Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:23 - ಪರಿಶುದ್ದ ಬೈಬಲ್‌

23 ಬಳಿಕ ನೀನು ಮಾಡಿದ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನು ತೆಗೆದುಕೊ. ಇದು ಯೆಹೋವನ ಮುಂದೆ ಇಟ್ಟ ಬುಟ್ಟಿಯಾಗಿದೆ. ಒಂದು ತುಂಡು ರೊಟ್ಟಿ, ಎಣ್ಣೆಯಿಂದ ಮಾಡಿದ ಒಂದು ಹೋಳಿಗೆ, ತೆಳುವಾದ ಒಂದು ಕಡುಬು ಇವುಗಳನ್ನು ಬುಟ್ಟಿಯಿಂದ ತೆಗೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಮತ್ತು ಒಂದು ಕಡುಬನ್ನು ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಬಲತೊಡೆಯನ್ನು ಮತ್ತು ಸರ್ವೇಶ್ವರನಾದ ನನಗೆದುರಾಗಿ ಪುಟ್ಟಿಯಲ್ಲಿ ಇಟ್ಟಿರುವ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಬಲದೊಡೆಯನ್ನೂ ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನೂ ಎಣ್ಣೆ ವಿುಶ್ರವಾದ ಒಂದು ಹೋಳಿಗೆಯನ್ನೂ ಒಂದು ಕಡುಬನ್ನೂ ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿಯನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:23
4 ತಿಳಿವುಗಳ ಹೋಲಿಕೆ  

ಪ್ರತಿದಿನ ಯೆಹೋವನ ಸನ್ನಿಧಿಯಲ್ಲಿ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯು ಇಡಲ್ಪಡುತ್ತಿತ್ತು. ಮೋಶೆಯು ರೊಟ್ಟಿಯಲ್ಲಿ ಒಂದು ತುಂಡನ್ನೂ ಎಣ್ಣೆ ಬೆರಸಿದ ರೊಟ್ಟಿಯಲ್ಲಿ ಒಂದು ತುಂಡನ್ನೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡನು. ಮೋಶೆಯು ಆ ರೊಟ್ಟಿಯ ತುಂಡುಗಳನ್ನು ಕೊಬ್ಬಿನ ಮತ್ತು ಟಗರಿನ ಬಲ ತೊಡೆಯ ಮೇಲೆ ಇಟ್ಟನು.


“ಬಳಿಕ ಟಗರಿನ ಕೊಬ್ಬನ್ನೂ ತೆಗೆದುಕೊ. (ಇದು ಆರೋನನನ್ನು ಮಹಾಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು.) ಬಾಲದ ಸುತ್ತಲಿರುವ ಕೊಬ್ಬನ್ನು, ದೇಹದ ಒಳಗಿನ ಅಂಗಗಳನ್ನು ಮುಚ್ಚಿಕೊಂಡಿರುವ ಕೊಬ್ಬನ್ನು, ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಮತ್ತು ಬಲತೊಡೆಯನ್ನು ತೆಗೆದುಕೊ.


ಇವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಯೆಹೋವನ ಮುಂದೆ ಇವುಗಳನ್ನು ತಮ್ಮ ಕೈಯಲ್ಲಿ ಹಿಡಿದುಕೊಂಡು ನಿವಾಳಿಸಬೇಕೆಂದು ಅವರಿಗೆ ಹೇಳು. ಇದು ಯೆಹೋವನಿಗೆ ವಿಶೇಷವಾದ ನೈವೇದ್ಯಾರ್ಪಣೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು