ವಿಮೋಚನಕಾಂಡ 28:41 - ಪರಿಶುದ್ದ ಬೈಬಲ್41 ನಿನ್ನ ಸಹೋದರನಾದ ಆರೋನನಿಗೆ ಮತ್ತು ಅವನ ಗಂಡುಮಕ್ಕಳಿಗೆ ಬಟ್ಟೆಗಳನ್ನು ತೊಡಿಸು. ಬಳಿಕ ಅವರನ್ನು ಯಾಜಕರನ್ನಾಗಿ ಮಾಡಲು ವಿಶೇಷ ತೈಲದಿಂದ ಅಭಿಷೇಕಿಸು. ಇದು ಅವರನ್ನು ಪ್ರತಿಷ್ಠಿಸುವುದು ಮತ್ತು ಪವಿತ್ರರನ್ನಾಗಿ ಮಾಡುವುದು. ಅವರು ಯಾಜಕರಾಗಿ ನನ್ನ ಸೇವೆ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಅವರು ನನಗೆ ಯಾಜಕಸೇವೆ ಮಾಡುವುದಕ್ಕಾಗಿ ಆ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ, ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಸೇವೆಗಾಗಿ ಪ್ರತಿಷ್ಠಿಸಿ ಶುದ್ಧೀಕರಿಸಿಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಈ ಬಗೆಯ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಉದ್ಯೋಗಕ್ಕೆ ಸೇರಿಸಿ ಪ್ರತಿಷ್ಠಿಸು. ಆಗ ಅವರು ನನಗೆ ಯಾಜಕರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ ಅವನ ಮಕ್ಕಳಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಉದ್ಯೋಗಕ್ಕೆ ಸೇರಿಸಿ ಪ್ರತಿಷ್ಠಿಸಬೇಕು; ಆಗ ಅವರು ನನಗೆ ಯಾಜಕರಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಅವುಗಳನ್ನು ನಿನ್ನ ಸಹೋದರ ಆರೋನನ ಮತ್ತು ಅವನ ಪುತ್ರರಿಗೆ ತೊಡಿಸಿ, ಅವರನ್ನು ಅಭಿಷೇಕಿಸಿ, ಪ್ರತಿಷ್ಠೆ ಮಾಡು. ಅವರು ನನಗೆ ಯಾಜಕ ಸೇವೆ ಮಾಡುವ ಹಾಗೆ ಅವರನ್ನು ಶುದ್ಧಮಾಡು. ಅಧ್ಯಾಯವನ್ನು ನೋಡಿ |