Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:13 - ಪರಿಶುದ್ದ ಬೈಬಲ್‌

13 ಬಳಿಕ ಹೋರಿಯ ಒಳಗಿನ ಕೊಬ್ಬನ್ನೂ ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೂ ತೆಗೆದುಬಿಡು. ಈ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದರ ವಪೆಯನ್ನು, ಕಾಳಿಜದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಹಾಗು ಅವುಗಳ ಮೇಲಿರುವ ಕೊಬ್ಬನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಹೋಮ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದರ ವಪೆಯನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನೀನು ಕರುಳುಗಳನ್ನೂ ಅವುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:13
29 ತಿಳಿವುಗಳ ಹೋಲಿಕೆ  

ಯಜ್ಞವನ್ನರ್ಪಿಸುವವನು, “ಕೊಬ್ಬನ್ನು ಮೊದಲು ಹೋಮ ಮಾಡೋಣ. ಅನಂತರ ನಿಮಗೆ ಬೇಕಾದುದನ್ನು ತೆಗೆದುಕೊಳ್ಳಿ” ಎಂದು ಹೇಳಿದರೆ, ಯಾಜಕರ ಸೇವಕನು, “ಇಲ್ಲ, ಯಾಜಕನಿಗಾಗಿ ಕರಿಯಲು ಮಾಂಸವನ್ನು ಈಗಲೇ ಕೊಡು. ನೀನು ಕೊಡುವುದಿಲ್ಲವಾದರೆ, ನಾನೇ ತೆಗೆದುಕೊಳ್ಳುತ್ತೇನೆ” ಎಂದು ಹೇಳುತ್ತಿದ್ದನು.


ನೀನು ನನ್ನ ಗೌರವಾರ್ಥವಾಗಿ ಕಾಣಿಕೆಗಳನ್ನು ಮತ್ತು ಧೂಪವನ್ನು ಖರೀದಿ ಮಾಡಲು ನಿನ್ನ ಹಣವನ್ನು ಖರ್ಚು ಮಾಡಲಿಲ್ಲ. ಆದರೆ ನೀನು ನನ್ನನ್ನು ನಿನ್ನ ಗುಲಾಮನಾಗುವಂತೆ ಬಲವಂತಪಡಿಸಿದೆ. ನೀನು ನಿನ್ನ ಪಾಪಗಳಿಂದ ನನಗೆ ಭಾರವನ್ನುಂಟುಮಾಡಿರುವೆ ಮತ್ತು ನಿನ್ನ ಅಪರಾಧಗಳಿಂದ ನನ್ನನ್ನು ಕುಗ್ಗಿಸಿರುವೆ.


ಆತನು ಬೊಚ್ರದಲ್ಲಿ ಮತ್ತು ಎದೋಮಿನಲ್ಲಿ ಕೊಲ್ಲುವ ಸಮಯವನ್ನು ನಿರ್ಧರಿಸಿರುತ್ತಾನೆ. ಯೆಹೋವನ ಖಡ್ಗವು ವಪೆಯಿಂದಲೂ, ಕುರಿಹೋತಗಳ ರಕ್ತದಿಂದಲೂ, ಟಗರುಗಳ ಪಿತ್ತಕೋಶದ ಕೊಬ್ಬಿನಿಂದಲೂ ರಕ್ತಭರಿತವಾಗಿದೆ.


ಯೆಹೋವನು ಹೇಳುವುದೇನೆಂದರೆ, “ಈ ಯಜ್ಞಗಳನ್ನೆಲ್ಲ ನೀವು ನನಗೆ ಕೊಡುತ್ತಲೇ ಇರುವುದೇಕೆ? ನಿಮ್ಮ ಆಡುಗಳ ಯಜ್ಞಗಳೂ, ಹೋರಿಗಳ, ಕುರಿಗಳ, ಆಡುಗಳ ಕೊಬ್ಬೂ ನನಗೆ ಬೇಕಿಲ್ಲ. ಅವುಗಳ ರಕ್ತಕ್ಕೆ ನಾನು ಪ್ರಸನ್ನನಾಗುವುದಿಲ್ಲ.


ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ; ನನ್ನ ಮೂಳೆಗಳೆಲ್ಲಾ ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ.


“ಆದರೆ ಚೊಚ್ಚಲು ಆಕಳಿಗಾಗಲಿ ಕುರಿಗಾಗಲಿ ಆಡಿಗಾಗಲಿ ಈಡನ್ನು ಕೊಡಕೂಡದು. ಆ ಪಶುಗಳು ಪವಿತ್ರವಾಗಿವೆ. ಅವುಗಳ ರಕ್ತವನ್ನು ವೇದಿಕೆಯ ಮೇಲೆ ಚೆಲ್ಲಿ ಅವುಗಳ ಕೊಬ್ಬನ್ನು ಯೆಹೋವನಿಗೆ ಮೆಚ್ಚಿಗೆಕರವಾದ ಸುಗಂಧ ವಾಸನೆಯ ತ್ಯಾಗಮಯವಾದ ಕಾಣಿಕೆಯನ್ನಾಗಿ ಹೋಮಮಾಡಿರಿ.


ಬಳಿಕ ಯಾಜಕನು ಆ ಪಶುಗಳ ರಕ್ತವನ್ನು ದೇವದರ್ಶನಗುಡಾರದ ಬಾಗಿಲಿನ ಹತ್ತಿರವಿರುವ ಯೆಹೋವನ ಯಜ್ಞವೇದಿಕೆಗೆ ಚೆಲ್ಲುವನು ಮತ್ತು ಅವುಗಳ ಕೊಬ್ಬನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡುವನು. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಬಳಿಕ ಅವನು ಪಾಪಪರಿಹಾರಕ ಯಜ್ಞದ ಕೊಬ್ಬನ್ನು ವೇದಿಕೆಯ ಮೇಲೆ ಹೋಮಮಾಡುವನು.


ಆರೋನನ ಪುತ್ರರು ಹೋರಿಯ ಮತ್ತು ಟಗರಿನ ಕೊಬ್ಬನ್ನೂ ಆರೋನನ ಬಳಿಗೆ ತಂದರು. ಇವರು ಬಾಲದ ಕೊಬ್ಬನ್ನೂ ಒಳಗಿನ ಭಾಗಗಳನ್ನು ಆವರಿಸಿರುವ ಕೊಬ್ಬನ್ನೂ ಮೂತ್ರಪಿಂಡಗಳನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ತಂದರು.


ಆರೋನನು ಪಾಪಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು ಮತ್ತು ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನು ತೆಗೆದುಕೊಂಡನು. ಅವನು ಆ ವಸ್ತುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು.


ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನೂ ಒಳಗಿನ ಭಾಗಗಳ ಮೇಲಿರುವ ಕೊಬ್ಬೆಲ್ಲವನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ಮತ್ತು ಬಲ ತೊಡೆಯನ್ನೂ ತೆಗೆದುಕೊಂಡನು.


ಮೋಶೆಯು ಹೋರಿಯ ಒಳಗಿನ ಭಾಗಗಳ ಕೊಬ್ಬನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳನ್ನು ಆವರಿಸಿರುವ ಕೊಬ್ಬನ್ನೂ ತೆಗೆದುಕೊಂಡು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು.


ಬಳಿಕ ಯಾಜಕನು ವೇದಿಕೆಯ ಮೇಲೆ ಕೊಬ್ಬನ್ನು ಹೋಮಮಾಡಬೇಕು. ಆದರೆ ಪಶುವಿನ ಎದೆಯ ಭಾಗವು ಆರೋನನಿಗೂ ಅವನ ಪುತ್ರರಿಗೂ ಸೇರಿದ್ದಾಗಿದೆ.


“ಯಾಜಕನು ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನೆಲ್ಲಾ ಅರ್ಪಿಸಬೇಕು. ಅವನು ಬಾಲದ ಕೊಬ್ಬನ್ನು ಮತ್ತು ಒಳಗಿನ ಭಾಗಗಳನ್ನು ಆವರಿಸಿರುವ ಕೊಬ್ಬನ್ನೆಲ್ಲಾ ಸಮರ್ಪಿಸಬೇಕು.


ಆದರೆ ವೇದಿಕೆಯ ಮೇಲೆ ಬೆಂಕಿ ಉರಿಯುತ್ತಲೇ ಇರಬೇಕು. ಅದನ್ನು ಆರಿ ಹೋಗುವುದಕ್ಕೆ ಬಿಡಬಾರದು, ಯಾಜಕನು ಪ್ರತಿ ಮುಂಜಾನೆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಸಿದ್ಧಪಡಿಸಿ, ಸಮಾಧಾನಯಜ್ಞದ ಕೊಬ್ಬನ್ನು ಸುಡಬೇಕು.


ಯಾಜಕನು ಸಮಾಧಾನಯಜ್ಞಗಳಲ್ಲಿ ಕುರಿಮರಿಯ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಈ ಕುರಿಮರಿಯ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸುವ ಸಮರ್ಪಣೆಯಂತೆ ವೇದಿಕೆಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಅವನು ಮಾಡಿದ ಪಾಪದಿಂದ ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಯಾಜಕನು ಸಮಾಧಾನಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಹೋತದ ಕೊಬ್ಬನ್ನೆಲ್ಲಾ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಸಮಾಧಾನಯಜ್ಞವಾಗಿದೆ. ಕೊಬ್ಬನ್ನು ಹೋಮಮಾಡುವಂತೆ ಅದನ್ನು ಹೋಮಮಾಡಬೇಕು. ಹೀಗೆ ಯಾಜಕನು ಅಧಿಪತಿಯನ್ನು ಶುದ್ಧಗೊಳಿಸುವನು. ಆಗ ದೇವರು ಆ ಅಧಿಪತಿಯನ್ನು ಕ್ಷಮಿಸುವನು.


ಯಾಜಕನು ಅದನ್ನು ವೇದಿಕೆಯ ಬಳಿಗೆ ತರಬೇಕು. ಯಾಜಕನು ಪಕ್ಷಿಯ ಕುತ್ತಿಗೆಯನ್ನು ಮುರಿದು ವೇದಿಕೆಯ ಮೇಲೆ ಹೋಮಮಾಡಬೇಕು. ಪಕ್ಷಿಯ ರಕ್ತವು ವೇದಿಕೆಯ ಪಾರ್ಶ್ವದಲ್ಲಿ ಹಿಂಡಲ್ಪಡಬೇಕು.


ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಬಳಿಕ ಈ ವಸ್ತುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಯಿಂದ ತೆಗೆದುಕೊಂಡು ಟಗರಿನ ಜೊತೆ ಯಜ್ಞವೇದಿಕೆಯ ಮೇಲಿಡು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧಹೋಮವಾಗಿದ್ದು ಆತನನ್ನು ಮೆಚ್ಚಿಸುವುದು.


“ಬಳಿಕ ಟಗರಿನ ಕೊಬ್ಬನ್ನೂ ತೆಗೆದುಕೊ. (ಇದು ಆರೋನನನ್ನು ಮಹಾಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು.) ಬಾಲದ ಸುತ್ತಲಿರುವ ಕೊಬ್ಬನ್ನು, ದೇಹದ ಒಳಗಿನ ಅಂಗಗಳನ್ನು ಮುಚ್ಚಿಕೊಂಡಿರುವ ಕೊಬ್ಬನ್ನು, ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಮತ್ತು ಬಲತೊಡೆಯನ್ನು ತೆಗೆದುಕೊ.


ತರುವಾಯ ಯಜ್ಞವೇದಿಕೆಯ ಮೇಲೆ ಇಡೀ ಟಗರನ್ನು ಹೋಮಮಾಡು. ಇದು ವಿಶೇಷವಾದ ಸರ್ವಾಂಗಹೋಮವಾಗಿದೆ. ಇದು ಯೆಹೋವನಿಗೆ ಪರಿಮಳ ವಾಸನೆಯಾಗಿದ್ದು ಆತನಿಗೆ ಮೆಚ್ಚಿಕೆಕರವಾಗಿದೆ.


ನೀವು ಆ ಪಶುವಿನ ಮಾಂಸವನ್ನು ಹಸಿಯಾಗಲಿ ನೀರಿನಲ್ಲಿ ಬೇಯಿಸಿಯಾಗಲಿ ತಿನ್ನಬಾರದು; ಅದರ ಮಾಂಸವನ್ನು ಬೆಂಕಿಯ ಮೇಲಿಟ್ಟು ಬೇಯಿಸಬೇಕು. ಅದರ ತಲೆ, ಕಾಲುಗಳನ್ನೂ ಒಳಗಿನ ಭಾಗಗಳನ್ನೂ ಬೆಂಕಿಯ ಮೇಲೆ ಬೇಯಿಸಬೇಕು.


ಯಾಜಕನು ಅದರ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳನ್ನು ಸೊಂಟದವರೆಗೆ ಆವರಿಸಿರುವ ಕೊಬ್ಬನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಅರ್ಪಿಸಬೇಕು. ಅವನು ಮೂತ್ರಪಿಂಡಗಳೊಡನೆ ಪಿತ್ತಾಶಯವನ್ನು ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು