Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:3 - ಪರಿಶುದ್ದ ಬೈಬಲ್‌

3 ಈ ಬಟ್ಟೆಗಳನ್ನು ಮಾಡುವಂಥ ಕೆಲವು ನಿಪುಣರಿದ್ದಾರೆ. ನಾನು ಅವರಿಗೆ ವಿಶೇಷ ಜ್ಞಾನವನ್ನು ಕೊಟ್ಟಿದ್ದೇನೆ. ಆರೋನನಿಗೆ ಬೇಕಾದ ಬಟ್ಟೆಗಳನ್ನು ಮಾಡಲು ಅವರಿಗೆ ಹೇಳು. ಅವನು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾನೆಂದು ಈ ಬಟ್ಟೆಗಳು ತೋರಿಸುತ್ತವೆ. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯಾರಿಗೆ ನಾನು ಕಲಾಕುಶಲತೆಯನ್ನು ಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥವರೊಡನೆ ಚರ್ಚಿಸಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕ ಸೇವೆಗೆ ಪ್ರತಿಷ್ಠಿತನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾರಿಗೆ ನಾನು ಜಾಣತನದ ವರವನ್ನು ಪರಿಪೂರ್ತಿಯಾಗಿ ಅನುಗ್ರಹಿಸಿದ್ದೇನೋ ಅಂಥ ಜಾಣರೆಲ್ಲರ ಸಂಗಡ ನೀನು ಮಾತಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವದಕ್ಕೆ ಪ್ರತಿಷ್ಠಿತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ನಾನು ಜ್ಞಾನದ ಆತ್ಮದಿಂದ ತುಂಬಿದ ವಿವೇಕದ ಹೃದಯವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:3
16 ತಿಳಿವುಗಳ ಹೋಲಿಕೆ  

ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ.


ಯೆಹೋವನ ಆತ್ಮವು ಆತನಲ್ಲಿದ್ದು, ಜ್ಞಾನ, ತಿಳುವಳಿಕೆ, ಮಾರ್ಗದರ್ಶನ ಮತ್ತು ಸಾಮರ್ಥ್ಯವನ್ನು ದಯಪಾಲಿಸುವದು; ಯೆಹೋವನನ್ನು ತಿಳಿದುಕೊಳ್ಳಲು ಮತ್ತು ಗೌರವಿಸಲು ಆ ಮಗುವಿಗೆ ಸಹಾಯಿಸುವುದು.


ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.


ಮೋಶೆಯು ಯೆಹೋಶುವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ನಾಯಕನನ್ನಾಗಿ ನೇಮಿಸಿದನು. ಆಗ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮನಿಂದ ತುಂಬಲ್ಪಟ್ಟವನಾದನು. ಇಸ್ರೇಲಿನ ಜನರು ಯೆಹೋಶುವನಿಗೆ ವಿಧೇಯರಾದರು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರೇಲರು ಮಾಡಿದರು.


ಜ್ಞಾನವನ್ನು ಕೊಡುವಾತನು ಯೆಹೋವನೇ. ವಿವೇಕ ಮತ್ತು ತಿಳುವಳಿಕೆ ಆತನ ಬಾಯಿಂದ ಬರುತ್ತವೆ.


ಯೆಹೋವನು ಇವರಿಬ್ಬರಿಗೆ ಎಲ್ಲಾ ವಿಧದ ಕೆಲಸಗಳನ್ನು ಮಾಡಲು ವಿಶೇಷ ನಿಪುಣತೆಯನ್ನು ಅನುಗ್ರಹಿಸಿದ್ದಾನೆ. ಅವರು ಮರಗೆಲಸವನ್ನೂ ಲೋಹದ ಕೆಲಸವನ್ನೂ ಮಾಡಬಲ್ಲರು. ಅವರು ನೀಲಿ, ನೇರಳೆ ಕೆಂಪುದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಅಲಂಕೃತವಾದ ಬಟ್ಟೆಗಳನ್ನು ನೇಯಿಗೆ ಮಾಡಬಲ್ಲರು; ಅವರು ಉಣ್ಣೆ ಬಟ್ಟೆಗಳನ್ನು ನೇಯಲು ಶಕ್ತರಾಗಿದ್ದಾರೆ.


