Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:21 - ಪರಿಶುದ್ದ ಬೈಬಲ್‌

21 ತರುವಾಯ ಯಜ್ಞವೇದಿಕೆಯಿಂದ ಸ್ವಲ್ಪ ರಕ್ತವನ್ನು ತೆಗೆದುಕೊ. ಅದನ್ನು ವಿಶೇಷವಾದ ಅಭೀಷೇಕತೈಲದಲ್ಲಿ ಬೆರಸಿ ಆರೋನನ ಮೇಲೆಯೂ ಅವನ ಬಟ್ಟೆಗಳ ಮೇಲೆಯೂ ಚಿಮಿಕಿಸು. ಅವನ ಪುತ್ರರ ಮತ್ತು ಅವರ ಬಟ್ಟೆಗಳ ಮೇಲೆಯೂ ಚಿಮಿಕಿಸು. ಆಗ ಅವರು ಪರಿಶುದ್ಧಗೊಳ್ಳುವರು, ಅವರ ಬಟ್ಟೆಗಳೂ ಪರಿಶುದ್ಧಗೊಳ್ಳುವವು. ಆರೋನನು ಮತ್ತು ಅವನ ಪುತ್ರರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡುತ್ತಾರೆಂದು ಇದು ತೋರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದಲ್ಲದೆ ಬಲಿಪೀಠದ ಮೇಲಿರುವ ರಕ್ತದಲ್ಲಿಯೂ ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮಕಿಸು. ಹೀಗೆ ಅವನೂ ಅವನ ಮಕ್ಕಳು ಅವನ ವಸ್ತ್ರಗಳ ಸಹಿತವಾಗಿ ಪ್ರತಿಷ್ಠಾಪಿತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ ಅಭಿಷೇಕತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿವಿುಕಿಸಬೇಕು. ಹೀಗೆ ಅವನೂ ಅವನ ಮಕ್ಕಳೂ ಅವರ ವಸ್ತ್ರಗಳು ಸಹಿತವಾಗಿ ಪರಿಶುದ್ಧರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಪುತ್ರರೂ ಅವರ ವಸ್ತ್ರಗಳೂ ಪರಿಶುದ್ಧವಾಗುವ ಹಾಗೆ ಬಲಿಪೀಠದ ಮೇಲಿರುವ ರಕ್ತವನ್ನೂ, ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಪುತ್ರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:21
16 ತಿಳಿವುಗಳ ಹೋಲಿಕೆ  

ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.


ಮೋಶೆ ಸ್ವಲ್ಪ ಅಭಿಷೇಕತೈಲವನ್ನು ಮತ್ತು ವೇದಿಕೆಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮೇಲೆ ಮತ್ತು ಅವನ ಯಾಜಕವಸ್ತ್ರದ ಮೇಲೆ ಚಿಮಿಕಿಸಿದನು; ಆರೋನನ ಜೊತೆ ಇದ್ದ ಅವನ ಪುತ್ರರ ಮೇಲೆ ಮತ್ತು ಅವರ ಬಟ್ಟೆಗಳ ಮೇಲೆ ಚಿಮಿಕಿಸಿದನು. ಹೀಗೆ ಮೋಶೆಯು ಆರೋನನನ್ನೂ ಅವನ ಯಾಜಕವಸ್ತ್ರವನ್ನೂ ಅವನ ಪುತ್ರರನ್ನೂ ಅವರ ಯಾಜಕ ವಸ್ತ್ರಗಳನ್ನೂ ಪವಿತ್ರಗೊಳಿಸಿದನು.


ಅಭಿಷೇಕತೈಲವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಸುರಿ.


ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಆರೋನನು ಮತ್ತು ಅವನ ಗಂಡುಮಕ್ಕಳು ಅಭಿಷೇಕಿಸಲ್ಪಟ್ಟ ಮತ್ತು ಪ್ರತ್ಯೇಕಿಸಲ್ಪಟ್ಟ ಯಾಜಕರಾಗಿ ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡಲು ಅವರು ಮಾಡತಕ್ಕದ್ದೇನೆಂಬುದನ್ನು ನಾನೀಗ ಹೇಳುವೆನು. ಯಾವ ಅಂಗದೋಷವಿಲ್ಲದ ಒಂದು ಹೋರಿಮರಿಯನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.


ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.


ಇವರು ನಿಜವಾಗಿ ನಿನ್ನ ಸೇವೆಗೆ ಪ್ರತಿಷ್ಠಿತರಾಗಬೇಕೆಂದು ನಾನು ನನ್ನನ್ನೇ ಪ್ರತಿಷ್ಠಿಸಿಕೊಂಡಿದ್ದೇನೆ.


ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು ಆರೋನನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು;


ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯ ನ್ನು ಶುದ್ಧೀಕರಿಸಲ್ಪಡುವ ವ್ಯಕ್ತಿಯ ತಲೆಗೆ ಹಚ್ಚಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧೀಕರಿಸುವನು.


ಆ ಟಗರನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊ. ಆ ರಕ್ತವನ್ನು ಆರೋನ ಮತ್ತು ಅವನ ಪುತ್ರರ ಬಲಗಿವಿಯ ತುದಿಗೆ ಹಚ್ಚು. ಅದಲ್ಲದೆ ಅವರ ಬಲಗೈಗಳ ಹೆಬ್ಬೆರಳುಗಳಿಗೂ ಸ್ವಲ್ಪ ರಕ್ತವನ್ನು ಹಚ್ಚು. ಸ್ವಲ್ಪ ರಕ್ತವನ್ನು ಅವರ ಬಲಗಾಲಿನ ಹೆಬ್ಬೊಟ್ಟಿಗೂ ಹಚ್ಚು. ಬಳಿಕ ಉಳಿದ ರಕ್ತವನ್ನು ಯಜ್ಞವೇದಿಕೆಯ ನಾಲ್ಕು ಕಡೆಗಳಿಗೆ ಚೆಲ್ಲು.


“ಬಳಿಕ ಟಗರಿನ ಕೊಬ್ಬನ್ನೂ ತೆಗೆದುಕೊ. (ಇದು ಆರೋನನನ್ನು ಮಹಾಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು.) ಬಾಲದ ಸುತ್ತಲಿರುವ ಕೊಬ್ಬನ್ನು, ದೇಹದ ಒಳಗಿನ ಅಂಗಗಳನ್ನು ಮುಚ್ಚಿಕೊಂಡಿರುವ ಕೊಬ್ಬನ್ನು, ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಮತ್ತು ಬಲತೊಡೆಯನ್ನು ತೆಗೆದುಕೊ.


ಆಗ ಮೋಶೆ ಟಗರನ್ನು ವಧಿಸಿ ಅದರ ಸ್ವಲ್ಪ ರಕ್ತವನ್ನು ಆರೋನನ ಬಲಗಿವಿಯ ತುದಿಗೂ ಅವನ ಬಲಗೈಯ ಹೆಬ್ಬೆರಳಿಗೂ ಅವನ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.


ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಗಳಲ್ಲಿ ಇವೇ ಆರೋನನಿಗೂ ಅವನ ಪುತ್ರರಿಗೂ ಕೊಡಲ್ಪಟ್ಟ ಭಾಗಗಳಾಗಿವೆ. ಆರೋನನೂ ಅವನ ಪುತ್ರರೂ ಯೆಹೋವನ ಯಾಜಕರಾಗಿ ಸೇವೆ ಮಾಡುವಾಗಲೆಲ್ಲಾ ಯಜ್ಞಗಳಲ್ಲಿ ಆ ಪಾಲನ್ನು ಪಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು