ಪ್ರತಿಯೊಂದು ಕಂಬವೂ ಸುಮಾರು ಇಪ್ಪತ್ತೇಳು ಅಡಿ ಉದ್ದವಾಗಿತ್ತು. ಕಂಬಗಳ ಮೇಲಿದ್ದ ಬೋದಿಗೆಗಳನ್ನು ತಾಮ್ರದಿಂದ ನಿರ್ಮಿಸಿದ್ದರು. ಪ್ರತಿಯೊಂದು ಬೋದಿಗೆಯೂ ನಾಲ್ಕುವರೆ ಅಡಿ ಉದ್ದವಾಗಿತ್ತು. ಪ್ರತಿಯೊಂದು ಬೋದಿಗೆಯ ಮೇಲೆ ಜಾಲರಿಯ ಆಕಾರವಿತ್ತು ಮತ್ತು ದಾಳಿಂಬೆ ಹಣ್ಣುಗಳ ಆಕಾರಗಳಿದ್ದವು. ಇವೆಲ್ಲವುಗಳನ್ನು ತಾಮ್ರದಿಂದಲೇ ಮಾಡಿದ್ದರು. ಎರಡು ಕಂಬಗಳೂ ಒಂದೇ ರೀತಿಯ ಆಕಾರದಲ್ಲಿದ್ದವು.
“ಮಹಾಯಾಜಕನಿಗೆ ದೈವನಿರ್ಣಯದ ಪದಕವನ್ನು ಮಾಡಿಸು. ಏಫೋದನ್ನು ಮಾಡಿಸಿದಂತೆ ನಿಪುಣರಾದ ಕೆಲಸಗಾರರಿಂದ ಇದನ್ನು ಮಾಡಿಸಬೇಕು. ಚಿನ್ನದ ದಾರಗಳು, ಉತ್ಕೃಷ್ಟವಾದ ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪು ದಾರಗಳನ್ನು ಉಪಯೋಗಿಸಿ ಇದನ್ನು ಮಾಡಬೇಕು.