Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:42 - ಪರಿಶುದ್ದ ಬೈಬಲ್‌

42 “ಯಾಜಕರಿಗೆ ಒಳಗಿನ ಉಡುಪುಗಳನ್ನು ಮಾಡಲು ನಾರುಬಟ್ಟೆಯನ್ನು ಉಪಯೋಗಿಸು. ಈ ಒಳಗಿನ ಉಡುಪುಗಳು ಅವರನ್ನು ಸೊಂಟದಿಂದ ತೊಡೆಯವರೆಗೆ ಮುಚ್ಚುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅದಲ್ಲದೆ ಅವರ ನಗ್ನತೆಯನ್ನು ಮರೆಮಾಡುವುದಕ್ಕಾಗಿ ಅವರಿಗೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಸಣಬಿನ ದಾರದಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅದೂ ಅಲ್ಲದೆ ಅವರ ಗುಪ್ತಾಂಗ ಕಾಣಿಸದಂತೆ ಸೊಂಟದಿಂದ ತೊಡೆಯ ತನಕ ನಾರಿನ ಚಡ್ಡಿಗಳನ್ನು ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅದಲ್ಲದೆ ಅವರ ರಹಸ್ಯಾಂಗವು ಕಾಣಿಸದಂತೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 “ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಚಡ್ಡಿಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯವರೆಗೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:42
8 ತಿಳಿವುಗಳ ಹೋಲಿಕೆ  

ಅವರು ನಾರುಮಡಿಯ ಮುಂಡಾಸನ್ನು ಧರಿಸಿಕೊಳ್ಳುವರು. ಅದೇ ಬಟ್ಟೆಯ ಚಡ್ಡಿಯನ್ನೂ ಧರಿಸುವರು. ಅವರಿಗೆ ಬೆವರು ಬರಿಸುವ ಯಾವ ಬಟ್ಟೆಯಾಗಲಿ ಅವರು ಧರಿಸುವದಿಲ್ಲ.


ಆರೋನನು ತನ್ನ ಪೂರ್ಣಶರೀರವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಈ ಬಟ್ಟೆಗಳನ್ನು ಹಾಕಿಕೊಳ್ಳಬೇಕು. ಆರೋನನು ಪವಿತ್ರ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಂಡಿರಬೇಕು. ಅವನು ನಾರಿನ ನಡುಕಟ್ಟನ್ನು ಕಟ್ಟಿಕೊಳ್ಳಬೇಕು; ನಾರಿನ ಮುಂಡಾಸವನ್ನು ಇಟ್ಟುಕೊಳ್ಳಬೇಕು. ಇವುಗಳು ಪವಿತ್ರವಾದವುಗಳಾಗಿವೆ.


ಯಾಜಕನು ತನ್ನ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಳ್ಳಬೇಕು. ಯಾಜಕನು ಸರ್ವಾಂಗಹೋಮ ಮಾಡಿದಾಗ ಬೆಂಕಿಯಿಂದ ಉಂಟಾದ ಬೂದಿಯನ್ನು ತೆಗೆದು ವೇದಿಕೆಯ ಬಳಿಯಲ್ಲಿಡಬೇಕು.


ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.


ಶ್ರೇಷ್ಠವಾದ ನಾರುಬಟ್ಟೆಯಿಂದ ಕೆಲಸಗಾರರು ಒಂದು ಮುಂಡಾಸನ್ನು ಮಾಡಿದರು. ಅವರು ತಲೆಪಟ್ಟಿಗಳನ್ನು ಮತ್ತು ಒಳಅಂಗಿಗಳನ್ನು ಮಾಡುವುದಕ್ಕೆ ಶ್ರೇಷ್ಠವಾದ ನಾರುಬಟ್ಟೆಯನ್ನು ಉಪಯೋಗಿಸಿದರು.


ಅಲ್ಲದೆ ಯಜ್ಞವೇದಿಕೆಯನ್ನು ಹತ್ತುವುದಕ್ಕೆ ಮೆಟ್ಟಲುಗಳನ್ನು ಮಾಡಬಾರದು. ಮೆಟ್ಟಲುಗಳಿದ್ದರೆ ಜನರು ತಲೆ ಎತ್ತಿ ಯಜ್ಞವೇದಿಕೆಯನ್ನು ನೋಡುವಾಗ ನಿಮ್ಮ ರಹಸ್ಯಾಂಗವು ಕಾಣಿಸೀತು.”


ಒಳಗಿನ ಪ್ರಾಕಾರದ ಪ್ರವೇಶ ದ್ವಾರವನ್ನು ಹೊಕ್ಕುವಾಗ ಅವರು ನಾರುಮಡಿ ಬಟ್ಟೆಯನ್ನು ಧರಿಸುವರು. ಅವರು ಒಳಗಿನ ಪ್ರಾಕಾರದ ಪ್ರವೇಶ ದ್ವಾರದಲ್ಲಾಗಲಿ ಆಲಯದೊಳಗಾಗಲಿ ಸೇವೆಮಾಡುವಾಗ ಉಣ್ಣೆಯಿಂದ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳುವದಿಲ್ಲ.


ಮತ್ತೊಬ್ಬನು ಕಳೆದುಕೊಂಡದ್ದನ್ನು ಕಂಡುಕೊಂಡು ಅದರ ಬಗ್ಗೆ ಸುಳ್ಳು ಹೇಳುವುದರಿಂದಾಗಲಿ ಮಾಡಿದ ಪ್ರಮಾಣವನ್ನು ಉಲ್ಲಂಘಿಸುವುದರಿಂದಾಗಲಿ ಪಾಪಮಾಡಿ ಯೆಹೋವನಿಗೆ ದ್ರೋಹಮಾಡಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು