Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:25 - ಪರಿಶುದ್ದ ಬೈಬಲ್‌

25 ಬಳಿಕ ಈ ವಸ್ತುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಯಿಂದ ತೆಗೆದುಕೊಂಡು ಟಗರಿನ ಜೊತೆ ಯಜ್ಞವೇದಿಕೆಯ ಮೇಲಿಡು. ಈ ಸರ್ವಾಂಗಹೋಮವು ಯೆಹೋವನಿಗೆ ಸುಗಂಧಹೋಮವಾಗಿದ್ದು ಆತನನ್ನು ಮೆಚ್ಚಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಯೆಹೋವನಿಗಾಗಿ ಸುಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಬಲಿಪೀಠದ ಮೇಲೆ ದಹನಬಲಿಯ ಸಂಗಡ ಸರ್ವೇಶ್ವರನಾದ ನನಗೆ ಆಹುತಿ ಕೊಡು. ಇದು ನನಗೆ ಪ್ರಿಯವಾದ ಸುಗಂಧ ಆಹಾರ ದಹನಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸರ್ವಾಂಗಹೋಮದ್ರವ್ಯದ ಸಂಗಡ ಯೆಹೋವನಿಗೆ ಆಹುತಿಕೊಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನೀನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರ ಮುಂದೆ ಸುವಾಸನೆಗೋಸ್ಕರ ದಹಿಸಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:25
25 ತಿಳಿವುಗಳ ಹೋಲಿಕೆ  

ಬಳಿಕ ಮೋಶೆಯು ಆರೋನನ ಮತ್ತು ಅವನ ಪುತ್ರರ ಕೈಗಳಲ್ಲಿರುವ ಈ ವಸ್ತುಗಳನ್ನು ತೆಗೆದುಕೊಂಡನು. ಮೋಶೆ ಅವುಗಳನ್ನು ವೇದಿಕೆಯಲ್ಲಿ ಸರ್ವಾಂಗಹೋಮದ ಮೇಲಿಟ್ಟು ಅವುಗಳನ್ನು ಹೋಮಮಾಡಿದನು. ಅದು ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸುವ ಸಮರ್ಪಣೆಯಾಗಿತ್ತು. ಹೋಮವಾಗಿ ಅರ್ಪಿಸಲ್ಪಟ್ಟ ಈ ಯಜ್ಞವು ಯೆಹೋವನಿಗೆ ಸುಗಂಧಕರವಾಗಿದೆ.


ನೀನು ಸಾಯಂಕಾಲದಲ್ಲಿ ಮತ್ತೊಂದು ಕುರಿಮರಿಯನ್ನು ವಧಿಸುವಾಗಲೂ ಮೂರು ಸೇರು ಶ್ರೇಷ್ಠ ಗೋಧಿಯನ್ನೂ ಅರ್ಧ ಸೇರು ದ್ರಾಕ್ಷಾರಸವನ್ನೂ ಸಮರ್ಪಿಸು. ಇದು ಯೆಹೋವನಿಗೆ ಸುಗಂಧಹೋಮವಾಗಿರುವುದು.


ಮೋಶೆಯೂ ಆರೋನನೂ ದೇವರ ಯಾಜಕರುಗಳಾಗಿದ್ದರು. ಸಮುವೇಲನೂ ಆತನ ಹೆಸರಿನಲ್ಲಿ ಪ್ರಾರ್ಥಿಸಿದನು. ಆತನು ಅವರೆಲ್ಲರ ಪ್ರಾರ್ಥನೆಗಳಿಗೆ ಉತ್ತರಿಸಿದನು.


ಇಸ್ರೇಲಿನ ಎಲ್ಲಾ ಕುಲಗಳಲ್ಲಿ ನಿನ್ನ ಕುಟುಂಬದವರನ್ನು ನನ್ನ ಯಾಜಕರನ್ನಾಗಿ ಆರಿಸಿಕೊಂಡೆನು. ಏಫೋದನ್ನು ಧರಿಸಿಕೊಳ್ಳುವುದಕ್ಕೂ ಯಜ್ಞವನ್ನು ಅರ್ಪಿಸುವುದಕ್ಕೂ ಧೂಪಹಾಕುವುದಕ್ಕೂ ನಾನು ಅವರನ್ನು ಆರಿಸಿಕೊಂಡೆನು. ಇಸ್ರೇಲರು ನನಗೆ ಅರ್ಪಿಸುವ ಯಜ್ಞಗಳಲ್ಲಿ ಮಾಂಸವನ್ನು ಪಡೆಯುವ ಅವಕಾಶವನ್ನೂ ನಾನು ನಿಮ್ಮ ಕುಲದವರಿಗೆ ನೀಡಿದೆನು.


ಅದನ್ನು ಪವಿತ್ರವಾದ ಸ್ಥಳದಲ್ಲಿ ಮಾತ್ರ ತಿನ್ನಬೇಕು. ಅದು ಯೆಹೋವನಿಗಾಗಿ ಅಗ್ನಿಯಲ್ಲಿ ಹೋಮವಾದ ಸಮರ್ಪಣೆಗಳಲ್ಲಿ ಒಂದು ಭಾಗವಾಗಿದೆ. ಯೆಹೋವನಿಗಾಗಿ ಬೆಂಕಿಯ ಮೂಲಕ ಸಮರ್ಪಿಸಿದವುಗಳಲ್ಲಿ ನಿನಗೂ ನಿನ್ನ ಗಂಡುಮಕ್ಕಳಿಗೂ ಇದು ಸೇರತಕ್ಕ ಪಾಲಾಗಿದೆ. ನಿಮಗೆ ಈ ಕಟ್ಟಳೆಯನ್ನು ಕೊಡಲು ನನಗೆ ಆಜ್ಞಾಪಿಸಲಾಗಿದೆ.


ಯಾವನಾದರೂ ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯಾದ ಪಶುವಿನ ಕೊಬ್ಬನ್ನು ತಿಂದರೆ, ಅವನನ್ನು ಅವನ ಜನರಿಂದ ತೆಗೆದುಹಾಕಬೇಕು.


ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮ ಮಾಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿತವಾದ ಹೋಮವಾಗಿರುವುದು. ಅದು ದೋಷಪರಿಹಾರಕ ಯಜ್ಞವಾಗಿದೆ.


ಬಳಿಕ ಯಾಜಕನು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಇದು ಆಹಾರದ ರೂಪದಲ್ಲಿ ಯೆಹೋವನಿಗೆ ಅರ್ಪಿಸಿದ ಸುವಾಸನೆಯನ್ನು ಉಂಟುಮಾಡುವ ಸಮಾಧಾನಯಜ್ಞವಾಗಿರುತ್ತದೆ. ಆದರೆ ಅದರ ಕೊಬ್ಬು ಯೆಹೋವನಿಗೆ ಸೇರಿದೆ.


ಅವನು ಸಮಾಧಾನಯಜ್ಞದ ಪಶುವಿನ ವಪೆಯನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಪಿತ್ತಾಶಯದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನೂ ಯೆಹೋವನಿಗೋಸ್ಕರ ಸಮರ್ಪಿಸಬೇಕು.


ಅದು ಯೆಹೋವನಿಗೆ ಬೆಂಕಿಯ ಮೂಲಕ ಅರ್ಪಿಸಿದ ಆಹಾರವಾಗುವುದು.


ಅವನು ಸಮಾಧಾನಯಜ್ಞ ಪಶುವಿನ ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನು ಕರುಳುಗಳ ಮೇಲಿರುವ ಮತ್ತು ಅವುಗಳ ಸುತ್ತಲಿರುವ ಕೊಬ್ಬನ್ನೆಲ್ಲಾ ಹೋಮಮಾಡಬೇಕು.


ಬಳಿಕ ಆರೋನನ ಪುತ್ರರು ಕೊಬ್ಬನ್ನು ವೇದಿಕೆಗೆ ತಂದು ಅದನ್ನು ಬೆಂಕಿಯಲ್ಲಿ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮದ ಮೇಲಿಡಬೇಕು. ಅದು ಅಗ್ನಿಯ ಮೂಲಕ ಅರ್ಪಿಸುವ ಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಆ ಯಜ್ಞಪಶುವಿನ ವಪೆಯನ್ನೂ ಕರುಳುಗಳ ಮೇಲಿನ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ತೆಗೆದು ಪಿತ್ತಕೋಶದ ಹತ್ತಿರ ಮೂತ್ರಪಿಂಡಗಳವರೆಗೆ ಇರುವ ಕೊಬ್ಬನ್ನೂ ತೆಗೆದು ಯೆಹೋವನಿಗೆ ಹೋಮಮಾಡಬೇಕು.


ಯಾಜಕನು ಜಜ್ಜಿದ ಧಾನ್ಯದಲ್ಲಿ ಒಂದು ಭಾಗವನ್ನೂ ಎಣ್ಣೆಯನ್ನೂ ಎಲ್ಲಾ ಧೂಪವನ್ನೂ ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಹೋಮಮಾಡಬೇಕು. ಇದು ಅಗ್ನಿಯ ಮೂಲಕ ಯೆಹೋವನಿಗೆ ಅರ್ಪಿಸಿದ ಸಮರ್ಪಣೆಯಾಗಿದೆ.


ಬಳಿಕ ಯಾಜಕನು ಧಾನ್ಯನೈವೇದ್ಯದ ಸ್ವಲ್ಪ ಭಾಗವನ್ನು ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಹೋಮಮಾಡುವನು. ಅದು ಅಗ್ನಿಯ ಮೂಲಕ ಮಾಡಿದ ಸಮರ್ಪಣೆಯಾಗಿದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಬಳಿಕ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಯಾಜಕನು ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ ಧೂಪವೆಲ್ಲವನ್ನೂ ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಅದನ್ನು ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಮಾಡಿದ ಸಮರ್ಪಣೆಯಾಗಿದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಯಾಜಕನು ಪಶುವಿನ ಕಾಲುಗಳನ್ನೂ ಒಳಗಿನ ಭಾಗಗಳನ್ನೂ ನೀರಿನಿಂದ ತೊಳೆಯಬೇಕು. ಬಳಿಕ ಯಾಜಕನು ಪಶುವಿನ ಈ ಎಲ್ಲಾ ಭಾಗಗಳನ್ನೂ ವೇದಿಕೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಸಮರ್ಪಿಸಲ್ಪಟ್ಟ ಸರ್ವಾಂಗಹೋಮವಾಗಿರುತ್ತದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಯಾಜಕನು ಪಶುವಿನ ಕಾಲುಗಳನ್ನು ಮತ್ತು ಒಳಗಿನ ಭಾಗಗಳನ್ನು ನೀರಿನಿಂದ ತೊಳೆದು ಈ ಎಲ್ಲಾ ಭಾಗಗಳನ್ನು ವೇದಿಕೆಯ ಮೇಲೆ ಹೋಮಮಾಡಬೇಕು. ಈ ಸರ್ವಾಂಗಹೋಮದ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ.


ಪ್ರೀತಿಯಿಂದ ಬಾಳಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿದಂತೆ ನೀವೂ ಇತರರನ್ನು ಪ್ರೀತಿಸಿರಿ. ಕ್ರಿಸ್ತನು ನಮಗೋಸ್ಕರವಾಗಿ ತನ್ನನ್ನೇ ಪರಿಮಳದ ಕಾಣಿಕೆಯಾಗಿಯೂ ಯಜ್ಞವಾಗಿಯೂ ದೇವರಿಗೆ ಸಮರ್ಪಿಸಿಕೊಂಡನು.


ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.


ತರುವಾಯ ಯಜ್ಞವೇದಿಕೆಯ ಮೇಲೆ ಇಡೀ ಟಗರನ್ನು ಹೋಮಮಾಡು. ಇದು ವಿಶೇಷವಾದ ಸರ್ವಾಂಗಹೋಮವಾಗಿದೆ. ಇದು ಯೆಹೋವನಿಗೆ ಪರಿಮಳ ವಾಸನೆಯಾಗಿದ್ದು ಆತನಿಗೆ ಮೆಚ್ಚಿಕೆಕರವಾಗಿದೆ.


ಇವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಯೆಹೋವನ ಮುಂದೆ ಇವುಗಳನ್ನು ತಮ್ಮ ಕೈಯಲ್ಲಿ ಹಿಡಿದುಕೊಂಡು ನಿವಾಳಿಸಬೇಕೆಂದು ಅವರಿಗೆ ಹೇಳು. ಇದು ಯೆಹೋವನಿಗೆ ವಿಶೇಷವಾದ ನೈವೇದ್ಯಾರ್ಪಣೆಯಾಗಿದೆ.


“ನೀವು ಹುಳಿಹಿಟ್ಟಿನಿಂದ ಮಾಡಿದ ಯಾವದನ್ನೂ ಯೆಹೋವನಿಗೆ ಧಾನ್ಯಸಮರ್ಪಣೆಯಾಗಿ ಕೊಡಬಾರದು. ನೀವು ಹುಳಿಯನ್ನಾಗಲಿ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಅಗ್ನಿಯ ಮೂಲಕ ಹೋಮಮಾಡಬಾರದು.


ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು