Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:18 - ಪರಿಶುದ್ದ ಬೈಬಲ್‌

18 ತರುವಾಯ ಯಜ್ಞವೇದಿಕೆಯ ಮೇಲೆ ಇಡೀ ಟಗರನ್ನು ಹೋಮಮಾಡು. ಇದು ವಿಶೇಷವಾದ ಸರ್ವಾಂಗಹೋಮವಾಗಿದೆ. ಇದು ಯೆಹೋವನಿಗೆ ಪರಿಮಳ ವಾಸನೆಯಾಗಿದ್ದು ಆತನಿಗೆ ಮೆಚ್ಚಿಕೆಕರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದನ್ನೆಲ್ಲಾ ಬಲಿಪೀಠದ ಮೇಲೆ ಸರ್ವೇಶ್ವರನಾದ ನನಗೆ ದಹನಬಲಿಯಾಗಿ ಸಮರ್ಪಿಸು. ಇದು ನನಗೆ ಪ್ರಿಯವಾದ ಸುಗಂಧ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದನ್ನೆಲ್ಲಾ ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ದಹನಬಲಿಯಾಗಿದೆ. ಅದು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:18
23 ತಿಳಿವುಗಳ ಹೋಲಿಕೆ  

ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.


ಎಪಫ್ರೊದೀತನು ನಿಮ್ಮ ಕೊಡುಗೆಯನ್ನು ತಂದು ಕೊಟ್ಟಿದ್ದರಿಂದ ಬೇಕಾದದ್ದೆಲ್ಲ ನನ್ನಲ್ಲಿ ಹೇರಳವಾಗಿದೆ. ನಿಮ್ಮ ಕೊಡುಗೆಯು ದೇವರಿಗೆ ಅರ್ಪಿಸಲ್ಪಟ್ಟ ಪರಿಮಳಭರಿತವಾದ ಯಜ್ಞವಾಗಿದೆ. ಇದು ದೇವರಿಗೆ ಮೆಚ್ಚಿಕೆಯಾದದ್ದೂ ಆಗಿದೆ.


ಪ್ರೀತಿಯಿಂದ ಬಾಳಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿದಂತೆ ನೀವೂ ಇತರರನ್ನು ಪ್ರೀತಿಸಿರಿ. ಕ್ರಿಸ್ತನು ನಮಗೋಸ್ಕರವಾಗಿ ತನ್ನನ್ನೇ ಪರಿಮಳದ ಕಾಣಿಕೆಯಾಗಿಯೂ ಯಜ್ಞವಾಗಿಯೂ ದೇವರಿಗೆ ಸಮರ್ಪಿಸಿಕೊಂಡನು.


ಆತನಲ್ಲದೆ ಬೇರೆ ದೇವರಿಲ್ಲ. ದೇವರನ್ನು ಪೂರ್ಣಹೃದಯದಿಂದ, ಪೂರ್ಣಬುದ್ಧಿಯಿಂದ ಹಾಗೂ ಪೂರ್ಣಶಕ್ತಿಯಿಂದ ಪ್ರೀತಿಸಬೇಕು ಮತ್ತು ಒಬ್ಬ ವ್ಯಕ್ತಿಯು ತನ್ನನ್ನು ಪ್ರೀತಿಸುವಂತೆಯೇ ಇತರರನ್ನೂ ಪ್ರೀತಿಸಬೇಕು. ನಾವು ದೇವರಿಗೆ ಅರ್ಪಿಸುವ ಪಶುಯಜ್ಞಗಳಿಗಿಂತಲೂ ಈ ಆಜ್ಞೆಗಳು ಹೆಚ್ಚು ಮುಖ್ಯವಾಗಿವೆ” ಎಂದು ಉತ್ತರಿಸಿದನು.


ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ? ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”


ಯೆಹೋವನು ಹೇಳುವುದೇನೆಂದರೆ, “ಈ ಯಜ್ಞಗಳನ್ನೆಲ್ಲ ನೀವು ನನಗೆ ಕೊಡುತ್ತಲೇ ಇರುವುದೇಕೆ? ನಿಮ್ಮ ಆಡುಗಳ ಯಜ್ಞಗಳೂ, ಹೋರಿಗಳ, ಕುರಿಗಳ, ಆಡುಗಳ ಕೊಬ್ಬೂ ನನಗೆ ಬೇಕಿಲ್ಲ. ಅವುಗಳ ರಕ್ತಕ್ಕೆ ನಾನು ಪ್ರಸನ್ನನಾಗುವುದಿಲ್ಲ.


ನಿಮ್ಮ ಯಜ್ಞಗಳ ಬಗ್ಗೆ ನಾನು ದೂರು ಹೇಳುತ್ತಿಲ್ಲ. ಇಸ್ರೇಲರಾದ ನೀವು ನನಗೆ ಸರ್ವಾಂಗಹೋಮಗಳನ್ನು ನಿತ್ಯವೂ ಅರ್ಪಿಸುತ್ತಲೇ ಇದ್ದೀರಿ.


ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಗಳನ್ನು, ಸೌದೆಯನ್ನು, ಕಲ್ಲುಗಳನ್ನು ಮತ್ತು ಯಜ್ಞವೇದಿಕೆಯ ಸುತ್ತಲಿನ ಮಣ್ಣನ್ನೆಲ್ಲ ದಹಿಸಿತು. ಆ ಹಳ್ಳದಲ್ಲಿದ್ದ ನೀರನ್ನೆಲ್ಲ ಬೆಂಕಿಯು ದಹಿಸಿ ಒಣಗಿಸಿತು.


ರಾಜನಾದ ಸೊಲೊಮೋನನು ಯಜ್ಞವನ್ನು ಅರ್ಪಿಸಲು ಗಿಬ್ಯೋನಿಗೆ ಹೋದನು. ಅದು ಅತ್ಯಂತ ಮುಖ್ಯವಾದ ಎತ್ತರದ ಸ್ಥಳವಾದುದರಿಂದ ಅವನು ಅಲ್ಲಿಗೆ ಹೋದನು. ಸೊಲೊಮೋನನು ಒಂದು ಸಾವಿರ ಯಜ್ಞಗಳನ್ನು ಯಜ್ಞವೇದಿಕೆಯ ಮೇಲೆ ಅರ್ಪಿಸಿದನು.


ಸಮುವೇಲನು ಕುರಿಮರಿಯೊಂದನ್ನು ತಂದು ಯೆಹೋವನಿಗೆ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಸಮುವೇಲನು ಇಸ್ರೇಲರಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಸಮುವೇಲನ ಪ್ರಾರ್ಥನೆಗೆ ಉತ್ತರಿಸಿದನು.


ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು.


ತರುವಾಯ ಯಾಜಕನು ಪಕ್ಷಿಯ ರೆಕ್ಕೆಗಳನ್ನು ಕಿತ್ತುಹಾಕಬೇಕು. ಆದರೆ ಅವನು ಪಕ್ಷಿಯನ್ನು ಎರಡು ಭಾಗಗಳಾಗಿ ವಿಭಾಗಿಸಬಾರದು. ಯಾಜಕನು ಪಕ್ಷಿಯನ್ನು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಗಳ ಮೇಲಿಟ್ಟು ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಸಮರ್ಪಣೆಯಾದ ಸರ್ವಾಂಗಹೋಮವಾಗಿದೆ. ಅದರ ಸುವಾಸನೆ ಯೆಹೋವನಿಗೆ ಪ್ರಿಯವಾಗಿದೆ.


ಬಳಿಕ ಈ ವಸ್ತುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಯಿಂದ ತೆಗೆದುಕೊಂಡು ಟಗರಿನ ಜೊತೆ ಯಜ್ಞವೇದಿಕೆಯ ಮೇಲಿಡು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧಹೋಮವಾಗಿದ್ದು ಆತನನ್ನು ಮೆಚ್ಚಿಸುವುದು.


ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ಒಂದು ಟಗರನ್ನು ಕಂಡನು. ಆ ಟಗರಿನ ಕೊಂಬುಗಳು ಒಂದು ಪೊದೆಗೆ ಸಿಕ್ಕಿಕೊಂಡಿದ್ದವು. ಕೂಡಲೇ ಅವನು ಹೋಗಿ, ಆ ಟಗರನ್ನು ಎಳೆದುಕೊಂಡು ಬಂದು ದೇವರಿಗೆ ತನ್ನ ಮಗನ ಬದಲಾಗಿ ಯಜ್ಞವಾಗಿ ಅರ್ಪಿಸಿದನು.


ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆದನು. ಅಬ್ರಹಾಮನು, “ಏನು ಮಗನೇ?” ಎಂದು ಉತ್ತರಿಸಿದನು. ಇಸಾಕನು, “ಕಟ್ಟಿಗೆ ಮತ್ತು ಬೆಂಕಿ ನನಗೆ ಕಾಣಿಸುತ್ತಿವೆ. ಆದರೆ ಯಜ್ಞಕ್ಕೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದನು.


ಆಗ ದೇವರು ಅವನಿಗೆ, “ನಿನಗೆ ಪ್ರಿಯನಾಗಿರುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಮೊರೀಯ ದೇಶಕ್ಕೆ ಕರೆದುಕೊಂಡು ಹೋಗು. ನಾನು ನಿನಗೆ ತಿಳಿಸುವ ಬೆಟ್ಟದ ಮೇಲೆ ಅವನನ್ನು ಯಜ್ಞವನ್ನಾಗಿ ಅರ್ಪಿಸು” ಎಂದು ಹೇಳಿದನು.


ಬಳಿಕ ಟಗರನ್ನು ಅನೇಕ ತುಂಡುಗಳಾಗಿ ಕತ್ತರಿಸು. ಟಗರಿನ ಒಳಗಿನ ಎಲ್ಲಾ ಭಾಗಗಳನ್ನು ಮತ್ತು ಕಾಲುಗಳನ್ನು ತೊಳೆಯಬೇಕು. ಅವುಗಳನ್ನು ತಲೆಯ ಮತ್ತು ಟಗರಿನ ಇತರ ತುಂಡುಗಳೊಡನೆ ಇಡು.


ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಯಾಜಕನು ಸಮಾಧಾನಯಜ್ಞಗಳಲ್ಲಿ ಕೊಬ್ಬನ್ನು ಪ್ರತ್ಯೇಕಿಸಿದಂತೆಯೇ ಆಡಿನ ಕೊಬ್ಬನ್ನೆಲ್ಲಾ ಪ್ರತ್ಯೇಕಿಸಿ ಅದನ್ನು ಯೆಹೋವನಿಗೆ ಸುಗಂಧವಾಸನೆಯ ಹೋಮವಾಗಿ ವೇದಿಕೆಯ ಮೇಲೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಶುದ್ಧಿಗೊಳಿಸುವನು. ಆಗ ದೇವರು ಆ ವ್ಯಕ್ತಿಯನ್ನು ಕ್ಷಮಿಸುವನು.


ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು