Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:39 - ಪರಿಶುದ್ದ ಬೈಬಲ್‌

39 “ಹೆಣೆದ ಅಂಗಿಯನ್ನು ಮತ್ತು ಮುಂಡಾಸವನ್ನು ಮಾಡಲು ಉತ್ಕೃಷ್ಟವಾದ ನಾರಿನ ಬಟ್ಟೆಯನ್ನು ಉಪಯೋಗಿಸು. ನಡುಕಟ್ಟನ್ನು ಬುಟ್ಟೀದಾರಿ ಕೆಲಸದಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆರೋನನು ಧರಿಸಬೇಕಾದ ಒಳ ಅಂಗಿಯನ್ನು ಹತ್ತಿಯ ನೂಲಿನಿಂದ ಕಸೂತಿ ಹಾಕಿಸಿ ನೇಯಿಸಬೇಕು. ಅವನ ಮುಂಡಾಸವನ್ನು ಹತ್ತಿಯ ನೂಲಿನಿಂದ ಮಾಡಿಸಬೇಕು. ಅವನ ನಡುಕಟ್ಟನ್ನು ಕಸೂತಿ ಕೆಲಸದಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 “ಆರೋನನು ಧರಿಸಬೇಕಾದ ನಿಲುವಂಗಿಯನ್ನು ನಯವಾದ ನಾರಿನಿಂದ ನೇಯಿಸು. ಅವನ ಪೇಟವನ್ನೂ ಅಂತೆಯೇ ನಯವಾದ ನಾರಿನಿಂದ ಮಾಡಿಸು. ಅವನ ನಡುಕಟ್ಟು ಕಸೂತಿ ಕೆಲಸದಿಂದ ಅಲಂಕಾರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆರೋನನು ಧರಿಸಬೇಕಾದ ನಿಲುವಂಗಿಯನ್ನು ನಾರಿನಿಂದ ವಿಚಿತ್ರವಾಗಿ ನೇಯಿಸಬೇಕು; ಅವನ ಮುಂಡಾಸವನ್ನು ನಾರಿನಿಂದ ಮಾಡಿಸಬೇಕು; ಅವನ ನಡುಕಟ್ಟನ್ನು ಬುಟೇದಾರಿ ಕೆಲಸದಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸದಿಂದ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನಿಂದ ಮಾಡಿದ ಮುಂಡಾಸವನ್ನೂ ಹೆಣಿಗೆಯ ಕೆಲಸದಿಂದ ನಡುಕಟ್ಟನ್ನೂ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:39
10 ತಿಳಿವುಗಳ ಹೋಲಿಕೆ  

ಆಕೆಯು ಕಸೂತಿ ರಚಿತವಾದ ವಸ್ತ್ರಗಳನ್ನು ಧರಿಸಿಕೊಂಡು ತನ್ನ ಸಖಿಯರಾದ ಕನ್ಯಾಪರಿವಾರದೊಡನೆ ರಾಜನ ಬಳಿಗೆ ಬರುವಳು.


“ಬಳಿಕ ಪವಿತ್ರಗುಡಾರದ ಪ್ರವೇಶಸ್ಥಳವನ್ನು ಮುಚ್ಚುವುದಕ್ಕೆ ಒಂದು ಪರದೆಯನ್ನು ಮಾಡಿಸಬೇಕು. ಈ ಪರದೆಯನ್ನು ನೀಲಿ, ನೇರಳೆ, ಕೆಂಪು ದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಮಾಡಿಸಿ ಅದರಲ್ಲಿ ಚಿತ್ರಗಳನ್ನು ಕಸೂತಿ ಹಾಕಿಸಬೇಕು.


ಅವರು ಮಾಡತಕ್ಕ ಬಟ್ಟೆಗಳು ಯಾವುವೆಂದರೆ: ದೈವನಿರ್ಣಯಕ ಪದಕ, ಏಫೋದು, ನೀಲಿಯ ನಿಲುವಂಗಿ, ಹೆಣೆದ ಬಿಳಿಯ ನಿಲುವಂಗಿ, ಮುಂಡಾಸು ಮತ್ತು ನಡುಕಟ್ಟು. ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಿಗೂ ಈ ವಿಶೇಷ ಬಟ್ಟೆಗಳನ್ನು ಅವರು ಮಾಡಬೇಕು. ಆಗ ಆರೋನನೂ ಅವನ ಗಂಡುಮಕ್ಕಳೂ ಯಾಜಕರಾಗಿ ನನ್ನ ಸೇವೆಮಾಡಬಹುದು.


