ವಿಮೋಚನಕಾಂಡ 28:12 - ಪರಿಶುದ್ದ ಬೈಬಲ್12 ಬಳಿಕ ಈ ಎರಡು ರತ್ನಗಳನ್ನು ಏಫೋದಿನ ಪ್ರತಿಭುಜದ ಪಟ್ಟಿಯಲ್ಲಿಡು. ಆರೋನನು ಯೆಹೋವನ ಮುಂದೆ ನಿಲ್ಲುವಾಗ ಈ ವಿಶೇಷ ಅಂಗಿಯನ್ನು ಧರಿಸಿಕೊಂಡಿರುವನು. ಇಸ್ರೇಲನ ಗಂಡುಮಕ್ಕಳ ಹೆಸರುಗಳುಳ್ಳ ಎರಡು ರತ್ನಗಳು ಏಫೋದಿನ ಮೇಲಿರುತ್ತವೆ. ದೇವರು ಇಸ್ರೇಲರನ್ನು ಜ್ಞಾಪಿಸಿಕೊಳ್ಳುವಂತೆ ಈ ರತ್ನಗಳು ಮಾಡುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋದಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗೆಲ್ಲಾ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇಸ್ರಯೇಲರ ಜ್ಞಾಪಕಾರ್ಥವಾಗಿ ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಕವಚದ ಪಟ್ಟಿಗಳಲ್ಲಿ ಬಿಗಿಸಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಬರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಕವಚದ ಪಟ್ಟಿಗಳಲ್ಲಿ ಬಿಗಿಸಬೇಕು. ಅವು ಇಸ್ರಾಯೇಲ್ಯರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗೆಲ್ಲಾ ಇಸ್ರಾಯೇಲ್ಯರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವದಕ್ಕಾಗಿ ತನ್ನ ಎರಡು ಭುಜಗಳ ಮೇಲೆ ಧರಿಸಿಕೊಂಡು ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆ ಎರಡು ರತ್ನಗಳನ್ನು ಏಫೋದಿನ ಹೆಗಲಿನ ಭಾಗದ ಮೇಲೆ ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು. ಅಧ್ಯಾಯವನ್ನು ನೋಡಿ |