Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:29 - ಪರಿಶುದ್ದ ಬೈಬಲ್‌

29 “ಆರೋನನು ಪವಿತ್ರಸ್ಥಳವನ್ನು ಪ್ರವೇಶಿಸುವಾಗ, ದೈವನಿರ್ಣಯದ ಪದಕವನ್ನು ಧರಿಸಿಕೊಳ್ಳಬೇಕು. ಈ ರೀತಿ ಎದೆಯ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರುಗಳಿರಬೇಕು. ಅವನು ನ್ಯಾಯತೀರಿಸಲು ಧರಿಸಿಕೊಂಡಿರುವ ದೈವನಿರ್ಣಯದ ಪದಕದ ಮೇಲೆ ಈ ಹೆಸರುಗಳಿರುತ್ತವೆ. ಈ ರೀತಿಯಲ್ಲಿ ಇಸ್ರೇಲನ ಹನ್ನೆರಡು ಮಂದಿ ಗಂಡುಮಕ್ಕಳನ್ನು ಯೆಹೋವನಿಗೆ ಯಾವಾಗಲೂ ಜ್ಞಾಪಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನ್ಯಾಯತೀರ್ಪಿನ ಎದೆಯ ಪದಕದ ಮೇಲೆ ಇಸ್ರಾಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗೆಲ್ಲಾ ಆ ಹೆಸರುಗಳನ್ನು ಸತತವಾಗಿ ಯೆಹೋವನ ನೆನಪಿಗೆ ತರುವುದಕ್ಕಾಗಿ ಅದನ್ನು ತನ್ನ ಎದೆಯ ಮೇಲೆ ನಿತ್ಯವೂ ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ದೈವನಿರ್ಣಯದ ಚೀಲವುಳ್ಳ ಆ ಫಲಕದ ಮೇಲೆ ಇಸ್ರಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಅದನ್ನು ತನ್ನ ಎದೆಯ ಮೇಲೆ ಧರಿಸಿಕೊಂಡು ಪವಿತ್ರಸ್ಥಾನದೊಳಗೆ ಬರುವಾಗಲೆಲ್ಲಾ ಆ ಹೆಸರುಗಳನ್ನು ಸರ್ವೇಶ್ವರನಾದ ನನ್ನ ನೆನಪಿಗೆ ಸತತವಾಗಿ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದೈವನಿರ್ಣಯದ ಪದಕದ ಮೇಲೆ ಇಸ್ರಾಯೇಲ್ಯರ ಕುಲಗಳ ಹೆಸರುಗಳು ಬರೆದಿರುವದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗೆಲ್ಲಾ ಆ ಹೆಸರುಗಳನ್ನು ನಿತ್ಯವಾಗಿ ಯೆಹೋವನ ನೆನಪಿಗೆ ತರುವದಕ್ಕಾಗಿ ತನ್ನ ಹೃದಯದ ಮೇಲೆ ವಹಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲರ ಹೆಸರುಗಳನ್ನು ಯಾವಾಗಲೂ ಯೆಹೋವ ದೇವರ ಮುಂದೆ ಜ್ಞಾಪಕ ಮಾಡುವುದಕ್ಕಾಗಿ ನ್ಯಾಯದ ಎದೆಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:29
8 ತಿಳಿವುಗಳ ಹೋಲಿಕೆ  

ಬಳಿಕ ಈ ಎರಡು ರತ್ನಗಳನ್ನು ಏಫೋದಿನ ಪ್ರತಿಭುಜದ ಪಟ್ಟಿಯಲ್ಲಿಡು. ಆರೋನನು ಯೆಹೋವನ ಮುಂದೆ ನಿಲ್ಲುವಾಗ ಈ ವಿಶೇಷ ಅಂಗಿಯನ್ನು ಧರಿಸಿಕೊಂಡಿರುವನು. ಇಸ್ರೇಲನ ಗಂಡುಮಕ್ಕಳ ಹೆಸರುಗಳುಳ್ಳ ಎರಡು ರತ್ನಗಳು ಏಫೋದಿನ ಮೇಲಿರುತ್ತವೆ. ದೇವರು ಇಸ್ರೇಲರನ್ನು ಜ್ಞಾಪಿಸಿಕೊಳ್ಳುವಂತೆ ಈ ರತ್ನಗಳು ಮಾಡುವವು.


ದೈವನಿರ್ಣಯದ ಪದಕದೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಡು. ಆರೋನನು ಯೆಹೋವನ ಮುಂದೆ ಹೋಗುವಾಗ ಅವುಗಳು ಅವನ ಎದೆಯ ಮೇಲಿರುವವು. ಹೀಗೆ ಆರೋನನು ಯೆಹೋವನ ಮುಂದೆ ನಿಲ್ಲುವಾಗಲೆಲ್ಲಾ, ಜನರಿಗೆ ತೀರ್ಪು ನೀಡತಕ್ಕದ್ದನ್ನು ಯಾವಾಗಲೂ ತನ್ನ ಎದೆಯ ಮೇಲೆ ಹೊತ್ತುಕೊಂಡಿರುವನು.


ಸಹೋದರ ಸಹೋದರಿಯರೇ, ಇಸ್ರೇಲರೆಲ್ಲರೂ ರಕ್ಷಣೆ ಹೊಂದಬೇಕೆಂಬುದೇ ನನ್ನ ಮಹಾಭಿಲಾಷೆ. ನಾನು ದೇವರಲ್ಲಿ ಅದಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ.


ಅವರಲ್ಲೇ ಒಬ್ಬನು ಅವರಿಗೆ ನಾಯಕನಾಗಿರುವನು. ಆ ನಾಯಕನು ನನ್ನ ಜನರಿಂದಲೇ ಬರುವನು. ನಾನು ಹೇಳಿದರೆ ಮಾತ್ರ ಜನರು ನನ್ನ ಹತ್ತಿರಕ್ಕೆ ಬರಲು ಸಾಧ್ಯ. ಆದ್ದರಿಂದ ನಾನು ಆ ನಾಯಕನನ್ನು ನನ್ನ ಹತ್ತಿರ ಬರಲು ಹೇಳುವೆನು. ಅವನು ನನಗೆ ತುಂಬಾ ಹತ್ತಿರದವನಾಗುವನು.


ನನ್ನನ್ನು ನಿನ್ನ ಹೃದಯದ ಮೇಲೆ ಮುದ್ರೆಯನ್ನಾಗಿಯೂ, ನಿನ್ನ ಬೆರಳಿನಲ್ಲಿರುವ ಮುದ್ರೆಯೊತ್ತಿದ ಉಂಗುರದಂತೆಯೂ ಇಟ್ಟುಕೋ. ಪ್ರೀತಿಯು ಮರಣದಷ್ಟೇ ಬಲಿಷ್ಠ; ಕಾಮೋದ್ರೇಕವು ಸಮಾಧಿಯಷ್ಟೇ ಬಲಿಷ್ಠ. ಅದರ ಜ್ವಾಲೆಗಳು ಧಗಧಗಿಸುವ ಬೆಂಕಿ. ಅದು ಅತಿ ತೀಕ್ಷ್ಣವಾದ ಅಗ್ನಿಯೇ.


“ಮಹಾಯಾಜಕನಿಗೆ ದೈವನಿರ್ಣಯದ ಪದಕವನ್ನು ಮಾಡಿಸು. ಏಫೋದನ್ನು ಮಾಡಿಸಿದಂತೆ ನಿಪುಣರಾದ ಕೆಲಸಗಾರರಿಂದ ಇದನ್ನು ಮಾಡಿಸಬೇಕು. ಚಿನ್ನದ ದಾರಗಳು, ಉತ್ಕೃಷ್ಟವಾದ ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪು ದಾರಗಳನ್ನು ಉಪಯೋಗಿಸಿ ಇದನ್ನು ಮಾಡಬೇಕು.


ದೈವನಿರ್ಣಯದ ಪದಕದ ಬಳೆಗಳನ್ನು ಏಫೋದಿನ ಬಳೆಗಳಿಗೆ ಜೋಡಿಸಲು ನೀಲಿದಾರವನ್ನು ಉಪಯೋಗಿಸು. ಈ ರೀತಿಯಲ್ಲಿ ದೈವನಿರ್ಣಯದ ಪದಕವು ನಡುಕಟ್ಟಿಗೆ ಹತ್ತಿರವಾಗಿದ್ದು ಏಫೋದಿಗೆ ಬಿಗಿಯಾಗಿ ಅಂಟಿಕೊಂಡಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು