ವಿಮೋಚನಕಾಂಡ 29:28 - ಪರಿಶುದ್ದ ಬೈಬಲ್28 ಇಸ್ರೇಲರು ಆರೋನನಿಗೂ ಅವನ ಪುತ್ರರಿಗೂ ಈ ಭಾಗಗಳನ್ನು ಯಾವಾಗಲೂ ಕೊಡುವರು. ಇಸ್ರೇಲರು ಯೆಹೋವನಿಗೆ ಅರ್ಪಿಸುವ ಕಾಣಿಕೆಗಳಲ್ಲಿ ಈ ಭಾಗಗಳು ಯಾವಾಗಲೂ ಯಾಜಕರಿಗೆ ಸೇರಿದ್ದಾಗಿವೆ. ಅವರು ಯಾಜಕರಿಗೆ ಕೊಡುವ ಈ ಭಾಗಗಳು ಯೆಹೋವನಿಗೆ ಸಮರ್ಪಿಸಲ್ಪಟ್ಟಂತಿರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಶಾಶ್ವತ ನಿಯಮವಾಗಿ ಇಸ್ರಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು, ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟವು. ಇಸ್ರಯೇಲರು ಸಮಾಧಾನದ ಬಲಿದಾನಕ್ಕಾಗಿ ಪ್ರಾಣಿಗಳನ್ನು ವಧಿಸಿ ಸರ್ವೇಶ್ವರನಾದ ನನಗೆ ಕಾಣಿಕೆಯನ್ನು ಅರ್ಪಿಸುವಾಗಲೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಶಾಶ್ವತ ನಿಯಮವಾಗಿ ಇಸ್ರಾಯೇಲ್ಯರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು; ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲ್ಯರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅದು ಆರೋನನಿಗೂ ಅವನ ಪುತ್ರರಿಗೂ ಇಸ್ರಾಯೇಲರ ಕಡೆಯಿಂದ ನಿತ್ಯವಾಗಿ ಕೊಡುವ ಭಾಗವಾಗಿರಬೇಕು. ಏಕೆಂದರೆ ಅದು ನೈವೇದ್ಯವಾಗಿದೆ. ಇಸ್ರಾಯೇಲರ ಸಮಾಧಾನದ ಬಲಿಗಳ ಅರ್ಪಣೆಗಳಿಂದ ಅವರು ಯೆಹೋವ ದೇವರಿಗೆ ನೈವೇದ್ಯ ಮಾಡುವಂಥದ್ದು ಆಗಿರಬೇಕು. ಅಧ್ಯಾಯವನ್ನು ನೋಡಿ |