ವಿಶೇಷವಾದ ಬಟ್ಟೆಗಳನ್ನು ಆರೋನನಿಗೆ ತೊಡಿಸು. ಹೆಣೆದ ಅಂಗಿಯನ್ನು ಮತ್ತು ಏಫೋದಿನೊಡನೆ ಧರಿಸತಕ್ಕ ದೈವನಿರ್ಣಯದ ಪದಕವನ್ನು ಅವನಿಗೆ ತೊಡಿಸು. ಬಳಿಕ ಅಂದವಾದ ನಡುಕಟ್ಟನ್ನು ಅವನಿಗೆ ಕಟ್ಟು.


ಅವನ ತಲೆಗೆ ಮುಂಡಾಸನ್ನು ಇಡು ಮತ್ತು ಮುಂಡಾಸಕ್ಕೆ ವಿಶೇಷವಾದ ಕಿರೀಟವನ್ನು ಕಟ್ಟಿಸು.


“ತರುವಾಯ ಆರೋನನ ಪುತ್ರರನ್ನು ಆ ಸ್ಥಳಕ್ಕೆ ಕರೆದುಕೊಂಡು ಬಾ. ಅವರಿಗೆ ಹೆಣೆದ ಅಂಗಿಗಳನ್ನು ತೊಡಿಸು.


ನಿಪುಣರಾದ ಕೆಲಸಗಾರರು ಆರೋನನಿಗೂ ಅವನ ಮಕ್ಕಳಿಗೂ ಅಂಗಿಗಳನ್ನು ಹೊಲಿದರು. ಈ ಅಂಗಿಗಳು ಶ್ರೇಷ್ಠವಾದ ನಾರುಬಟ್ಟೆಯಿಂದ ಮಾಡಲ್ಪಟ್ಟವು.


ಯಾಜಕನು ತನ್ನ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಳ್ಳಬೇಕು. ಯಾಜಕನು ಸರ್ವಾಂಗಹೋಮ ಮಾಡಿದಾಗ ಬೆಂಕಿಯಿಂದ ಉಂಟಾದ ಬೂದಿಯನ್ನು ತೆಗೆದು ವೇದಿಕೆಯ ಬಳಿಯಲ್ಲಿಡಬೇಕು.


ಆರೋನನು ತನ್ನ ಪೂರ್ಣಶರೀರವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಈ ಬಟ್ಟೆಗಳನ್ನು ಹಾಕಿಕೊಳ್ಳಬೇಕು. ಆರೋನನು ಪವಿತ್ರ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಂಡಿರಬೇಕು. ಅವನು ನಾರಿನ ನಡುಕಟ್ಟನ್ನು ಕಟ್ಟಿಕೊಳ್ಳಬೇಕು; ನಾರಿನ ಮುಂಡಾಸವನ್ನು ಇಟ್ಟುಕೊಳ್ಳಬೇಕು. ಇವುಗಳು ಪವಿತ್ರವಾದವುಗಳಾಗಿವೆ.


“ಅಂಗಳದ ದ್ವಾರವನ್ನು ಮುಚ್ಚುವುದಕ್ಕೆ ಇಪ್ಪತ್ತು ಮೊಳ ಉದ್ದದ ಪರದೆಯನ್ನು ಮಾಡಿಸಬೇಕು. ಪರದೆಯನ್ನು ಉತ್ತಮ ನಾರಿನ ಬಟ್ಟೆಯಿಂದ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಮಾಡಿಸಬೇಕು. ಆ ಪರದೆಯಲ್ಲಿ ಅಲಂಕೃತವಾದ ಚಿತ್ರಗಳನ್ನು ಬುಟೇದಾರೀ ಕೆಲಸದವರಿಂದ ಮಾಡಿಸಬೇಕು. ಆ ಪರದೆಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೇಕಲ್ಲುಗಳು ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು