Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:32 - ಪರಿಶುದ್ದ ಬೈಬಲ್‌

32 ಬಳಿಕ ಆರೋನನು ಮತ್ತು ಅವನ ಪುತ್ರರು ದೇವದರ್ಶನಗುಡಾರದ ಮುಂಭಾಗದಲ್ಲಿ ಆ ಮಾಂಸವನ್ನೂ ಬುಟ್ಟಿಯಲ್ಲಿರುವ ರೊಟ್ಟಿಯನ್ನೂ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆರೋನನೂ ಅವನ ಮಕ್ಕಳೂ ಆ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನ ಗುಡಾರದ ಬಾಗಿಲೊಳಗೆ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆರೋನನು ಮತ್ತು ಅವನ ಮಕ್ಕಳು ಆ ಟಗರಿನ ಮಾಂಸವನ್ನು ಹಾಗು ಪುಟ್ಟಿಯಲ್ಲಿರುವ ರೊಟ್ಟಿಯನ್ನು ದೇವದರ್ಶನದ ಗುಡಾರದ ಬಾಗಿಲೊಳಗೆ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆರೋನನೂ ಅವನ ಮಕ್ಕಳೂ ಆ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನದ ಗುಡಾರದ ಬಾಗಲೊಳಗೆ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆರೋನನೂ ಅವನ ಪುತ್ರರೂ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:32
8 ತಿಳಿವುಗಳ ಹೋಲಿಕೆ  

ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.


ಬಳಿಕ ನೀನು ಮಾಡಿದ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನು ತೆಗೆದುಕೊ. ಇದು ಯೆಹೋವನ ಮುಂದೆ ಇಟ್ಟ ಬುಟ್ಟಿಯಾಗಿದೆ. ಒಂದು ತುಂಡು ರೊಟ್ಟಿ, ಎಣ್ಣೆಯಿಂದ ಮಾಡಿದ ಒಂದು ಹೋಳಿಗೆ, ತೆಳುವಾದ ಒಂದು ಕಡುಬು ಇವುಗಳನ್ನು ಬುಟ್ಟಿಯಿಂದ ತೆಗೆದುಕೊ.


“ಆರೋನನನ್ನು ಮಹಾಯಾಜಕನನ್ನಾಗಿ ಮಾಡಲು ಉಪಯೋಗಿಸಿದ ಟಗರಿನ ಮಾಂಸವನ್ನು ದೇವದರ್ಶನಗುಡಾರದ ಪ್ರಾಕಾರದಲ್ಲಿ ಬೇಯಿಸು.


ಅವರು ಯಾಜಕರಾಗಿ ಮಾಡಲ್ಪಟ್ಟಾಗ ಅವರ ಪಾಪನಿವಾರಣೆಗಾಗಿ ಇವುಗಳನ್ನು ಸಮರ್ಪಿಸಲಾಗಿತ್ತು. ಆದ್ದರಿಂದ ಆ ಸಮರ್ಪಣೆಗಳನ್ನು ಅವರು ಮಾತ್ರ ತಿನ್ನಬೇಕೇ ಹೊರತು ಬೇರೆಯವರು ತಿನ್ನಬಾರದು; ಯಾಕೆಂದರೆ ಅವು ಪರಿಶುದ್ಧವಾಗಿವೆ ಮತ್ತು ಪ್ರತ್ಯೇಕಿಸಲ್ಪಟ್ಟವುಗಳಾಗಿವೆ.


ತರುವಾಯ ಮೋಶೆಯು ಆರೋನನಿಗೂ ಅವನ ಪುತ್ರರಿಗೂ ಹೀಗೆ ಹೇಳಿದನು: “ನೀವು ಮಾಂಸವನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಬೇಯಿಸಿ ತಿನ್ನಬೇಕು. ಪ್ರತಿಷ್ಠೆಕಾಣಿಕೆಯ ಬುಟ್ಟಿಯಲ್ಲಿರುವ ರೊಟ್ಟಿಯೊಡನೆ ಅದನ್ನು ಅಲ್ಲಿ ತಿನ್ನಿರಿ. ಮಾಂಸವನ್ನೂ ರೊಟ್ಟಿಯನ್ನೂ ಆ ಸ್ಥಳದಲ್ಲಿ ತಿನ್ನಿರಿ. ನಾನು ಹೇಳುವ ಹಾಗೆ ಇದನ್ನು ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು