Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:20 - ಪರಿಶುದ್ದ ಬೈಬಲ್‌

20 ಆ ಟಗರನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊ. ಆ ರಕ್ತವನ್ನು ಆರೋನ ಮತ್ತು ಅವನ ಪುತ್ರರ ಬಲಗಿವಿಯ ತುದಿಗೆ ಹಚ್ಚು. ಅದಲ್ಲದೆ ಅವರ ಬಲಗೈಗಳ ಹೆಬ್ಬೆರಳುಗಳಿಗೂ ಸ್ವಲ್ಪ ರಕ್ತವನ್ನು ಹಚ್ಚು. ಸ್ವಲ್ಪ ರಕ್ತವನ್ನು ಅವರ ಬಲಗಾಲಿನ ಹೆಬ್ಬೊಟ್ಟಿಗೂ ಹಚ್ಚು. ಬಳಿಕ ಉಳಿದ ರಕ್ತವನ್ನು ಯಜ್ಞವೇದಿಕೆಯ ನಾಲ್ಕು ಕಡೆಗಳಿಗೆ ಚೆಲ್ಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಂತರ ಅದನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆರಳಿಗೂ ಹಚ್ಚಿ, ಮಿಕ್ಕ ರಕ್ತವನ್ನು ಯಜ್ಞವೇದಿಯ ಸುತ್ತಲು ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಸೋಂಕಿಸಿ ಮಿಕ್ಕ ರಕ್ತವನ್ನು ಬಲಿಪೀಠದ ನಾಲ್ಕು ಕಡೆಗಳಿಗೂ ಸುರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅದನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಸೋಂಕಿಸಿ ವಿುಕ್ಕ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚೆಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತರುವಾಯ ನೀನು ಅದನ್ನು ವಧಿಸಿ, ಅದರ ರಕ್ತವನ್ನು ಆರೋನನ ಮತ್ತು ಅವನ ಪುತ್ರರ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಆ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:20
19 ತಿಳಿವುಗಳ ಹೋಲಿಕೆ  

ನನ್ನ ಒಡೆಯನಾದ ಯೆಹೋವನು ನನಗೆ ಕಲಿಯಲು ಸಹಾಯ ಮಾಡುತ್ತಾನೆ. ನಾನು ಆತನಿಗೆ ವಿರುದ್ಧವಾಗಿ ದಂಗೆ ಏಳಲಿಲ್ಲ. ಆತನನ್ನು ಹಿಂಬಾಲಿಸುವದನ್ನು ನಿಲ್ಲಿಸುವದಿಲ್ಲ.


ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.


ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.


ಯೇಸು ಅವನನ್ನು ಜನರಿಂದ ಸ್ವಲ್ಪ ದೂರ ತನ್ನೊಂದಿಗೆ ಕರೆದೊಯ್ದು ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿಟ್ಟು ಉಗುಳಿ, ಅವನ ನಾಲಿಗೆಯನ್ನು ಮುಟ್ಟಿದನು.


ಅನೇಕ ಜನಾಂಗಗಳವರು ಆತನನ್ನು ಕಂಡು ಆಶ್ಚರ್ಯಪಡುವರು. ಅರಸರು ದಿಗ್ಭ್ರಮೆಯಿಂದ ಆತನನ್ನು ದೃಷ್ಟಿಸಿ ನೋಡುವರು. ಅವರು ನನ್ನ ಸೇವಕನ ಬಗ್ಗೆ ಕೇಳಲಿಲ್ಲ. ಆತನಿಗೆ ಸಂಭವಿಸಿದ್ದನ್ನೇ ನೋಡಿದರು. ಅವರು ಆತನ ವಿಚಾರ ಕೇಳದಿದ್ದರೂ ಅವರಿಗೆ ತಿಳಿದುಬಂತು.”


ಬಳಿಕ ಆರೋನನು ತನ್ನ ಬೆರಳಿನಿಂದ ಸ್ವಲ್ಪ ರಕ್ತವನ್ನು ಯಜ್ಞವೇದಿಕೆಯ ಮೇಲೆ ಏಳು ಸಲ ಚಿಮಿಕಿಸುವನು. ಹೀಗೆ ಆರೋನನು ಯಜ್ಞವೇದಿಕೆಯನ್ನು ಇಸ್ರೇಲರಿಂದ ಅದಕ್ಕುಂಟಾದ ಅಶುದ್ಧತ್ವದಿಂದ ದೂರಮಾಡಿ ಪರಿಶುದ್ಧಗೊಳಿಸುವನು.


ಬಳಿಕ ಯಾಜಕನು ತನ್ನ ಬಲಗೈಯ ಬೆರಳನ್ನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ಎಣ್ಣೆಯನ್ನು ಏಳುಸಲ ಚಿಮಿಕಿಸಬೇಕು.


“ಯಾಜಕನು ದೋಷಪರಿಹಾರಕ ಯಜ್ಞಪಶುವಿನ ರಕ್ತದಿಂದ ಸ್ವಲ್ಪವನ್ನು ತೆಗೆದುಕೊಂಡು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.


ಯಾಜಕನು ಚರ್ಮರೋಗವಿದ್ದ ವ್ಯಕ್ತಿಯ ಮೇಲೆ ರಕ್ತವನ್ನು ಏಳುಸಲ ಚಿಮಿಕಿಸಬೇಕು. ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಬಳಿಕ ಯಾಜಕನು ಬಯಲಿಗೆ ಹೋಗಿ ಜೀವಂತವಾಗಿರುವ ಪಕ್ಷಿಯನ್ನು ಬಿಟ್ಟುಬಿಡಬೇಕು.


ಬಳಿಕ ಮೋಶೆಯು ಆರೋನನ ಪುತ್ರರನ್ನು ವೇದಿಕೆಯ ಸಮೀಪಕ್ಕೆ ಕರೆಸಿ ಸ್ವಲ್ಪ ರಕ್ತವನ್ನು ಅವರ ಬಲಗಿವಿಗಳ ತುದಿಗೂ ಅವರ ಬಲಗೈಗಳ ಹೆಬ್ಬೆರಳಿಗೂ ಮತ್ತು ಅವರ ಬಲಗಾಲುಗಳ ಹೆಬ್ಬೆಟ್ಟಿಗೂ ಹಚ್ಚಿದನು; ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು;


“ಮತ್ತೊಂದು ಟಗರಿನ ಮೇಲೆ ತಮ್ಮ ಕೈಗಳನ್ನಿಡಲು ಆರೋನನಿಗೂ ಅವನ ಪುತ್ರರಿಗೂ ಹೇಳು.


ತರುವಾಯ ಯಜ್ಞವೇದಿಕೆಯಿಂದ ಸ್ವಲ್ಪ ರಕ್ತವನ್ನು ತೆಗೆದುಕೊ. ಅದನ್ನು ವಿಶೇಷವಾದ ಅಭೀಷೇಕತೈಲದಲ್ಲಿ ಬೆರಸಿ ಆರೋನನ ಮೇಲೆಯೂ ಅವನ ಬಟ್ಟೆಗಳ ಮೇಲೆಯೂ ಚಿಮಿಕಿಸು. ಅವನ ಪುತ್ರರ ಮತ್ತು ಅವರ ಬಟ್ಟೆಗಳ ಮೇಲೆಯೂ ಚಿಮಿಕಿಸು. ಆಗ ಅವರು ಪರಿಶುದ್ಧಗೊಳ್ಳುವರು, ಅವರ ಬಟ್ಟೆಗಳೂ ಪರಿಶುದ್ಧಗೊಳ್ಳುವವು. ಆರೋನನು ಮತ್ತು ಅವನ ಪುತ್ರರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡುತ್ತಾರೆಂದು ಇದು ತೋರಿಸುವುದು.


ಆಗ ಮೋಶೆ ಟಗರನ್ನು ವಧಿಸಿ ಅದರ ಸ್ವಲ್ಪ ರಕ್ತವನ್ನು ಆರೋನನ ಬಲಗಿವಿಯ ತುದಿಗೂ ಅವನ ಬಲಗೈಯ ಹೆಬ್ಬೆರಳಿಗೂ ಅವನ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.


ಯಾಜಕನು ತನ್ನ ಅಂಗೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧನಾಗಲಿರುವ ವ್ಯಕ್ತಿಯ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಹಚ್ಚಿದ ಸ್ಥಳದಲ್ಲಿಯೇ ಅಂದರೆ ಬಲಗಿವಿಯ ತುದಿಗೆ, ಬಲಗೈಯ ಹೆಬ್ಬೆರಳಿಗೆ, ಬಲಗಾಲಿನ ಹೆಬ್ಬೆರಳಿಗೆ ಹಚ್ಚುವನು.


ಬಳಿಕ ದೋಷಪರಿಹಾರಕ ಯಜ್ಞವಾದ ಕುರಿಮರಿಯನ್ನು ಯಾಜಕನು ವಧಿಸುವನು. ಯಾಜಕನು ದೋಷಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧೀಕರಿಸಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.


ಬಳಿಕ ತನ್ನ ಅಂಗೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ದೋಷಪರಿಹಾರಕ ಯಜ್ಞದ ರಕ್ತವನ್ನು ಹಚ್ಚಿದ ಸ್ಥಳದಲ್ಲಿಯೇ ಹಚ್ಚುವನು; ಸ್ವಲ್ಪ ಎಣ್ಣೆಯನ್ನು ಶುದ್ಧೀಕರಿಸಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೆ ಹಚ್ಚಬೇಕು; ಸ್ವಲ್ಪ ಎಣ್ಣೆಯನ್ನು ಬಲಗೈಯ ಹೆಬ್ಬೆರಳಿಗೂ ಸ್ವಲ್ಪ ಎಣ್ಣೆಯನ್ನು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು