ವಿಮೋಚನಕಾಂಡ 29:22 - ಪರಿಶುದ್ದ ಬೈಬಲ್22 “ಬಳಿಕ ಟಗರಿನ ಕೊಬ್ಬನ್ನೂ ತೆಗೆದುಕೊ. (ಇದು ಆರೋನನನ್ನು ಮಹಾಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು.) ಬಾಲದ ಸುತ್ತಲಿರುವ ಕೊಬ್ಬನ್ನು, ದೇಹದ ಒಳಗಿನ ಅಂಗಗಳನ್ನು ಮುಚ್ಚಿಕೊಂಡಿರುವ ಕೊಬ್ಬನ್ನು, ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಮತ್ತು ಬಲತೊಡೆಯನ್ನು ತೆಗೆದುಕೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಪ್ರತಿಷ್ಠೆಗಾಗಿ ಸಮರ್ಪಿಸಲ್ಪಟ್ಟ ಟಗರಾಗಿರುವುದರಿಂದ ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಪಿತ್ತಕೋಶದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಕೋಶಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಹಾಗೂ ಬಲತೊಡೆಯನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಪಟ್ಟಾಭಿಷೇಕಕ್ಕಾಗಿ ಸಮರ್ಪಿತವಾದ ಆ ಟಗರನ್ನೆಲ್ಲ, ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಕಾಳಿಜದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು, ಅವುಗಳ ಮೇಲಿರುವ ಕೊಬ್ಬನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಬಳಿಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಲ್ಪಟ್ಟ ಆ ಟಗರಿನ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನೂ ವಪೆಯನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಳ್ಳಬೇಕು. ಏಕೆಂದರೆ ಅದು ಪ್ರತಿಷ್ಠೆಯ ಟಗರು. ಅಧ್ಯಾಯವನ್ನು ನೋಡಿ |
“ಮಾತ್ರವಲ್ಲದೆ ನೀನು, ನಿನ್ನ ಪುತ್ರರು ಮತ್ತು ನಿನ್ನ ಹೆಣ್ಣುಮಕ್ಕಳು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನು ಮತ್ತು ಅರ್ಪಿಸಲ್ಪಟ್ಟ ತೊಡೆಯನ್ನು ತಿನ್ನಬೇಕು. ನೀವು ಅವುಗಳನ್ನು ಪವಿತ್ರಸ್ಥಳದಲ್ಲಿ ತಿನ್ನಬೇಕಾಗಿಲ್ಲ. ಆದರೆ ನೀವು ಅವುಗಳನ್ನು ಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಯಾಕೆಂದರೆ ಅವುಗಳು ಸಮಾಧಾನಯಜ್ಞಗಳಿಂದ ಬಂದವುಗಳಾಗಿವೆ. ಇಸ್ರೇಲರು ಆ ಕಾಣಿಕೆಗಳನ್ನು ದೇವರಿಗಾಗಿ ಕೊಡುತ್ತಾರೆ. ಜನರು ಆ ಪಶುಗಳಲ್ಲಿ ಕೆಲವು ಭಾಗಗಳನ್ನು ತಿನ್ನುತ್ತಾರೆ. ಆದರೆ ಎದೆಯ ಭಾಗವು ನಿಮ್ಮ ಪಾಲಾಗಿರುತ್ತದೆ.
ತರುವಾಯ ಯಜ್ಞವೇದಿಕೆಯಿಂದ ಸ್ವಲ್ಪ ರಕ್ತವನ್ನು ತೆಗೆದುಕೊ. ಅದನ್ನು ವಿಶೇಷವಾದ ಅಭೀಷೇಕತೈಲದಲ್ಲಿ ಬೆರಸಿ ಆರೋನನ ಮೇಲೆಯೂ ಅವನ ಬಟ್ಟೆಗಳ ಮೇಲೆಯೂ ಚಿಮಿಕಿಸು. ಅವನ ಪುತ್ರರ ಮತ್ತು ಅವರ ಬಟ್ಟೆಗಳ ಮೇಲೆಯೂ ಚಿಮಿಕಿಸು. ಆಗ ಅವರು ಪರಿಶುದ್ಧಗೊಳ್ಳುವರು, ಅವರ ಬಟ್ಟೆಗಳೂ ಪರಿಶುದ್ಧಗೊಳ್ಳುವವು. ಆರೋನನು ಮತ್ತು ಅವನ ಪುತ್ರರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆ ಮಾಡುತ್ತಾರೆಂದು ಇದು ತೋರಿಸುವುದು.