ವಿಮೋಚನಕಾಂಡ 29:33 - ಪರಿಶುದ್ದ ಬೈಬಲ್33 ಅವರು ಯಾಜಕರಾಗಿ ಮಾಡಲ್ಪಟ್ಟಾಗ ಅವರ ಪಾಪನಿವಾರಣೆಗಾಗಿ ಇವುಗಳನ್ನು ಸಮರ್ಪಿಸಲಾಗಿತ್ತು. ಆದ್ದರಿಂದ ಆ ಸಮರ್ಪಣೆಗಳನ್ನು ಅವರು ಮಾತ್ರ ತಿನ್ನಬೇಕೇ ಹೊರತು ಬೇರೆಯವರು ತಿನ್ನಬಾರದು; ಯಾಕೆಂದರೆ ಅವು ಪರಿಶುದ್ಧವಾಗಿವೆ ಮತ್ತು ಪ್ರತ್ಯೇಕಿಸಲ್ಪಟ್ಟವುಗಳಾಗಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವರನ್ನು ಯಾಜಕ ಪದವಿಗೆ ಸೇರಿಸುವುದಕ್ಕೂ ದೇವರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳನ್ನು ಪಾಪಪರಿಹಾರಕ್ಕಾಗಿ ಸಮರ್ಪಿಸಲಾದುವೋ ಅವುಗಳನ್ನು ಅವರೇ ಭೋಜನ ಮಾಡಬೇಕು. ಇತರರು ಅವುಗಳನ್ನು ತಿನ್ನಕೂಡದು. ಏಕೆಂದರೆ ಅವು ಮೀಸಲಾದುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವರನ್ನು ಯಾಜಕೋದ್ಯೋಗಕ್ಕೆ ಸೇರಿಸುವದಕ್ಕೂ ದೇವರ ಸೇವೆಗೆ ಪ್ರತಿಷ್ಠಿಸುವದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರೇ ಭೋಜನಮಾಡಬೇಕೇ ಹೊರತು ಇತರರು ತಿನ್ನಕೂಡದು; ಅವು ಮೀಸಲು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರನ್ನು ಪ್ರತಿಷ್ಠೆ ಮಾಡುವುದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವುದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿದವುಗಳನ್ನು ಅವರೇ ಊಟಮಾಡಬೇಕು. ಇತರರು ಅದನ್ನು ಉಣ್ಣಬಾರದು. ಏಕೆಂದರೆ ಅವು ಪರಿಶುದ್ಧವಾದವುಗಳು. ಅಧ್ಯಾಯವನ್ನು ನೋಡಿ |
ಆದರೆ ಆರೋನನೇ, ನೀನೂ ನಿನ್ನ ಪುತ್ರರೂ ನಿಮ್ಮ ಯಾಜಕತ್ವವನ್ನು ಕಾಪಾಡಿಕೊಳ್ಳಬೇಕು. ಅಯೋಗ್ಯನಾದ ಯಾವನೂ ಯಜ್ಞವೇದಿಕೆಯ ಬಳಿ ಕೆಲಸ ಮಾಡುವುದಕ್ಕಾಗಲೀ ತೆರೆಯ ಆಚೆಯಿರುವ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವುದಕ್ಕಾಗಲೀ ನೀವು ಬಿಡಕೂಡದು. ನಾನು ನಿಮಗೆ ಅಮೂಲ್ಯವಾದ ಯಾಜಕತ್ವವನ್ನು ಕೊಟ್ಟಿದ್ದೇನೆ. ಆದರೆ ಅಯೋಗ್ಯನಾದ ಯಾವನಾದರೂ ಯಾಜಕತ್ವದ ಈ ಕರ್ತವ್ಯಗಳನ್ನು ಮಾಡಲು ಪ್ರಯತ್ನಿಸಿದರೆ ಅವನು ಕೊಲ್ಲಲ್ಪಡುವನು.”
ಆರೋನನಿಗೆ ಇನ್ನೂ ಜೀವಂತವಾಗಿದ್ದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಇಬ್ಬರು ಪುತ್ರರು ಇದ್ದರು. ಮೋಶೆಯು ಆರೋನನಿಗೆ ಮತ್ತು ಅವನ ಇಬ್ಬರು ಗಂಡುಮಕ್ಕಳಿಗೆ, “ಯಜ್ಞವೇದಿಕೆಯ ಮೇಲೆ ಅರ್ಪಿಸಿದ ಯಜ್ಞಗಳಲ್ಲಿಯೂ ಧಾನ್ಯನೈವೇದ್ಯದಲ್ಲಿಯೂ ಉಳಿದ ಭಾಗವನ್ನು ತೆಗೆದುಕೊಂಡು ನೀವು ತಿನ್ನಬೇಕು. ಆದರೆ ನೀವು ಅದಕ್ಕೆ ಹುಳಿಯನ್ನು ಸೇರಿಸದೆ ಯಜ್ಞವೇದಿಕೆಯ ಸಮೀಪದಲ್ಲಿಯೇ ತಿನ್ನಬೇಕು. ಯಾಕೆಂದರೆ ಆ ಸಮರ್ಪಣೆಯು ಬಹಳ ಪವಿತ್ರವಾಗಿದೆ.