Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:2 - ಪರಿಶುದ್ದ ಬೈಬಲ್‌

2 ಬಳಿಕ ಹುಳಿಯಿಲ್ಲದ ರೊಟ್ಟಿಯನ್ನೂ ಆಲಿವ್ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಾಕಿದ ತೆಳುವಾದ ಕಡುಬುಗಳನ್ನೂ ಗೋಧಿಹಿಟ್ಟಿನಿಂದ ಮಾಡಿಸಿ ಒಂದೇ ಬುಟ್ಟಿಯಲ್ಲಿ ತುಂಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹುಳಿಯಿಲ್ಲದ ರೊಟ್ಟಿಗಳನ್ನು ಎಣ್ಣೆಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು ಹಾಗು ಎಣ್ಣೆ ಹೊಯಿದು ಹುಳಿಯಿಲ್ಲದ ಕಡುಬುಗಳನ್ನು ಗೋದಿ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ವಿುಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹೊಯಿದ ಹುಳಿಯಿಲ್ಲದ ಕಡುಬುಗಳನ್ನೂ ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅತ್ಯುತ್ತಮ ಗೋಧಿಯ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ಹೊಯ್ದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಚ್ಚಿದ ಹುಳಿಯಿಲ್ಲದ ಪೂರಿಗಳನ್ನೂ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:2
14 ತಿಳಿವುಗಳ ಹೋಲಿಕೆ  

ಶುದ್ಧವಾದ ಹಿಟ್ಟಿನಿಂದ ಮತ್ತು ಎಣ್ಣೆಯಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆಹಾಕಿ ಮಾಡಿದ ಹುಳಿಯಿಲ್ಲದ ತೆಳುವಾದ ರೊಟ್ಟಿಗಳನ್ನೂ ಒಂದು ಪುಟ್ಟಿತುಂಬಾ ಸಮರ್ಪಿಸಬೇಕು; ಅಲ್ಲದೆ ಮೇಲೆ ವಿವರಿಸಿದ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಗಳನ್ನೂ ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.


ಹಳೆಯ ಹುಳಿಯನ್ನೆಲ್ಲಾ (ಪಾಪ) ತೆಗೆದುಹಾಕಿರಿ. ಆಗ ನೀವು ಹೊಸ ಹಿಟ್ಟಾಗುವಿರಿ. ನೀವು ನಿಜವಾಗಿಯೂ ಹುಳಿರಹಿತವಾದ ಪಸ್ಕದ ರೊಟ್ಟಿಯಾಗಿದ್ದೀರಿ. ಹೌದು, ನಮ್ಮ ಪಸ್ಕದ ಕುರಿಮರಿಯಾದ ಕ್ರಿಸ್ತನು ಆಗಲೇ ಕೊಲ್ಲಲ್ಪಟ್ಟಿದ್ದಾನೆ.


“ನಾಜೀರನು ತನ್ನ ತಲೆಕೂದಲನ್ನು ಕ್ಷೌರಮಾಡಿಸಿಕೊಂಡ ನಂತರ, ಯಾಜಕನು ಅವನಿಗೆ ಆ ಟಗರಿನ ಬೆಂದ ಮುಂದೊಡೆಯನ್ನೂ ಪುಟ್ಟಿಯಲ್ಲಿನ ಒಂದು ಹುಳಿಯಿಲ್ಲದ ಸಿಹಿರೊಟ್ಟಿಯನ್ನೂ ಒಂದು ಹುಳಿಯಿಲ್ಲದ ತೆಳುವಾದ ರೊಟ್ಟಿಯನ್ನೂ ಅವನ ಕೈಯಲ್ಲಿ ಇಡಬೇಕು.


ಪ್ರತಿದಿನ ಯೆಹೋವನ ಸನ್ನಿಧಿಯಲ್ಲಿ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯು ಇಡಲ್ಪಡುತ್ತಿತ್ತು. ಮೋಶೆಯು ರೊಟ್ಟಿಯಲ್ಲಿ ಒಂದು ತುಂಡನ್ನೂ ಎಣ್ಣೆ ಬೆರಸಿದ ರೊಟ್ಟಿಯಲ್ಲಿ ಒಂದು ತುಂಡನ್ನೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡನು. ಮೋಶೆಯು ಆ ರೊಟ್ಟಿಯ ತುಂಡುಗಳನ್ನು ಕೊಬ್ಬಿನ ಮತ್ತು ಟಗರಿನ ಬಲ ತೊಡೆಯ ಮೇಲೆ ಇಟ್ಟನು.


“ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಅವರೊಂದಿಗೆ ಯಾಜಕ ವಸ್ತ್ರಗಳನ್ನೂ ಅಭಿಷೇಕ ತೈಲವನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯಿಂದ ತುಂಬಿರುವ ಪುಟ್ಟಿಯನ್ನೂ ತೆಗೆದುಕೊಂಡು ಬಾ.


ಅವನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಯನ್ನೂ ಎಣ್ಣೆ ಹೊಯಿದು ಮಾಡಿದ ಕಡುಬುಗಳನ್ನೂ ಎಣ್ಣೆಬೆರೆಸಿದ ಹೋಳಿಗೆಗಳನ್ನೂ ತರಬೇಕು.


ಧಾನ್ಯಸಮರ್ಪಣೆಗಳು ಆರೋನನ ಪುತ್ರರಿಗೆ ಸೇರುವವು. ಅದು ಒಣಗಿದ್ದರೂ ಎಣ್ಣೆಯಿಂದ ಬೆರೆತಿದ್ದರೂ ಅವರಿಗೆ ಸೇರುವವು. ಯಾಜಕರಾದ ಆರೋನನ ಪುತ್ರರೆಲ್ಲರೂ ಈ ಆಹಾರವನ್ನು ಸಮವಾಗಿ ಹಂಚಿಕೊಳ್ಳುವರು.


ನೀವು ಅದಕ್ಕೆ ಎಣ್ಣೆಯನ್ನು ಹಾಕಿ ಅದರ ಮೇಲೆ ಧೂಪವನ್ನಿಡಬೇಕು. ಅದು ಧಾನ್ಯಸಮರ್ಪಣೆಯಾಗಿದೆ.


ಬಳಿಕ ನೀನು ಮಾಡಿದ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನು ತೆಗೆದುಕೊ. ಇದು ಯೆಹೋವನ ಮುಂದೆ ಇಟ್ಟ ಬುಟ್ಟಿಯಾಗಿದೆ. ಒಂದು ತುಂಡು ರೊಟ್ಟಿ, ಎಣ್ಣೆಯಿಂದ ಮಾಡಿದ ಒಂದು ಹೋಳಿಗೆ, ತೆಳುವಾದ ಒಂದು ಕಡುಬು ಇವುಗಳನ್ನು ಬುಟ್ಟಿಯಿಂದ ತೆಗೆದುಕೊ.


“ಅಂದು ರಾತ್ರಿ ಆ ಪಶುವಿನ ಮಾಂಸವನ್ನು ಸುಟ್ಟು ಸಂಪೂರ್ಣವಾಗಿ ತಿನ್ನಬೇಕು. ಅದರೊಡನೆ ಕಹಿಯಾದ ಪಲ್ಯಗಳನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತಿನ್ನಬೇಕು.


ಬಳಿಕ ಆ ಬುಟ್ಟಿಯನ್ನು ಆರೋನನಿಗೂ ಮತ್ತು ಅವನ ಪುತ್ರರಿಗೂ ಕೊಡು. ಅದೇ ಸಮಯದಲ್ಲಿ ಹೋರಿಯನ್ನು ಮತ್ತು ಎರಡು ಟಗರುಗಳನ್ನು ಅವರಿಗೆ ಕೊಡು.


ಬೆಂಕಿಯು ವೇದಿಕೆಯ ಮೇಲೆ ಉರಿಯುತ್ತಲೇ ಇರಬೇಕು; ಆರಿಹೋಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು