Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:1 - ಪರಿಶುದ್ದ ಬೈಬಲ್‌

1 ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಆರೋನನು ಮತ್ತು ಅವನ ಗಂಡುಮಕ್ಕಳು ಅಭಿಷೇಕಿಸಲ್ಪಟ್ಟ ಮತ್ತು ಪ್ರತ್ಯೇಕಿಸಲ್ಪಟ್ಟ ಯಾಜಕರಾಗಿ ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡಲು ಅವರು ಮಾಡತಕ್ಕದ್ದೇನೆಂಬುದನ್ನು ನಾನೀಗ ಹೇಳುವೆನು. ಯಾವ ಅಂಗದೋಷವಿಲ್ಲದ ಒಂದು ಹೋರಿಮರಿಯನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವುದಕ್ಕೆ ನೀನು ಮಾಡಬೇಕಾಗಿರುವ ಕಾರ್ಯಗಳೆನೆಂದರೆ; ಒಂದು ಹೋರಿ ಮತ್ತು ಕರುವನ್ನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಆರೋನನು ಮತ್ತು ಅವನ ಮಕ್ಕಳು ನನಗೆ ಯಾಜಕರಾಗಿ ಸೇವೆ ಸಲ್ಲಿಸುವಂತೆ ನೀನು ಅವರನ್ನು ಹೀಗೆ ಪ್ರತಿಷ್ಠಿಸು: ಕಳಂಕರಹಿತವಾದ ಒಂದು ಹೋರಿಕರುವನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವದಕ್ಕೆ ನೀನು ಮಾಡಬೇಕಾದ ಕಾರ್ಯ ಯಾವದಂದರೆ - ಒಂದು ಹೋರಿಕರುವನ್ನೂ ಪೂರ್ಣಾಂಗವಾದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಅವರು ನನಗೆ ಯಾಜಕ ಸೇವೆಮಾಡುವಂತೆ ನೀನು ಅವರನ್ನು ಶುದ್ಧ ಮಾಡಲು ಮಾಡಬೇಕಾದದ್ದೇನೆಂದರೆ: ದೋಷವಿಲ್ಲದ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:1
23 ತಿಳಿವುಗಳ ಹೋಲಿಕೆ  

ಪೂರ್ಣಾಂಗವಾದ ಮತ್ತು ಪರಿಶುದ್ಧವಾದ ಕುರಿಮರಿಯಾದ ಕ್ರಿಸ್ತನ ಅಮೂಲ್ಯವಾದ ರಕ್ತದಿಂದ ನಿಮಗೆ ಬಿಡುಗಡೆಯಾಯಿತು.


ಯೇಸುವೇ ನಮಗೆ ಬೇಕಾಗಿದ್ದ ಪ್ರಧಾನ ಯಾಜಕನು. ಆತನು ಪಾಪರಹಿತನೂ ಪರಿಶುದ್ಧನೂ ನಿಷ್ಕಳಂಕನೂ ಪಾಪಿಗಳ ಪ್ರಭಾವಕ್ಕೆ ಒಳಗಾಗದವನೂ ಆಕಾಶಮಂಡಲಕ್ಕಿಂತ ಉನ್ನತನೂ ಆಗಿದ್ದಾನೆ.


ಅದು ಒಂದು ವರ್ಷದ ಗಂಡು ಕುರಿಯಾಗಿರಬೇಕು ಅಥವಾ ಆಡಾಗಿರಬೇಕು. ಅಲ್ಲದೆ ಕಳಂಕ ರಹಿತವಾಗಿರಬೇಕು.


ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ಹೆಸರು ಪರಿಶುದ್ಧವಾಗಿರಲಿ.


ನೀವು ಆರೋನನ ಸಂತತಿಯವರಾದ ಯೆಹೋವನ ಯಾಜಕರನ್ನು ಹೊರಡಿಸಿಬಿಟ್ಟರಿ. ನೀವು ಲೇವಿಯರನ್ನೂ ಹೊರಡಿಸಿಬಿಟ್ಟಿರಿ. ಅನ್ಯಜನಾಂಗದವರಂತೆ ನೀವು ನಿಮ್ಮಲ್ಲಿಂದಲೇ ಯಾಜಕರನ್ನು ಆರಿಸಿಕೊಂಡಿರಿ. ಯಾವನಾದರೂ ಏಳು ಟಗರುಗಳನ್ನೂ ಒಂದು ಎಳೇ ಹೋರಿಯನ್ನೂ ತಂದರೆ ನೀವು ಅವನನ್ನು ‘ದೇವರಲ್ಲದವುಗಳ’ ಸೇವೆಮಾಡಲು ಯಾಜಕನನ್ನಾಗಿ ಮಾಡುವಿರಿ.


“ದೋಷಪರಿಹಾರಕ ದಿನದಲ್ಲಿ ಆರೋನನು ಮಹಾ ಪವಿತ್ರಸ್ಥಳದೊಳಗೆ ಪ್ರವೇಶಿಸುವ ಮೊದಲು ಪಾಪಪರಿಹಾರಕ ಯಜ್ಞವಾಗಿ ಹೋರಿಯನ್ನೂ ಸರ್ವಾಂಗಹೋಮವಾಗಿ ಟಗರನ್ನೂ ಅರ್ಪಿಸಬೇಕು.


ಮೋಶೆಯು ಆರೋನನಿಗೆ ಹೀಗೆಂದನು; “ಒಂದು ಎಳೆಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊ. ಆ ಪಶುಗಳಲ್ಲಿ ಏನೂ ದೋಷವಿರಬಾರದು. ಹೋರಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಟಗರನ್ನು ಸರ್ವಾಂಗಹೋಮವಾಗಿಯೂ ಯೆಹೋವನಿಗೆ ಸಮರ್ಪಿಸು.


ಆ ವ್ಯಕ್ತಿ ದೋಷಪರಿಹಾರಕ ಯಜ್ಞವನ್ನು ಯಾಜಕನ ಬಳಿಗೆ ತರಬೇಕು. ಅದು ಮಂದೆಯಿಂದ ತಂದ ಟಗರಾಗಿರಬೇಕು. ಟಗರಿನಲ್ಲಿ ಯಾವ ದೋಷವೂ ಇರಬಾರದು. ಅದು ಯಾಜಕನು ಹೇಳುವ ಬೆಲೆಯುಳ್ಳದ್ದಾಗಿರಬೇಕು. ಅದು ಯೆಹೋವನಿಗೆ ಸಮರ್ಪಿಸುವ ದೋಷಪರಿಹಾರಕ ಯಜ್ಞವಾಗಿರುವುದು.


“ಅಭಿಷಿಕ್ತನಾದ ಯಾಜಕನು ತಪ್ಪುಮಾಡಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಅರ್ಪಿಸಬೇಕು.


ತರುವಾಯ ಯಜ್ಞವೇದಿಕೆಯಿಂದ ಸ್ವಲ್ಪ ರಕ್ತವನ್ನು ತೆಗೆದುಕೊ. ಅದನ್ನು ವಿಶೇಷವಾದ ಅಭೀಷೇಕತೈಲದಲ್ಲಿ ಬೆರಸಿ ಆರೋನನ ಮೇಲೆಯೂ ಅವನ ಬಟ್ಟೆಗಳ ಮೇಲೆಯೂ ಚಿಮಿಕಿಸು. ಅವನ ಪುತ್ರರ ಮತ್ತು ಅವರ ಬಟ್ಟೆಗಳ ಮೇಲೆಯೂ ಚಿಮಿಕಿಸು. ಆಗ ಅವರು ಪರಿಶುದ್ಧಗೊಳ್ಳುವರು, ಅವರ ಬಟ್ಟೆಗಳೂ ಪರಿಶುದ್ಧಗೊಳ್ಳುವವು. ಆರೋನನು ಮತ್ತು ಅವನ ಪುತ್ರರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡುತ್ತಾರೆಂದು ಇದು ತೋರಿಸುವುದು.


ಈ ಬಟ್ಟೆಗಳನ್ನು ಮಾಡುವಂಥ ಕೆಲವು ನಿಪುಣರಿದ್ದಾರೆ. ನಾನು ಅವರಿಗೆ ವಿಶೇಷ ಜ್ಞಾನವನ್ನು ಕೊಟ್ಟಿದ್ದೇನೆ. ಆರೋನನಿಗೆ ಬೇಕಾದ ಬಟ್ಟೆಗಳನ್ನು ಮಾಡಲು ಅವರಿಗೆ ಹೇಳು. ಅವನು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾನೆಂದು ಈ ಬಟ್ಟೆಗಳು ತೋರಿಸುತ್ತವೆ. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.


ನಿನ್ನ ಸಹೋದರನಾದ ಆರೋನನಿಗೆ ಮತ್ತು ಅವನ ಗಂಡುಮಕ್ಕಳಿಗೆ ಬಟ್ಟೆಗಳನ್ನು ತೊಡಿಸು. ಬಳಿಕ ಅವರನ್ನು ಯಾಜಕರನ್ನಾಗಿ ಮಾಡಲು ವಿಶೇಷ ತೈಲದಿಂದ ಅಭಿಷೇಕಿಸು. ಇದು ಅವರನ್ನು ಪ್ರತಿಷ್ಠಿಸುವುದು ಮತ್ತು ಪವಿತ್ರರನ್ನಾಗಿ ಮಾಡುವುದು. ಅವರು ಯಾಜಕರಾಗಿ ನನ್ನ ಸೇವೆ ಮಾಡುವರು.


ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.


ಯಜ್ಞವೇದಿಯನ್ನು ಶುದ್ಧೀಕರಿಸಿದ ನಂತರ ನಿಷ್ಕಳಂಕವಾದ ಒಂದು ಹೋರಿ ಮತ್ತು ಹಿಂಡಿನಿಂದ ಒಂದು ಟಗರನ್ನು ಸಮರ್ಪಿಸಬೇಕು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಿಂದ ನಿನ್ನ ಬಳಿಗೆ ಬರಲು ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಾದ ನಾದಾಬ, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೂ ಹೇಳು. ಇವರು ಯಾಜಕರಾಗಿ ನನ್ನ ಸೇವೆ ಮಾಡುವರು.


ಬೆಂಕಿಯು ವೇದಿಕೆಯ ಮೇಲೆ ಉರಿಯುತ್ತಲೇ ಇರಬೇಕು; ಆರಿಹೋಗಬಾರದು.


ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳಲ್ಲಿ ಇವೇ ಆರೋನನಿಗೂ ಅವನ ಪುತ್ರರಿಗೂ ಕೊಡಲ್ಪಟ್ಟ ಭಾಗಗಳಾಗಿವೆ. ಆರೋನನೂ ಅವನ ಪುತ್ರರೂ ಯೆಹೋವನ ಯಾಜಕರಾಗಿ ಸೇವೆ ಮಾಡುವಾಗಲೆಲ್ಲಾ ಯಜ್ಞಗಳಲ್ಲಿ ಆ ಪಾಲನ್ನು ಪಡೆಯುವರು.


ಯಾಜಕನು ಅವನನ್ನೂ ಅವನ ಸಮರ್ಪಣೆಗಳನ್ನೂ ದೇವದರ್ಶನಗುಡಾರದ ಬಾಗಿಲಿನಲ್ಲಿ ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು. (ಈ ಯಾಜಕನೇ ಅವನನ್ನು ಶುದ್ಧನೆಂದು ಪ್ರಕಟಿಸುವವನಾಗಿರುತ್ತಾನೆ.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು