Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:28 - ಪರಿಶುದ್ದ ಬೈಬಲ್‌

28 ದೈವನಿರ್ಣಯದ ಪದಕದ ಬಳೆಗಳನ್ನು ಏಫೋದಿನ ಬಳೆಗಳಿಗೆ ಜೋಡಿಸಲು ನೀಲಿದಾರವನ್ನು ಉಪಯೋಗಿಸು. ಈ ರೀತಿಯಲ್ಲಿ ದೈವನಿರ್ಣಯದ ಪದಕವು ನಡುಕಟ್ಟಿಗೆ ಹತ್ತಿರವಾಗಿದ್ದು ಏಫೋದಿಗೆ ಬಿಗಿಯಾಗಿ ಅಂಟಿಕೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಎದೆಯ ಪದಕವು ಕಸೂತಿಹಾಕಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ, ಏಫೋದ್ ಕವಚದಿಂದ ಕಳಚಿಬೀಳದಂತೆಯೂ ಅದರ ಕೊಂಡಿಗಳನ್ನು ಏಫೋದ್ ಕವಚದ ಕೊಂಡಿಗಳಿಗೆ ನೀಲಿ ದಾರದಿಂದ ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಎದೆಫಲಕವು ಕಸೂತಿ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆ ಹಾಗು ಕವಚದಿಂದ ಕಳಚಿಬೀಳದಂತೆ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿದಾರದಿಂದ ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಪದಕವು ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆ ಎದೆಪದಕವನ್ನು ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ, ಎದೆಪದಕವು ಏಫೋದನ್ನು ಬಿಟ್ಟು ಅಲ್ಲಾಡದಂತೆಯೂ, ಅದರ ಉಂಗುರಗಳ ಮೂಲಕವಾಗಿ ಏಫೋದಿನ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:28
9 ತಿಳಿವುಗಳ ಹೋಲಿಕೆ  

“ಇಸ್ರೇಲರಿಗೆ ಈ ಸಂಗತಿಗಳನ್ನು ತಿಳಿಸು: ನನ್ನ ಅಪ್ಪಣೆಗಳನ್ನು ಜ್ಞಾಪಕಮಾಡುವುದಕ್ಕೆ ನಿಮಗೆ ಒಂದು ಗುರುತನ್ನು ಕೊಡುತ್ತೇನೆ. ನಿಮ್ಮ ಬಟ್ಟೆಗಳ ಮೂಲೆಯಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು. ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿದಾರದಿಂದ ಕೂಡಿರಬೇಕು. ನೀವು ಇವುಗಳನ್ನು ಇಂದಿನಿಂದ ಯಾವಾಗಲೂ ಧರಿಸಿಕೊಳ್ಳಬೇಕು.


ಚಿನ್ನದ ಪಟ್ಟಿಯನ್ನು ನೀಲಿದಾರಕ್ಕೆ ಬಿಗಿಯಾಗಿ ಕಟ್ಟಿಸಬೇಕು. ನೀಲಿದಾರವನ್ನು ಮುಂಡಾಸದ ಸುತ್ತಲೂ ಅದರಲ್ಲಿ ಕೆತ್ತಿಸಬೇಕು. ಚಿನ್ನದ ಪಟ್ಟಿಯು ಮುಂಡಾಸದ ಮುಂಭಾಗದಲ್ಲಿರಬೇಕು.


“ಏಫೋದಿನ ಒಳಗೆ ಹಾಕಿಕೊಳ್ಳಲು ಒಂದು ನಿಲುವಂಗಿಯನ್ನು ನೀಲಿಬಟ್ಟೆಯಿಂದ ಮಾಡಿಸಬೇಕು.


ಏಪೋದಿಗೆ ದೈವನಿರ್ಣಯದ ಪದಕಚೀಲಕ್ಕೆ ಬೇಕಾದ ಗೋಮೇಧಕರತ್ನಗಳು ಮತ್ತು ಇತರ ರತ್ನಗಳು” ಎಂದು ಹೇಳಿದನು.


“ಇವರು ಏಫೋದಿಗೆ ಸೇರಿಸಲ್ಪಟ್ಟಿರುವ ನಡುಕಟ್ಟನ್ನು ಬಹಳ ಎಚ್ಚರಿಕೆಯಿಂದ ಹೆಣೆಯಬೇಕು. ಏಫೋದನ್ನು ತಯಾರಿಸಿದಂತೆಯೇ ಈ ನಡುಕಟ್ಟನ್ನು ತಯಾರಿಸಬೇಕು. ಚಿನ್ನದ ದಾರಗಳು, ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಿ ಇದನ್ನು ಮಾಡಬೇಕು.


ಇನ್ನೆರಡು ಚಿನ್ನದ ಬಳೆಗಳನ್ನು ಮಾಡಿಸಿ ಅವುಗಳನ್ನು ಏಫೋದಿನ ಭುಜಪಟ್ಟಿಗಳ ಮುಂಭಾಗದ ಕೆಳಗೆ ಸಿಕ್ಕಿಸು. ಈ ಚಿನ್ನದ ಬಳೆಗಳನ್ನು ಏಫೋದಿನ ನಡುಕಟ್ಟಿನ ಮೇಲ್ಗಡೆ ಇರಿಸು.


“ಆರೋನನು ಪವಿತ್ರಸ್ಥಳವನ್ನು ಪ್ರವೇಶಿಸುವಾಗ, ದೈವನಿರ್ಣಯದ ಪದಕವನ್ನು ಧರಿಸಿಕೊಳ್ಳಬೇಕು. ಈ ರೀತಿ ಎದೆಯ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರುಗಳಿರಬೇಕು. ಅವನು ನ್ಯಾಯತೀರಿಸಲು ಧರಿಸಿಕೊಂಡಿರುವ ದೈವನಿರ್ಣಯದ ಪದಕದ ಮೇಲೆ ಈ ಹೆಸರುಗಳಿರುತ್ತವೆ. ಈ ರೀತಿಯಲ್ಲಿ ಇಸ್ರೇಲನ ಹನ್ನೆರಡು ಮಂದಿ ಗಂಡುಮಕ್ಕಳನ್ನು ಯೆಹೋವನಿಗೆ ಯಾವಾಗಲೂ ಜ್ಞಾಪಿಸಲಾಗುವುದು.


ತರುವಾಯ ಮೋಶೆಗೆ ಪವಿತ್ರಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಯಾಜಕರಿಗಾಗಿ ಮಾಡಿದ ಬಟ್ಟೆಗಳನ್ನು ಅಂದರೆ ಯಾಜಕನಾದ ಆರೋನನಿಗೆ ಮತ್ತು ಅವನ ಮಕ್ಕಳಿಗಾಗಿ ಮಾಡಿದ ವಿಶೇಷ ಬಟ್ಟೆಗಳನ್ನು ಅವರು ತೋರಿಸಿದರು. ಅವರು ಯಾಜಕರಾಗಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ಬಟ್ಟೆಗಳು ಇವುಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು