Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:31 - ಪರಿಶುದ್ದ ಬೈಬಲ್‌

31 “ಆರೋನನನ್ನು ಮಹಾಯಾಜಕನನ್ನಾಗಿ ಮಾಡಲು ಉಪಯೋಗಿಸಿದ ಟಗರಿನ ಮಾಂಸವನ್ನು ದೇವದರ್ಶನಗುಡಾರದ ಪ್ರಾಕಾರದಲ್ಲಿ ಬೇಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆರೋನನು ಪ್ರತಿಷ್ಠೆಗಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಅಂಗಳದಲ್ಲಿ ಬೇಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆರೋನನ ಯಾಜಕಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಪ್ರಾಕಾರದಲ್ಲಿ ಬೇಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆರೋನನ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಪ್ರಾಕಾರದಲ್ಲಿ ಬೇಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:31
8 ತಿಳಿವುಗಳ ಹೋಲಿಕೆ  

ತರುವಾಯ ಮೋಶೆಯು ಆರೋನನಿಗೂ ಅವನ ಪುತ್ರರಿಗೂ ಹೀಗೆ ಹೇಳಿದನು: “ನೀವು ಮಾಂಸವನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಬೇಯಿಸಿ ತಿನ್ನಬೇಕು. ಪ್ರತಿಷ್ಠೆಕಾಣಿಕೆಯ ಬುಟ್ಟಿಯಲ್ಲಿರುವ ರೊಟ್ಟಿಯೊಡನೆ ಅದನ್ನು ಅಲ್ಲಿ ತಿನ್ನಿರಿ. ಮಾಂಸವನ್ನೂ ರೊಟ್ಟಿಯನ್ನೂ ಆ ಸ್ಥಳದಲ್ಲಿ ತಿನ್ನಿರಿ. ನಾನು ಹೇಳುವ ಹಾಗೆ ಇದನ್ನು ಮಾಡಿರಿ.


ಆದರೆ ಏಲಿಯ ಮಕ್ಕಳು ಈ ರೀತಿ ಮಾಡುತ್ತಿರಲಿಲ್ಲ. ಯಜ್ಞವೇದಿಕೆಯ ಮೇಲೆ ಕೊಬ್ಬನ್ನು ಹೋಮ ಮಾಡುವುದಕ್ಕಿಂತ ಮೊದಲೇ ಅವರ ಸೇವಕರು ಯಜ್ಞಗಳನ್ನು ಅರ್ಪಿಸುವ ಜನರ ಬಳಿಗೆ ಹೋಗುತ್ತಿದ್ದರು. ಯಾಜಕನ ಸೇವಕನು, “ಯಾಜಕನಿಗೆ ಕರಿದು ಕೊಡಲು ಸ್ವಲ್ಪ ಮಾಂಸವನ್ನು ಕೊಡಿ. ಬೇಯಿಸಿದ ಮಾಂಸವನ್ನು ಯಾಜಕನು ನಿಮ್ಮಿಂದ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಹೇಳುತ್ತಿದ್ದನು.


ಯಾಜಕರು ಜನರೊಡನೆ ಯಾವ ರೀತಿ ವರ್ತಿಸಬೇಕು ಎಂಬುದನ್ನು ಅವರು ಲಕ್ಷಿಸುತ್ತಿರಲಿಲ್ಲ. ಯಾಜಕರು ಜನರಿಗಾಗಿ ಮಾಡಬೇಕಾದ ಕಾರ್ಯವೆಂದರೆ: ಒಬ್ಬ ವ್ಯಕ್ತಿಯು ಪ್ರತಿಸಲ ಯಜ್ಞವನ್ನರ್ಪಿಸಲು ಬಂದಾಗ ಯಾಜಕರು ಯಜ್ಞಮಾಂಸವನ್ನು ಒಂದು ಮಡಕೆಯಲ್ಲಿ ಬೇಯಿಸಬೇಕು. ಯಾಜಕರ ಸೇವಕನು ಕೈಯಲ್ಲಿ ತ್ರಿಶೂಲವನ್ನು ಹಿಡಿದುಕೊಂಡು ಬರಬೇಕು.


ಆರೋನನ ತರುವಾಯ ಅವನ ಮಗನು ಮಹಾಯಾಜಕನಾಗುವನು. ಅವನು ಪವಿತ್ರಸ್ಥಳದಲ್ಲಿ ಸೇವೆಮಾಡಲು ದೇವದರ್ಶನಗುಡಾರಕ್ಕೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರುವನು.


ಬಳಿಕ ಆರೋನನು ಮತ್ತು ಅವನ ಪುತ್ರರು ದೇವದರ್ಶನಗುಡಾರದ ಮುಂಭಾಗದಲ್ಲಿ ಆ ಮಾಂಸವನ್ನೂ ಬುಟ್ಟಿಯಲ್ಲಿರುವ ರೊಟ್ಟಿಯನ್ನೂ ತಿನ್ನಬೇಕು.


ಬಳಿಕ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸುವುದಕ್ಕೆ ವಧಿಸಬೇಕಾದ ಎರಡನೆಯ ಟಗರನ್ನು ತಂದನು. ಆರೋನನೂ ಅವನ ಪುತ್ರರೂ ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು.


ಅವನು ನನಗೆ ಹೀಗೆ ಹೇಳಿದನು, “ನಿಯಮಿತ ಇಕ್ಕಟ್ಟಾದ ಸ್ಥಳದ ಬಳಿಯಲ್ಲಿ ಇರುವ ಉತ್ತರದ ಮತ್ತು ದಕ್ಷಿಣದ ಕೋಣೆಗಳು ಪವಿತ್ರವಾದವುಗಳು. ಅವು ಯೆಹೋವನಿಗೆ ಯಜ್ಞ ಸಮರ್ಪಿಸುವ ಯಾಜಕರಿಗಾಗಿ ಇವೆ. ಅಲ್ಲಿ ಯಾಜಕರು ಅತಿ ಪವಿತ್ರ ಕಾಣಿಕೆಪದಾರ್ಥಗಳನ್ನು ತಿನ್ನುವರು. ಮತ್ತು ಅಲ್ಲಿ ಅತಿ ಪವಿತ್ರ ಕಾಣಿಕೆಗಳನ್ನಿಡುವರು. ಯಾಕೆಂದರೆ ಆ ಸ್ಥಳವು ಪವಿತ್ರವಾದದ್ದು. ಅತಿ ಪವಿತ್ರ ಕಾಣಿಕೆ ಯಾವುವೆಂದರೆ, ಧಾನ್ಯಸಮರ್ಪಣೆ, ಪಾಪಪರಿಹಾರಕಯಜ್ಞ, ದೋಷಪರಿಹಾರಕಯಜ್ಞ, ಸಮಾಧಾನಯಜ್ಞದ ಕಾಣಿಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು