀಶೇಬಳು ಅಮ್ಮೀನಾದಾಬನ ಮಗಳು ಮತ್ತು ನಹಶೋನನ ತಂಗಿ.) ಆರೋನನಿಗೆ ಎಲೀಶೇಬಳಲ್ಲಿ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಗಂಡುಮಕ್ಕಳು ಹುಟ್ಟಿದರು.


ಒಮ್ಮೆ ತನ್ನ ವರ್ಗದ ಸರದಿ ಬಂದಾಗ, ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕಸೇವೆ ಸಲ್ಲಿಸುತ್ತಿದ್ದನು.


ಲೇವಿಯರು ತಮಗಿದ್ದ ಗೊಮಾಳಗಳನ್ನೂ ಹೊಲಗದ್ದೆಗಳನ್ನೂ ಬಿಟ್ಟು ಯೆಹೂದಕ್ಕೂ ಮತ್ತು ಜೆರುಸಲೇಮಿಗೂ ಬಂದರು. ಯಾಜಕರಾಗಿ ಸೇವೆಮಾಡಲು ಯಾರೊಬ್ಬಾಮನು ಮತ್ತು ಅವನ ಮಕ್ಕಳು ಲೇವಿಯರಿಗೆ ಅನುಮತಿ ಕೊಡಲಿಲ್ಲವಾದ್ದರಿಂದ ಲೇವಿಯರು ಹೀಗೆ ಮಾಡಿದರು.


ಇಸ್ರೇಲಿನ ಎಲ್ಲಾ ಕುಲಗಳಲ್ಲಿ ನಿನ್ನ ಕುಟುಂಬದವರನ್ನು ನನ್ನ ಯಾಜಕರನ್ನಾಗಿ ಆರಿಸಿಕೊಂಡೆನು. ಏಫೋದನ್ನು ಧರಿಸಿಕೊಳ್ಳುವುದಕ್ಕೂ ಯಜ್ಞವನ್ನು ಅರ್ಪಿಸುವುದಕ್ಕೂ ಧೂಪಹಾಕುವುದಕ್ಕೂ ನಾನು ಅವರನ್ನು ಆರಿಸಿಕೊಂಡೆನು. ಇಸ್ರೇಲರು ನನಗೆ ಅರ್ಪಿಸುವ ಯಜ್ಞಗಳಲ್ಲಿ ಮಾಂಸವನ್ನು ಪಡೆಯುವ ಅವಕಾಶವನ್ನೂ ನಾನು ನಿಮ್ಮ ಕುಲದವರಿಗೆ ನೀಡಿದೆನು.


ಅಮ್ರಾಮನ ಗಂಡುಮಕ್ಕಳು ಯಾರೆಂದರೆ: ಆರೋನ್ ಮತ್ತು ಮೋಶೆ. ಆರೋನನು ಮತ್ತು ಅವನ ಸಂತತಿಯವರು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟರು; ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪ ಸುಡುವುದಕ್ಕಾಗಿಯೂ ಆತನ ಸೇವೆಮಾಡುವುದಕ್ಕಾಗಿಯೂ ಯೆಹೋವನ ಹೆಸರಿನಲ್ಲಿ ಜನರನ್ನು ಸದಾಕಾಲ ಆಶೀರ್ವದಿಸುವುದಕ್ಕಾಗಿಯೂ ಆರಿಸಲ್ಪಟ್ಟರು.


ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.


ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳಲ್ಲಿ ಇವೇ ಆರೋನನಿಗೂ ಅವನ ಪುತ್ರರಿಗೂ ಕೊಡಲ್ಪಟ್ಟ ಭಾಗಗಳಾಗಿವೆ. ಆರೋನನೂ ಅವನ ಪುತ್ರರೂ ಯೆಹೋವನ ಯಾಜಕರಾಗಿ ಸೇವೆ ಮಾಡುವಾಗಲೆಲ್ಲಾ ಯಜ್ಞಗಳಲ್ಲಿ ಆ ಪಾಲನ್ನು ಪಡೆಯುವರು.


ಯಾಕೆಂದರೆ ನಿಮ್ಮ ದೇವರಾದ ಯೆಹೋವನು ಇಸ್ರೇಲ್ ಕುಲದವರಿಂದ ಲೇವಿಕುಲದವರನ್ನು ನಿರಂತರವಾಗಿ ಆತನ ಸೇವೆಮಾಡುವುದಕ್ಕೆ ಆರಿಸಿಕೊಂಡಿರುತ್ತಾನೆ.


ಸಮುವೇಲನು ಎಲ್ಕಾನನ ಮಗ. ಎಲ್ಕಾನನು ಯೆರೋಹಾಮನ ಮಗ. ಯೆರೋಹಾಮನು ಎಲೀಯೇಲನ ಮಗ. ಎಲೀಯೇಲನು ತೋಹನ ಮಗ.


ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಆತನು ಅವರ ಬಲವೂ ಗುರಾಣಿಯೂ ಆಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು