43 ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.”
43 ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.
43 ಆರೋನನು ಮತ್ತು ಅವನ ಮಕ್ಕಳು ದೇವದರ್ಶನದ ಗುಡಾರದೊಳಗೆ ಬರುವಾಗ ಹಾಗು ಪವಿತ್ರಸ್ಥಾನದಲ್ಲಿ ಸೇವೆ ಮಾಡಲು ಬಲಿಪೀಠದ ಹತ್ತಿರ ಬರುವಾಗ ಇವುಗಳನ್ನು ಹಾಕಿಕೊಂಡಿರಲಿ. ಇಲ್ಲವಾದರೆ ಅವರು ಆ ಅಪರಾಧದ ನಿಮಿತ್ತ ಸಾಯುವರು. ಆರೋನನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ.
43 ಆರೋನನೂ ಅವನ ಮಕ್ಕಳೂ ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಪವಿತ್ರಸ್ಥಾನದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಹಾಕಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ.
43 ಆರೋನನೂ ಅವನ ಪುತ್ರರೂ ದೇವದರ್ಶನದ ಗುಡಾರಕ್ಕೆ ಬರುವ ಸಮಯದಲ್ಲಿಯೂ ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ದೋಷವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. “ಇದೇ ಆರೋನನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.
ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.
“ಯಾಜಕರು ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ಈ ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ.
ಆದರೆ ಯಾವನಾದರೂ ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಸ್ಕಹಬ್ಬವನ್ನು ಆಚರಿಸದಿದ್ದರೆ, ಅವನನ್ನು ಅವನ ಜನರಿಂದ ಬಹಿಷ್ಕರಿಸಬೇಕು. ಅವನು ಯೆಹೋವನಿಂದ ನೇಮಕವಾದ ಯಜ್ಞವನ್ನು ಸರಿಯಾದ ಕಾಲದಲ್ಲಿ ಸಮರ್ಪಿಸದೆ ಹೋದದ್ದರಿಂದ ಅವನು ದೋಷಿಯಾಗಿದ್ದಾನೆ ಮತ್ತು ಅವನಿಗೆ ಶಿಕ್ಷೆಯಾಗಬೇಕು.
ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳುವುದರಿಂದ ಅವರು ಸಾಯುವುದಿಲ್ಲ. ಆರೋನನಿಗೂ ಅವನ ಸಂತತಿಯವರಿಗೂ ಇದು ಶಾಶ್ವತವಾದ ನಿಯಮ. ತಲೆಮಾರುಗಳವರೆಗೆ ಆರೋನನ ಸಂತತಿಯವರಿಗೆಲ್ಲಾ ಇದೇ ಕಟ್ಟಳೆಯಿರುವುದು.”
ಆರೋನನು ಯೆಹೋವನ ಸನ್ನಿಧಿಯಲ್ಲಿ ಬೆಂಕಿಯ ಮೇಲೆ ಧೂಪವನ್ನು ಹಾಕಬೇಕು. ಆಗ ಒಡಂಬಡಿಕೆಯ ಪೆಟ್ಟಿಗೆ ಮೇಲಿರುವ ಕೃಪಾಸವನ್ನು ಧೂಪದ ಹೊಗೆಯು ಮುಚ್ಚಿಕೊಳ್ಳುವುದು. ಹೀಗೆ ಮಾಡುವುದರಿಂದ ಆರೋನನು ಸಾಯುವುದಿಲ್ಲ.
ಒಳಗಿನ ಪ್ರಾಕಾರದ ಪ್ರವೇಶ ದ್ವಾರವನ್ನು ಹೊಕ್ಕುವಾಗ ಅವರು ನಾರುಮಡಿ ಬಟ್ಟೆಯನ್ನು ಧರಿಸುವರು. ಅವರು ಒಳಗಿನ ಪ್ರಾಕಾರದ ಪ್ರವೇಶ ದ್ವಾರದಲ್ಲಾಗಲಿ ಆಲಯದೊಳಗಾಗಲಿ ಸೇವೆಮಾಡುವಾಗ ಉಣ್ಣೆಯಿಂದ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳುವದಿಲ್ಲ.
ಆಗ ಯೆಹೋವನು ಆರೋನನಿಗೆ ಹೀಗೆ ಹೇಳಿದನು: “ನನಗೆ ಬರಬೇಕಾಗಿರುವ ಕೊಡುಗೆಗಳನ್ನು ಮತ್ತು ಇಸ್ರೇಲರ ಪವಿತ್ರವಾದ ಎಲ್ಲಾ ಕಾಣಿಕೆಗಳನ್ನು ಕಾಯುವ ಜವಾಬ್ದಾರಿಕೆಯನ್ನು ನಾನೇ ನಿನಗೆ ವಹಿಸಿದ್ದೇನೆ. ಅವುಗಳನ್ನು ನಿನಗೂ ನಿನ್ನ ಸಂತತಿಯವರಿಗೂ ಪಾಲಾಗಿ ಕೊಟ್ಟಿದ್ದೇನೆ. ಅವು ಯಾವಾಗಲೂ ನಿಮ್ಮವೇ.
ನೀವು ಯಾವಾಗಲೂ ಉತ್ತಮ ಭಾಗವನ್ನು ಯೆಹೋವನಿಗೆ ಕೊಟ್ಟರೆ, ಸಂಕಟದ ದಂಡನೆಯಿಂದ ತಪ್ಪಿಸಿಕೊಳ್ಳುವಿರಿ. ಇಸ್ರೇಲರು ಕೊಟ್ಟ ಪವಿತ್ರವಾದ ಕಾಣಿಕೆಗಳಿಗೆ ನೀವು ಅಪಮಾನ ಮಾಡುವುದಿಲ್ಲ ಮತ್ತು ನೀವು ಸಾಯುವುದಿಲ್ಲ.”