ವಿಮೋಚನಕಾಂಡ 28:30 - ಪರಿಶುದ್ದ ಬೈಬಲ್30 ದೈವನಿರ್ಣಯದ ಪದಕದೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಡು. ಆರೋನನು ಯೆಹೋವನ ಮುಂದೆ ಹೋಗುವಾಗ ಅವುಗಳು ಅವನ ಎದೆಯ ಮೇಲಿರುವವು. ಹೀಗೆ ಆರೋನನು ಯೆಹೋವನ ಮುಂದೆ ನಿಲ್ಲುವಾಗಲೆಲ್ಲಾ, ಜನರಿಗೆ ತೀರ್ಪು ನೀಡತಕ್ಕದ್ದನ್ನು ಯಾವಾಗಲೂ ತನ್ನ ಎದೆಯ ಮೇಲೆ ಹೊತ್ತುಕೊಂಡಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಆ ಎದೆಯ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ದೈವನಿರ್ಣಯವನ್ನು ತಿಳಿಸುವ ಊರಿಮ್ ಹಾಗು ತುಮ್ಮೀಮ್ ಎಂಬ ದಾಳಗಳನ್ನು ಆ ಫಲಕದ ಚೀಲದಲ್ಲಿ ಇಡಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಅವು ಅವನ ಎದೆಯ ಮೇಲೆ ಇರುವುವು. ಇಸ್ರಯೇಲರು ಕೈಗೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಯಾವಾಗಲು ಧರಿಸಿಕೊಂಡಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳನ್ನು ಆ ಚೀಲದ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲ್ಯರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನಿರ್ಣಯವನ್ನು ತಿಳಿಸುವ ಎದೆಪದಕದಲ್ಲಿ ಊರೀಮ್ ಮತ್ತು ತುಮ್ಮೀಮ್‌ಗಳನ್ನು ಇಡಬೇಕು. ಆರೋನನು ಯೆಹೋವ ದೇವರ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಯೆಹೋವ ದೇವರ ಮುಂದೆ ಯಾವಾಗಲೂ ಇಸ್ರಾಯೇಲರ ನಿರ್ಣಯಗಳನ್ನು ತನ್ನ ಹೃದಯದ ಮೇಲೆ ಹೊರಬೇಕು. ಅಧ್ಯಾಯವನ್ನು ನೋಡಿ |
ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.