ಬಳಿಕ ಮೋಶೆಯು ಇಸ್ರೇಲರಿಗೆ ಹೀಗೆಂದನು: “ನೋಡಿರಿ, ಯೆಹೋವನು ಯೆಹೂದ ಕುಲದಿಂದ ಊರಿಯ ಮಗನಾದ ಬೆಚಲೇಲನನ್ನು ಆರಿಸಿಕೊಂಡಿದ್ದಾನೆ. ಊರಿಯು ಹೂರನ ಮಗ.


ನಿಪುಣರಾದ ಸ್ತ್ರೀಯರು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಮಾಡಿದರು.


ಯೆಹೋವನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿ, ಎಲ್ಲಾ ವಸ್ತುಗಳನ್ನು ಮಾಡುವುದಕ್ಕೆ ಬೇಕಾದ ವಿಶೇಷ ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದಾನೆ.


“ಆದ್ದರಿಂದ ಬೆಚಲೇಲನೂ ಒಹೊಲೀಯಾಬನೂ ಮತ್ತು ಇತರ ಎಲ್ಲಾ ನಿಪುಣರೂ ಯೆಹೋವನು ಆಜ್ಞಾಪಿಸಿದ ಕೆಲಸವನ್ನು ಮಾಡಬೇಕು. ಈ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಅವಶ್ಯವಿರುವ ಎಲ್ಲಾ ಸೂಕ್ಷ್ಮವಾದ ಕೆಲಸವನ್ನು ಮಾಡುವುದಕ್ಕೆ ಯೆಹೋವನು ಈ ಜನರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಅನುಗ್ರಹಿಸಿದ್ದಾನೆ.”


ಹೀರಾಮನ ತಾಯಿಯು ನಫ್ತಾಲಿ ಕುಲದವಳಾಗಿದ್ದಳು ಮತ್ತು ಇಸ್ರೇಲಿನವಳಾಗಿದ್ದಳು. ಅವನ ದಿವಂಗತ ತಂದೆಯು ತೂರಿನವನಾಗಿದ್ದನು. ಹೀರಾಮನು ಹಿತ್ತಾಳೆಯಿಂದ ವಸ್ತುಗಳನ್ನು ತಯಾರಿಸುತ್ತಿದ್ದನು. ಅವನು ಕುಶಲಕರ್ಮಿಯೂ ಅನುಭವಿಯೂ ಆದ ಕೆಲಸಗಾರನಾಗಿದ್ದನು. ರಾಜನಾದ ಸೊಲೊಮೋನನು ಹೀರಾಮನಿಗೆ ಬರಲು ಹೇಳಿದಾಗ, ಅವನು ಒಪ್ಪಿಕೊಂಡನು. ರಾಜನಾದ ಸೊಲೊಮೋನನು ಎಲ್ಲಾ ಹಿತ್ತಾಳೆಯ ಕಾರ್ಯಗಳಿಗೆ ಹೀರಾಮನನ್ನು ಮೇಲ್ವಿಚಾರಕನನ್ನಾಗಿ ನೇಮಿಸಿದನು. ಹೀರಾಮನು ಹಿತ್ತಾಳೆಯ ವಸ್ತುಗಳನ್ನು ನಿರ್ಮಿಸಿದನು.


“ಯೆಹೋವನು ಆಜ್ಞಾಪಿಸಿದ ವಸ್ತುಗಳನ್ನು ನಿಮ್ಮಲ್ಲಿ ನಿಪುಣರಾದ ಕೆಲಸಗಾರರೆಲ್ಲರೂ ಮಾಡಬೇಕು. ಅವು ಯಾವುವೆಂದರೆ,


ಬಳಿಕ ಮೋಶೆಯು ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯೆಹೋವನಿಂದ ವಿಶೇಷ ಜ್ಞಾನ ಹೊಂದಿದ ಇತರ ಎಲ್ಲಾ ನಿಪುಣರನ್ನೂ ಕರೆದನು. ಕೆಲಸದಲ್ಲಿ ಸಹಾಯಮಾಡಲು ಇವರು ಬಯಸಿದ್ದರಿಂದ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು