ವಿಮೋಚನಕಾಂಡ 29:29 - ಪರಿಶುದ್ದ ಬೈಬಲ್29 “ಆರೋನನಿಗೋಸ್ಕರ ಮಾಡಿಸಿದ ವಿಶೇಷವಾದ ವಸ್ತ್ರಗಳನ್ನು ಅವನ ತರುವಾಯ ಅವನ ವಂಶಸ್ಥರೂ ಯಾಜಕ ಉದ್ಯೋಗಕ್ಕೆ ಆರಿಸಲ್ಪಟ್ಟಾಗ, ಅವುಗಳನ್ನು ಧರಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆರೋನನ ಪವಿತ್ರವಾದ ಯಾಜಕದೀಕ್ಷಾವಸ್ತ್ರಗಳು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರು ಅದರಲ್ಲಿಯೇ ನನಗಾಗಿ ಅಭಿಷೇಕಿಸಿ ಪ್ರತಿಷ್ಠಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 “ಆರೋನನ ಯಾಜಕ ದೀಕ್ಷಾವಸ್ತ್ರಗಳನ್ನು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗುವಂತೆ ಇಡಬೇಕು. ಅವರೂ ಯಾಜಕಾಭಿಷಿಕ್ತರಾಗಿ ಮಹಾಯಾಜಕ ಸೇವೆಯನ್ನು ಕೈಗೊಂಡಾಗ ಅವುಗಳನ್ನು ಧರಿಸಿಕೊಳ್ಳಬೇಕು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆರೋನನ ಯಾಜಕದೀಕ್ಷಾವಸ್ತ್ರಗಳೇ ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರೂ ಪಟ್ಟಾಭಿಷಿಕ್ತರಾಗಿ ಮಹಾಯಾಜಕೋದ್ಯೋಗಕ್ಕೆ ಬಂದಾಗ ಅವುಗಳನ್ನು ಧರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 “ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಪುತ್ರರಿಗೆ ಆಗಬೇಕು. ಅವರು ಅಭಿಷಿಕ್ತರಾಗಿ ಅವುಗಳನ್ನು ಧರಿಸಿಕೊಂಡು, ಪ್ರತಿಷ್ಠಿತರಾಗಬೇಕು. ಅಧ್ಯಾಯವನ್ನು ನೋಡಿ |